Site icon Vistara News

Drowning in water | ದನ ಮೇಯಿಸಲು ಹೋಗಿದ್ದ ಬಾಲಕರಿಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು

Two persons drowned in ganga river

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ (Drowning in water) ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕೃಷಿ ಹೊಂಡದ ಹತ್ತಿರ ದನ ಮೇಯಿಸಲು ಹೋಗಿದ್ದಾಗ ಈ ದುರ್ಘಟನೆ‌ ಸಂಭವಿಸಿದೆ. ರಮೇಶ್ (07), ಮಾಳಿಂಗರಾಯ (11) ಮೃತ ದುರ್ದೈವಿಗಳು. ಇವರು ದನ ಮೇಯಿಸಿಕೊಂಡು ಹೋಗಿದ್ದಾರೆ. ಈ ವೇಳೆ ಬಾಯಾರಿಕೆಯಾಗಿದೆ. ಹೀಗಾಗಿ ನೀರು ಕುಡಿಯಲೆಂದು ಕೃಷಿ ಹೊಂಡಕ್ಕೆ ಹೋಗಿದ್ದಾರೆ. ಆಗ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಇಬ್ಬರಿಗೂ ಈಜು ಬಾರದೇ ಇರುವುದರಿಂದ ದಡಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ಪೋಷಕರ ರೋದನೆ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ | Insurance scheme | ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Exit mobile version