Site icon Vistara News

IndiGo Flight: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ದುರ್ವರ್ತನೆ ತೋರಿದ ಪ್ರಯಾಣಿಕ ಜೈಲಿಗೆ!

Passenger died hence hyderabad bound indigo flight landed in Karachi, Pakistan

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಗಗನಸಖಿಯರು ಸೇರಿ ವಿಮಾನದ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಜೈಪುರದಿಂದ ಹಾರಾಟ ಆರಂಭಿಸಿದ ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಆಗಮಿಸುತ್ತಲೇ ಸ್ಥಳೀಯ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ. ಕುಡಿದ ಮತ್ತಿನಲ್ಲಿ ಪ್ರಯಾಣಿಕರು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.

“ಜೈಪುರದಿಂದ ಇಂಡಿಗೋದ 6ಇ 556 ವಿಮಾನ ಹಾರಾಟ ಆರಂಭಿಸುತ್ತಲೇ ಪ್ರಯಾಣಿಕನು ಸಿಬ್ಬಂದಿ ಜತೆ ಅನುಚಿತವಾಗಿ ವರ್ತನೆ ತೋರಿದ್ದಾನೆ. ಸುಮ್ಮನೆ ಕೂರುವಂತೆ ವಿಮಾನದ ಸಿಬ್ಬಂದಿಯು ಎಷ್ಟು ಬಾರಿ ಹೇಳಿದರೂ ಪ್ರಯಾಣಿಕನು ಅಸಭ್ಯವಾಗಿ ವರ್ತಿಸಿದ್ದಾನೆ. ಹಾಗಾಗಿ, ಬೆಂಗಳೂರಿಗೆ ಬರುತ್ತಲೇ ಸ್ಥಳೀಯ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ” ಎಂದು ಇಂಡಿಗೋ ತಿಳಿಸಿದೆ. ಆತನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನದಲ್ಲಿ ಸಿಬ್ಬಂದಿ ಜತೆ ಪ್ರಯಾಣಿಕರು ಅನುಚಿತವಾಗಿ ವರ್ತಿಸುವ, ಜಗಳವಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಕೆಲ ತಿಂಗಳ ಹಿಂದಷ್ಟೇ, ಲಂಡನ್‌ನಿಂದ ಮುಂಬೈ ಏರ್ ಇಂಡಿಯಾ ವಿಮಾನದ ಪ್ರಯಾಣಿಕರೊಬ್ಬರು ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದರು. ಅವರ ಈ ಅಶಿಸ್ತಿನ ವರ್ತನೆಗಾಗಿ ಪ್ರಕರಣ ದಾಖಲಾಗಿತ್ತು. ಇನ್ನು ಕಳೆದ ವರ್ಷದ ನವೆಂಬರ್‌ನಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣದಲ್ಲಿ ನಿಯಮಗಳನ್ನು ಅನುಸರಿಸಲು ವಿಫಲವಾದ ಕಾರಣ ಏರ್ ಇಂಡಿಯಾಗೆ ಸಂಸ್ಥೆಗೆ 30 ಲಕ್ಷ ರೂ. ದಂಡ ವಿಧಿಸಲಾಯಿತು. 2022ರ ನವೆಂಬರ್ 26 ರಂದು ನ್ಯೂಯಾರ್ಕ್-ದಿಲ್ಲಿ ವಿಮಾನದಲ್ಲಿ ಶಂಕರ್ ಮಿಶ್ರಾ ಎಂಬ ಪ್ರಯಾಣಿಕರು ಕುಡಿದ ಅಮಲಿನಲ್ಲಿ ವಯಸ್ಸಾದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಈ ಪ್ರಕರಣ ಭಾರಿ ಸುದ್ದಿ ಮಾಡಿತ್ತು.

ಇದನ್ನೂ ಓದಿ: Air India: ಜೋರಾಗಿ ಮಾತಾಡಬೇಡಿ ಎಂದ ವಿಮಾನದ ಸಿಬ್ಬಂದಿಗೆ ಬೈದು, ಹಲ್ಲೆ ನಡೆಸಿದ ದುಷ್ಟ; ಈಗ ಕಂಬಿ ಹಿಂದೆ

ಒಬ್ಬಂಟಿ ಮಹಿಳಾ ಪ್ರಯಾಣಿಕರಿಗೆ ಪ್ರತ್ಯೇಕ ಆಸನ

ವಿಮಾನಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ದೃಷ್ಟಿಯಿಂದ ಒಬ್ಬಂಟಿ ಮಹಿಳಾ ಪ್ರಯಾಣಿಕರಿಗೆ ಸೀಟ್ ಹಂಚಿಕೆಯಲ್ಲಿ ಏರ್‌ ಇಂಡಿಯಾ ಅನುಕೂಲ ಕಲ್ಪಿಸುತ್ತಿದೆ. ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರು ಮತ್ತು ತಾಯಂದಿರಿಗೆ ವಿಮಾನಗಳಲ್ಲಿ ಪರ್ಯಾಯ ಆಸನಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಏರ್ ಇಂಡಿಯಾ (Air India) ಒದಗಿಸುತ್ತಿದೆ. ಅಂಥ ಪ್ರಯಾಣಿಕರಿಗೆ ಅನುಕೂಲಕ್ಕೆ ಹಜಾರ ಅಥವಾ ಕಿಟಕಿ ಆಸನವನ್ನು ನೀಡಬೇಕು ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಆಚೆ ಈಚೆ ಇಬ್ಬರು ಪುರುಷರು ಇರುವ ಮಧ್ಯದ ಸೀಟಿನಲ್ಲಿ ಪ್ರಯಾಣಿಸಲು ಒಬ್ಬಂಟಿ ಮಹಿಳೆಯರು ತೀವ್ರ ಮುಜುಗರಪಡುತ್ತಾರೆ. ಕೆಲವರು ದುರ್ವರ್ತನೆ ತೋರುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ಏರ್‌ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version