ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.
ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ
ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು
ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.