Site icon Vistara News

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Drowned in Water boy who went swimming drowned and died

ವಿಜಯನಗರ (ಹೊಸಪೇಟೆ): ಹಂಪಿಯ ಸ್ನಾನಘಟ್ಟದ ಬಳಿ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದಿದ್ದವನನ್ನು ರಕ್ಷಿಸಲು ಹೋಗಿದ್ದ ಯುವಕ ಮುಳುಗಿ (Drowned in Water) ಮೃತಪಟ್ಟಿರುವ ಘಟನೆ ಜರುಗಿದೆ.

ಮೈಸೂರು ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ವಿಜಯಪುರದ ಸಂಜು (24) ಮೃತ ದುರ್ದೈವಿ. ಮೈಸೂರಿನಿಂದ ಹಂಪಿಗೆ ಬಂದಿದ್ದ 12 ಜನರ ಕುಟುಂಬ ಸದಸ್ಯರು, ವಿರೂಪಾಕ್ಷೇಶ್ವರ ಗುಡಿ ಸಮೀಪದಲ್ಲಿ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮನ್ವಿತ್ ಎಂಬಾತ ಕಾಲು ಜಾರಿ ನದಿಗೆ ಬಿದ್ದಿದ್ದು, ಈತನನ್ನು ರಕ್ಷಿಸಲು ಹೋದ ಸಂಜು ಕೂಡ ಮುಳುಗಿದ್ದಾನೆ. ಇಬ್ಬರಿಗೂ ಈಜು ಬರುತ್ತಿರಲಿಲ್ಲ. ಈ ವೇಳೆ ಸ್ಥಳೀಯರಾದ ಮರಿಸ್ವಾಮಿ ಮತ್ತು ವೆಂಕಟೇಶ್ ಎಂಬುವವರು ಇಬ್ಬರನ್ನೂ ನೀರಿನಿಂದ ರಕ್ಷಣೆ ಮಾಡಿ ಹೊರತಂದರು.

ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

ಮೊದಲು ನದಿಗೆ ಬಿದ್ದಿದ್ದ ಮನ್ವಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಜುನನ್ನು ಕಮಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದ ವೇಳೆ ಮೃತಪಟ್ಟಿರುವ ಕುರಿತು ವೈದ್ಯರು ಖಚಿತಪಡಿಸಿದ್ದಾರೆ. ಈ ಕುರಿತು ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

ಬೆಂಗಳೂರು: ಉತ್ತರಾಖಂಡದ ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನಕ್ಕೆ (Uttarkashi Trekking Tragedy) ಸಿಲುಕಿ ಕರ್ನಾಟಕದ ನಾಲ್ವರು ಸೇರಿ 9 ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಾರಣಿಗರು, ಟೂರ್‌ ಗೈಡ್‌ಗಳು ಸೇರಿ 22 ಮಂದಿ ತಂಡವೊಂದು ಉತ್ತರಕಾಶಿಯ ಎತ್ತರದ ಸಹಸ್ತ್ರ ತಾಲ್‌ ಪ್ರದೇಶಕ್ಕೆ ಚಾರಣಕ್ಕೆ ತೆರಳಿದ್ದಾಗ ಪ್ರತಿಕೂಲ ಹವಾಮಾನದಿಂದ ಅಪಾಯಕ್ಕೆ ಸಿಲುಕಿತ್ತು. ಚಾರಣದಿಂದ ಹಿಂತಿರುಗುವಾಗ ಅಪಾಯಕ್ಕೆ ಸಿಲುಕಿದ್ದ 13 ಮಂದಿ ಪೈಕಿ 9 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61) ಆಶಾ ಸುಧಾಕರ್ (72)‌, ಪದ್ಮನಾಭನ್‌ ಕೆಪಿಎಸ್‌ (50), ವಿನಾಯಕ್‌ ಎಂದು ಗುರುತಿಸಲಾಗಿದೆ. ಇನ್ನು ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಸೇರಿ ಹಲವರನ್ನು ರಕ್ಷಣೆ ಮಾಡಲಾಗಿದೆ.

ಮೇ 29ರಂದು ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂವರು ಟೂರ್‌ ಗೈಡ್‌ಗಳು ಸೇರಿ 22 ಮಂದಿ ಸಹಸ್ತ್ರ ತಾಲ್‌ಗೆ ಚಾರಣಕ್ಕೆ ತೆರಳಿದ್ದರು. ಸಹಸ್ತ್ರ ತಾಲ್‌ನಿಂದ ಬೇಸ್‌ ಕ್ಯಾಂಪ್‌ಗೆ ಮರಳುತ್ತಿದ್ದಾಗ ಪ್ರತಿಕೂಲ ಹವಾಮಾನಕ್ಕೆ ಚಾರಣಿಗರು ಸಿಲುಕಿದ್ದಾರರೆ. ಈ ವೇಳೆ ಎರಡು ವಾಹನದಲ್ಲಿ 8 ಮಂದಿ ಬೇಸ್‌ ಕ್ಯಾಂಪ್‌ಗೆ ಮರಳಿದ್ದು, 13 ಮಂದಿ ಅಪಾಯದಲ್ಲಿ ಸಿಲುಕಿದ್ದರು. ಈ ಪೈಕಿ 9 ಮಂದಿ ಮೃತಪಟ್ಟಿದ್ದು, ಇನ್ನುಳಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ.

ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಚಾರಣಿಗರ ತಂಡವೊಂದು ಉತ್ತರಾಖಂಡದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಸಿಲುಕಿದೆ. ಪ್ರಸ್ತುತ ಕೆಲವರು ಈಗ ಕೊಹ್ಲಿ ಶಿಬಿರದಲ್ಲಿದ್ದಾರೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಸಲುವಾಗಿ ನಾವು ಈಗಾಗಲೇ ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಿದೆ. ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

ಈ ಬಗ್ಗೆ ಸಚಿವ ಕೃಷ್ಣ ಬೈರೆಗೌಡ ಪ್ರತಿಕ್ರಿಯಿಸಿ, ಉತ್ತರಾಖಂಡ್‌ನಲ್ಲಿ ರಾಜ್ಯದ ಟ್ರೆಕ್ಕಿಂಗ್ ಟೀಂ ಸಿಲುಕಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಲಾಗಿದೆ. ರಕ್ಷಣೆ ಸಂಬಂಧ ಉತ್ತರಾಖಂಡ ಸರ್ಕಾರದ ಜೊತೆ ಮಾತನಾಡಲಾಗಿದೆ. ಖುದ್ದು ತೆರಳಿ ಕಾರ್ಯಚರಣೆ ನೋಡಿಕೊಳ್ಳಿ ಎಂದು ಸೂಚಿಸಿದ್ದರಿಂದ ಡೆಹ್ರಾಡೂನ್‌ಗೆ ಹೊರಟಿರುವುದಾಗಿ ತಿಳಿಸಿದ್ದಾರೆ.

Exit mobile version