Site icon Vistara News

Karnataka Weather : ರಾಜ್ಯದಲ್ಲಿ ಕುಂಟುತ್ತಾ ಸಾಗುತ್ತಿದೆ ಮಳೆ

Rain News

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಲ್ಲಿ ಒಣ ಹವೆ ಮುಂದುವರಿಯುವ (Karnataka Weather) ಸಾಧ್ಯತೆಯಿದೆ.

ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಹಾಸನ, ಶಿವಮೊಗ್ಗದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಬಹುದು. ಕೋಲಾರ, ತುಮಕೂರು ಮತ್ತು ಚಿತ್ರದುರ್ಗದ ಅಲ್ಲಲ್ಲಿ ಮಳೆ ಸುರಿಯಬಹುದು. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ಇದನ್ನೂ ಓದಿ: Viral Video: ಯುವತಿಯನ್ನು ಚುಡಾಯಿಸಿದ್ದಕ್ಕೆ ಬೆಂಗಳೂರು ಪಬ್‌ನಲ್ಲಿ ಗಲಾಟೆ; ಅರೆನಗ್ನ ಸ್ಥಿತಿಯಲ್ಲಿ ಜಗಳ!

ಈ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ

ಕರಾವಳಿಯ ಉತ್ತರ ಕನ್ನಡ, ಉಡುಪಿ, ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿಯೂ ಸೇರಿದಂತೆ ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯನಗರದಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 20 ಡಿ.ಸೆ
ಗದಗ: 32 ಡಿ.ಸೆ – 20 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version