ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಈ ಸಮಯದಲ್ಲಿ ಮಾದಕ ವಸ್ತುಗಳಿಗೆ ಡಿಮ್ಯಾಂಡ್ ಜಾಸ್ತಿ ಇರುತ್ತದೆ. ಆದರೆ, ಚುನಾವಣಾ ಸಮಯದಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುವುದು ಪೆಡ್ಲರ್‌ಗಳಿಗೆ ದೊಡ್ಡ ತಲೆನೋವಾಗಿದೆ. ಹೆಜ್ಜೆ ಹೆಜ್ಜೆಗೂ ಚೆಕ್ ಪೋಸ್ಟ್‌ಗಳು ಇರುವುದರಿಂದ ಪೆಡ್ಲರ್‌ಗಳು ಮಾದಕ ವಸ್ತುಗಳ ಸರಬರಾಜು ಮಾಡಲು ಆಗುತ್ತಿಲ್ಲ. ಅವರ ಕಣ್ತಪ್ಪಿಸಿ ಗಾಂಜಾ ಸಾಗಾಟ ಮಾಡಲು ಹೊಸ ಮಾರ್ಗವೊಂದು ಕಂಡು ಹಿಡಿಯಲು ಹೋಗಿ ಸಿಕ್ಕಿಬಿದ್ದಿದ್ದಾರೆ.
ರೈಲು ಬೋಗಿಯ ತಳ ಭಾಗದಲ್ಲಿ ಗಾಂಜಾ ಬಚ್ಚಿಟ್ಟು ಸರಬರಾಜು ಮಾಡಲು ಮುಂದಾಗಿದ್ದ ನೆಟ್ವರ್ಕ್ ಅನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇದಿಸಿದ್ದು 130 ಕೆ.ಜಿಯಷ್ಟು ಗಾಂಜಾ ವಶಪಡಿಸಿಕೊಂಡಿದ್ದಾರೆ. ಚೆಕ್ ಪೋಸ್ಟ್‌ಗಳು ಹೆಚ್ಚಾಗಿ ಇರುವುದರಿಂದ ಅಕ್ರಮ ಸಾಗಾಟಕ್ಕೆ ರೈಲ್ವೆ ಮಾರ್ಗವನ್ನು ಬಳಸುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಇತ್ತು.
ಇದನ್ನೂ ಓದಿ: Weather Report: ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ; ಮಂಡ್ಯ, ಮೈಸೂರು ಸೇರಿ ಹಲವು ಜಿಲ್ಲೆಗಳಿಗೆ ಅಲರ್ಟ್
ಈ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರಿಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಕಳೆದು ಹತ್ತು ದಿನಗಳಿಂದ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿತ್ತು. ಗೋವಾದಿಂದ ಸಾಗಿಸುತ್ತಿದ್ದ ಮದ್ಯ ಹಾಗೂ ರಾಯಚೂರಿನಲ್ಲಿ 20 ಲಕ್ಷ ಹಣ ಸೀಜ್ ಮಾಡಿ, ಹಲವರ ಬಂಧನ ಮಾಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.