Site icon Vistara News

Eid al Adha: ಬಕ್ರೀದ್‌ ದಿನ ಮಂಗಳೂರಲ್ಲಿ ಗೋವುಗಳ ಮಾರಣಹೋಮ ಆತಂಕ; ಜಿಲ್ಲಾಡಳಿತಕ್ಕೆ ಬಜರಂಗದಳ ಮೊರೆ

Fear of slaughter of cows in Mangalore and cow rescued in udupi

ಮಂಗಳೂರು: ಜೂನ್ 29ರಂದು ಮುಸ್ಲಿಂ ಸಮುದಾಯವು ಬಕ್ರೀದ್‌ (Eid al Adha) ಆಚರಣೆಗೆ ಸಜ್ಜಾಗಿದೆ. ಬಕ್ರೀದ್ ಹಬ್ಬದ (Bakrid festival) ಹಿನ್ನೆಲೆಯಲ್ಲಿ ಕುರ್ಬಾನಿ ಹೆಸರಿನಲ್ಲಿ ಸಾವಿರಾರು ಗೋವುಗಳ ಮಾರಣ ಹೋಮ ನಡೆಯುವ ಸಾಧ್ಯತೆ ಇದೆ ಎಂದು ಹಿಂದುಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗೋವುಗಳ ಹತ್ಯೆಯ ಆತಂಕ ಇರುವ ಹಿನ್ನೆಲೆಯಲ್ಲಿ ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಬಜರಂಗದಳವು ಜಿಲ್ಲಾಡಳಿತಕ್ಕೆ ಮೊರೆ ಇಟ್ಟಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ಕುರ್ಬಾನಿಗೆ ತಯಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಬರುತ್ತಿದೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಕ್ರಮ ಗೋ ಸಾಗಾಣಿಕೆ, ಗೋವುಗಳ ಬಲಿಯನ್ನು ತಡೆಯಬೇಕು. ಇಂದಿನಿಂದ ಜೂನ್ 30 ರವರೆಗೆ ಚೆಕ್ ಪೋಸ್ಟ್ ತೆರೆಯಬೇಕು. ಗೋಸಾಗಾಟ ತಡೆಯಲು ವಿಶೇಷ ಪೊಲೀಸ್ ತಂಡ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: POCSO Case: ಬಾಲಕಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದವನಿಗೆ 25 ವರ್ಷ ಜೈಲು

ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿ ಕುದ್ರುಬೆಟ್ಟುವಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಮೂರು ಹಸುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕರಿಕಲ್ಕಟ್ಟೆಯ ಚಂದ್ರ ಶೆಟ್ಟಿ (55) ಗುಡ್ಡೆಯಂಗಡಿ ನಿವಾಸಿ ಅಣ್ಣಪ್ಪ (65) ಬಂಧಿತ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿಯೊಂದಿಗೆ ಕಾರ್ಯಾಚರಣೆ ನಡೆಸಲಾಗಿತ್ತು. ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗುತ್ತಿದ್ದರು ಎಂಬ ದೂರು ಬಂದಿತ್ತು. ಜಾನುವಾರಗಳನ್ನು ವಧೆಗಾಗಿ ಕುಂದಾಪುರ ಕಡೆಗೆ ತೆರಳಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಕ್ರೀದ್‌ ಹಬ್ಬಕ್ಕೆ ಈ ಪ್ರಾಣಿಗಳನ್ನು ಕಡಿದರೆ ಜೈಲು ಶಿಕ್ಷೆ; ಬಿಬಿಎಂಪಿ ಆದೇಶ!

ಬೆಂಗಳೂರು: ಮುಸ್ಲಿಂ ಸಮುದಾಯದವರ ಪವಿತ್ರ ಹಬ್ಬ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಅಧಿನಿಯಮ 2020ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆಯನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿದ್ದರೆ ಅಂತಹ ವಿರುದ್ಧ ಕ್ರಮ ಜರುಗಿಸಲಾಗುತ್ತದೆ.

ಈ ಸಂಬಂಧ ಬಿಬಿಎಂಪಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ, ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಕೊಡುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನ, ಮಸೀದಿ ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಕೊಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಸ್ತೆಯಲ್ಲಿ, ಪಾದಚಾರಿ ಮಾರ್ಗ ಹಾಗೂ ಎಲ್ಲ ರೀತಿಯ ಆಸ್ಪತ್ರೆ ಆವರಣಗಳು, ನರ್ಸಿಂಗ್, ಶಾಲಾ- ಕಾಲೇಜು, ಆಟದ ಮೈದಾನ ಸೇರಿದಂತೆ ಉದ್ಯಾನವನ ಒಳಗೆ ಮತ್ತು ಹೊರಗೆ ಅಥವಾ ಇನ್ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂದರ್ಭಗಳಲ್ಲೂ ಅನಧಿಕೃತ ಪ್ರಾಣಿವಧೆ ಮಾಡುವಂತಿಲ್ಲ.

ಬಲಿ ಕೊಟ್ಟರೆ 6 ತಿಂಗಳ ಸಜೆ

ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧವಾಗಿದೆ. ಅಂಥವರಿಗೆ 6 ತಿಂಗಳ ಸಜೆ ಅಥವಾ ದಂಡ ಎರಡೂ ವಿಧಿಸಬಹುದಾಗಿದೆ. ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶ ಇದೆ. ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 5 ವರ್ಷ ಜೈಲು ಶಿಕ್ಷೆಯೂ ಇದೆ.

ಇದನ್ನೂ ಓದಿ: Vistara Impact: ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿ ಮಣ್ಣು ತೆಗೆಯುವವರ ವಿರುದ್ಧ FIRಗೆ ಸೂಚನೆ

ಯಾವುದನ್ನೂ ಕೊಲ್ಲುವಂತಿಲ್ಲ?

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ (ಕುರ್ಬಾನಿ/ವಧೆ) ಕೊಡುವುದನ್ನು ನಿಷೇಧಿಸಲಾಗಿದೆ. ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಸಾಗಾಟ ಮಾಡುವುದೂ ಸಹ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

Exit mobile version