Site icon Vistara News

Drugs Case : ಅಕ್ರಮ ಗಾಂಜಾ ಮಾರಾಟ; ಮೂವರು ಆರೋಪಿಗಳು ಮಾಲು ಸಮೇತ ಬಂಧನ

kodagu drugs case

#image_title

ಮಡಿಕೇರಿ: ಅಕ್ರಮವಾಗಿ ಗಾಂಜಾ ಮಾರಾಟ (Drugs Case) ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27), ಅನಾರ್ ಹುಸೈನ್ (37)‌, ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದಾಜು ಸುಮಾರು 3.50 ಲಕ್ಷರೂ ವೆಚ್ಚದ 2.150 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿ ವೈ ಎಸ್ ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್, ಹರ್ಷ, ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್,ಚಾಲಕ ಷರೀಫ್ ಪಾಲ್ಗೊಂಡಿದ್ದರು.

ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ; ನದಿಯಲ್ಲಿ ಶವ ಪತ್ತೆ

ಕಡಬ (ಮಂಗಳೂರು): ಮಾರ್ಚ್‌ 31ರಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದೆ. ಶಿಕ್ಷಣ ಇಲಾಖೆ ಮತ್ತು ವಿದ್ಯಾರ್ಥಿಗಳು ಇದಕ್ಕೆ ಎಲ್ಲ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಇಷ್ಟರ ನಡುವೆಯೇ ಪರೀಕ್ಷೆ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (Student death) ಮಾಡಿಕೊಂಡಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್‌ ಗ್ರಾಮದಲ್ಲಿ ಅದ್ವೈತ್‌ ಶೆಟ್ಟಿ (15) ಎಂಬ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದ ಅದ್ವೈತ್‌ ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದ. ಮನೆಯಿಂದ ಹೊರಗೆ ಹೋದವನು ಕಣ್ಮರೆಯಾಗಿದ್ದ ಆತನಿಗಾಗಿ ಮನೆಯವರು ರಾತ್ರಿ ಇಡೀ ಹುಡುಕಾಟ ನಡೆಸಿದರು. ಬೆಳಗ್ಗೆವರೆಗೂ ಬಾಲಕ ಪತ್ತೆಯಾಗಿರಲಿಲ್ಲ.

ಗುರುವಾರ ಮುಂಜಾನೆಯೂ ಹುಡುಕಾಟ ಮುಂದುವರಿದಾಗ ಕುಮಾರಧಾರಾ ನದಿಯ ನಾಕೂರು ಗಯಾ ಎಂಬಲ್ಲಿ ನದಿಯ ಪಕ್ಕದಲ್ಲಿ ಸ್ಕೂಲ್ ಬ್ಯಾಗ್ ಪತ್ತೆಯಾಯಿತು. ಬಳಿಕ ಪುತ್ತೂರು ಅಗ್ನಿಶಾಮಕ ದಳದಿಂದ ನದಿಯಲ್ಲಿ ಶೋಧ ಕಾರ್ಯ ನಡೆಸಲಾಯಿತು. ಈ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಯಿತು.

ಕಡಬ ಹಾಗೂ ಬೆಳ್ಳಾರೆ ಪೊಲೀಸರು ಆಗಮಿಸಿದ್ದು, ಪೋಷಕರ ಬಳಿ ವಿವರಣೆ ಪಡೆದಿದ್ದಾರೆ. ಮನೆಯವರಿಗೂ ಈ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾರ್ಚ್‌ 31ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವುದರಿಂದ ಅದರ ಭಯದಿಂದಲೇ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ : Bhoota kola: ಕಡಬದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ

Exit mobile version