Site icon Vistara News

Puttur News: ಪುತ್ತೂರು ಪೊಲೀಸ್ ದೌರ್ಜನ್ಯದಿಂದ ಹರಿದು ಹೋದ ಕಿವಿ ತಮಟೆ;‌ 5 ಲಕ್ಷ ರೂ. ಪರಿಹಾರಕ್ಕೆ ಪುತ್ತಿಲ ಆಗ್ರಹ

Ear drum torn in Puttur police brutality Puttur News updates

ಪುತ್ತೂರು: ಆರೋಪಿಗಳ ವಿಚಾರಣೆಯ ನೆಪದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಸಂದರ್ಭದಲ್ಲಿ ಸಂತ್ರಸ್ತ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೊಗಳು ವೈರಲ್ ಆಗುತ್ತಿವೆ. ವರದಿಗಳು ವೈರಲ್‌ ಆಗುತ್ತಿದ್ದಂತೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ದ.ಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರನ್ನು ಭೇಟಿಯಾಗಿದ್ದಾರೆ. 5 ಲಕ್ಷ ರೂಪಾಯಿ ಪರಿಹಾರವನ್ನು ಕೊಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟವನ್ನು ಎದುರಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಭಾವಚಿತ್ರ ಇರುವ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣವು ಪುತ್ತೂರು ಬಸ್‌ ನಿಲ್ದಾಣದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಭಾರಿ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣ ಮತ್ತಷ್ಟು ತೀವ್ರ ಸ್ವರೂಪವನ್ನು ಪಡೆಯುವ ಲಕ್ಷಣ ಕಾಣುತ್ತಿದೆ.

ಇದನ್ನೂ ಓದಿ: Rain News: ಶುರುವಾಗಿದೆ ಮಳೆ ಅವಘಡ, ವರುಣಾರ್ಭಟಕ್ಕೆ ಎಲ್ಲೆಡೆ ಗಡಗಡ; ಗಾಳಿ-ಮಳೆಗೆ ಕುಸಿದ ಮನೆಗಳು

ಡಿವೈಎಸ್ಪಿಗೆ ಒತ್ತಡ ಹಾಕಿಸಿ ಬಿಜೆಪಿಯ ಕಾರ್ಯಕರ್ತರ ಮೇಲೆಯೇ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಮೇ 15ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ತೆರಳಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಬಿಡುಗಡೆ ಮಾಡಿಸಿಕೊಂಡು ಬಂದಿದ್ದರು. ಯುವಕರ ಬಳಿ ಮುಚ್ಚಳಿಕೆ ಬರೆಸಿಕೊಂಡು ಪೊಲೀಸರು ಮಧ್ಯರಾತ್ರಿ ಬಿಟ್ಟು ಕಳುಹಿಸಿದ್ದರು. ಎರಡು ದಿನಗಳ ಬಳಿಕ ಯುವಕರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪೊಲೀಸ್‌ ಇಲಾಖೆಯು ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಎಸ್ಐ, ಪುತ್ತೂರಿನ ಪೊಲೀಸ್ ಕಾನ್‌ಸ್ಟೆಬಲ್‌ ಮೇಲೆ ಪ್ರಕರಣ ದಾಖಲು ಮಾಡಿ ಎಸ್ಐ ಮತ್ತು ಪಿಸಿಯನ್ನು ಅಮಾನತು ಮಾಡಿತ್ತು. ಅಲ್ಲದೆ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಿ ಎಸ್‌ಪಿ ಆದೇಶ ನೀಡಿದ್ದರು.

ಗಾಯಾಳುವಿನ ಆರೋಗ್ಯವನ್ನು ವಿಚಾರಿಸಿದ್ದ ಕಲ್ಲಡ್ಕ ಪ್ರಭಾಕರ್‌ ಭಟ್

ಇದನ್ನೂ ಓದಿ: Panchamasali: ಪಂಚ ಶಾಸಕರರಿಗೆ ಸಚಿವ ಸ್ಥಾನ ನೀಡಿ: ಪಂಚಮಸಾಲಿ ಕಾರ್ಯಕಾರಿಣಿಯಲ್ಲಿ ಸರ್ಕಾರಕ್ಕೆ ಒತ್ತಾಯ

ಉಗ್ರ ಹೋರಾಟದ ಎಚ್ಚರಿಕೆ

ತೀವ್ರ ಗಾಯಗೊಂಡ ಅವಿನಾಶ್ ಅವರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿ ಬಂದಿತ್ತು ಎನ್ನಲಾಗಿದೆ. ಕೂಡಲೇ ದಕ್ಷಿಣ ಕನ್ನಡ ಎಸ್‌ಪಿ ವಿಕ್ರಂ ಅಮಾಟೆಯನ್ನು ಭೇಟಿಯಾದ ಅರುಣ್ ಕುಮಾರ್ ಪುತ್ತಿಲ ಎರಡು ದಿನದಲ್ಲಿ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷ ರೂಪಾಯಿಯಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Exit mobile version