Site icon Vistara News

Drowns in River: ಕೃಷ್ಣಾ ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

Drowns in River

ವಿಜಯಪುರ: ದೇವರ ಪಲ್ಲಕ್ಕಿಯೊಂದಿಗೆ ಕೃಷ್ಣಾ ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ (Drowns in River) ಜಿಲ್ಲೆಯ ಕೊಲ್ಹಾರ ಬಳಿ ನಡೆದಿದೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಲ್ಲಕ್ಕಿಯಲ್ಲಿ ದೇವಿಯ ವಿಗ್ರಹವನ್ನು ತೆಗೆದುಕೊಂಡು ಸ್ನಾನ ಮಾಡಿಸಲು ನದಿಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

ಕಾರಜೋಳ ಗ್ರಾಮದ ಸುದೀಪ(ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತರು. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಿ ವಿಗ್ರಹಗಳಿಗೆ ಸ್ನಾನ ಮಾಡಿಸಲು ನದಿಗೆ ಗ್ರಾಮಸ್ಥರು ತೆರಳಿದ್ದರು. ಈ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಇಬ್ಬರು ಬಾಲಕರ ಮೃತದೇಹ ಹೊರತೆಗೆದಿದ್ದಾರೆ.

ಇದನ್ನೂ ಓದಿ | Self Harming: ಬೆಂಗಳೂರಿನಲ್ಲಿ 19ನೇ ಮಹಡಿ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಮುಖಾಮುಖಿ ಡಿಕ್ಕಿಗೆ 2 ಕಾರುಗಳು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಔಟ್‌

ಶಿವಮೊಗ್ಗ : ಎರಡು ಕಾರುಗಳ (Car Accident) ನಡುವೆ ಭೀಕರ ಅಪಘಾತ (Road Accident) ನಡೆದಿದ್ದು, ಸ್ಥಳದಲ್ಲೇ ಕಾರು ಚಾಲಕ ದಾರುಣವಾಗಿ ಮೃತಪಟ್ಟಿದ್ದಾರೆ. ಶಿವಮೊಗ್ಗ (Shivamogga News) ತಾಲೂಕಿನ ನಿದಿಗೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ನಗರದ ಮೇಘರಾಜ್ ಮೃತ ದುರ್ದೈವಿ.

ಮೇಘರಾಜ್ ಮಾಚೇನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಕೆಲಸಕ್ಕೆಂದು ಕಾರಿನಲ್ಲಿ ತೆರಳುವಾಗ ಈ ಭೀಕರ ಅಪಘಾತ ನಡೆದಿದೆ. ವೇಗವಾಗಿ ಬಂದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೇಘರಾಜ್‌ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಎರಡು ಕಾರುಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಮತ್ತೊಂದು ಕಾರಿನೊಳಗೆ ಸಿಲುಕಿದ್ದ ವ್ಯಕ್ತಿಗೂ ಗಾಯವಾಗಿದ್ದು, ಮಹಿಳೆಯರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳಿಗೆ ಸ್ಥಳೀಯರು ಅಪಚರಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ಮಧ್ಯದಲ್ಲಿದ್ದ ಕಾರುಗಳನ್ನು ತೆರವುಗೊಳಿಸಿದ್ದಾರೆ.

ಇದನ್ನೂ ಓದಿ | Murder Case : ಬಹಿರ್ದೆಸೆಗೆ ತೆರಳಿದವನ ಹತ್ಯೆ; ಯುಗಾದಿ ಅಮಾವಾಸ್ಯೆ ದಿನ ಯಾದಗಿರಿಯಲ್ಲಿ ಚಿಮ್ಮಿತ್ತು ರಕ್ತ

ಚಿಕ್ಕಮಗಳೂರಲ್ಲಿ ಬೈಕ್‌ಗೆ ಮಿನಿ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೈಕ್ ಹಾಗೂ ಮಿನಿ ಲಾರಿ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ತೊಂಡವಳ್ಳಿ ಗ್ರಾಮದಲ್ಲಿ ನಡೆದಿದೆ. ಅಚ್ಚಡದಮನೆ ಗ್ರಾಮದ ನಿವಾಸಿ ಮಣಿ ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version