ಗಂಗಾವತಿ: ಇಲ್ಲಿನ ಇಸ್ಲಾಂಪುರದ ಶ್ರಮಿಕರ (ಹಮಾಲರ) ಕಾಲೋನಿಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ (Students) ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು (Egg distribution program) ಹಮ್ಮಿಕೊಳ್ಳಲಾಗಿತ್ತು.
ಶಾಸಕ ಜಿ. ಜನಾರ್ದನರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ಇದುವರೆಗೂ ಕೇವಲ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಾತ್ರ ಮೊಟ್ಟೆ ವಿತರಿಸಲು ಅವಕಾಶವಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಇದೀಗ ಮೊಟ್ಟೆ ವಿತರಣೆಯನ್ನು ಹತ್ತನೇ ತರಗತಿವರೆಗೂ ವಿಸ್ತರಿಸಿದೆ
ಇದರಿಂದ ಮಕ್ಕಳಲ್ಲಿ ಅಪೌಷ್ಠಿಕತೆ ಕೊರತೆ ದೂರವಾಗಿ ಮಕ್ಕಳಲ್ಲಿ ಆರೋಗ್ಯ ವೃದ್ಧಿಯಾಗಲಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡುವ ಯೋಜನೆ ಸರ್ಕಾರ ರೂಪಿಸಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Agriculture APP : ರೈತರಿಗಾಗಿ AI ಆಧಾರಿತ ಆ್ಯಪ್ ಶೀಘ್ರ; ಕೃಷಿ ಇಲಾಖೆಯಿಂದ ಮಹತ್ವದ ಹೆಜ್ಜೆ
ಬಳಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ತಮ್ಮ ಬೆಂಬಲಿಗರೊಂದಿಗೆ ಅದೇ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸವಿದ ಶಾಸಕ ಜಿ. ಜನಾರ್ದನರೆಡ್ಡಿ, ಊಟದ ಗುಣಮಟ್ಟ ಪರೀಕ್ಷಿಸಿದರು. ಮಕ್ಕಳಿಗೆ ನೀಡುವ ಊಟದ ಬಗ್ಗೆ ಕೆಲ ಪಾಲಕರಿಂದ ಆಕ್ಷೇಪ ಕೇಳಿ ಬಂದಿವೆ.
ಮಕ್ಕಳಿಗೆ ನೀಡುವ ಊಟದ ಗುಣಮಟ್ಟದಲ್ಲಿ ರುಚಿಯಲ್ಲಿ ಕೊರತೆಯಾಗಬಾರದು. ಮುಖ್ಯವಾಗಿ ಅಡುಗೆ ಮಾಡುವ ಸ್ಥಳ, ಅಡುಗೆ ಸಿಬ್ಬಂದಿ ಸದಾ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶಾಲೆಯ ಮುಖ್ಯಶಿಕ್ಷಕರು ಈ ಬಗ್ಗೆ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Dental Health: ಸದಾ ಜಗಿಯುತ್ತಿರುವುದರಿಂದ ಹಲ್ಲುಗಳು ಗಟ್ಟಿಯಾಗುತ್ತವೆ ಅನ್ನೋದು ನಿಜವೆ?
ಈ ವೇಳೆ ಶಾಲೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.