Site icon Vistara News

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಮೈಸೂರಿನಲ್ಲಿ ರಸ್ತೆ ತಡೆ ನಡೆಸಿ ಕಾಂಗ್ರೆಸ್‌ ಪ್ರತಿಭಟನೆ

Congress Egg protest

ಮೈಸೂರು: ಮಡಿಕೇರಿಯಲ್ಲಿ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು

ವರುಣಾ ಕ್ಷೇತ್ರದ ಶಾಸಕರೂ ಆಗಿರುವ ಸಿದ್ದರಾಮಯ್ಯ ಪುತ್ರ ಯತೀಂದ್ರ ಮತ್ತು ಕೆ.ಆರ್‌. ಕ್ಷೇತ್ರದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ಅವರ ನೇತೃತ್ವದಲ್ಲಿ ಸಿಡಿದೆದ್ದ ಕಾಂಗ್ರೆಸ್‌ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ಕಾರ್ಯಕರ್ತರು ಭಾಗಿಯಾಗಿದ್ದ ಪ್ರತಿಭಟನೆಯಲ್ಲಿ ರಸ್ತೆಯಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಮನವಿ ಮಾಡಿದರು. ಆದರೆ, ಅವರ ಮನವಿಗೆ ಯಾರೂ ಕಿವಿಗೊಡಲಿಲ್ಲ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಹೊಡೆಯುವಾಗ ಪೊಲೀಸರು ಎಲ್ಲಿ ಹೋಗಿದ್ದರು ಎಂದು ತರಾಟೆ‌ಗೆ ತೆಗೆದುಕೊಂಡರು.

ರಾಮಸ್ವಾಮಿ ವೃತ್ತದಲ್ಲಿ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು. ಇಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆದು ವಾಹನಗಳು ಸಾಲುಗಟ್ಟಿದ್ದವು. ಸ್ವಲ್ಪ ಮಟ್ಟಿಗಿನ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಾಹನ ದಟ್ಟಣೆ ಆಗದಂತೆ ಕ್ರಮ ಕೈಗೊಂಡ ಪೊಲೀಸರು ಬೇರೆ ದಾರಿಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಆದರೆ, ಹೆಚ್ಚಿನವರು ಸಮಸ್ಯೆಗೆ ಒಳಗಾದರು.

ಇದನ್ನೂ ಓದಿ| Savarkar Issue | ಸಿದ್ದರಾಮಯ್ಯ ಕಾರಿಗೆ ಮಡಿಕೇರಿಯಲ್ಲಿ ಮೊಟ್ಟೆ ಎಸೆತ, ಕಪ್ಪು ಪಟ್ಟಿ ಪ್ರದರ್ಶನ!

Exit mobile version