Site icon Vistara News

ಹೊನ್ನಾವರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ; ಚಿತ್ರದುರ್ಗದಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು

suicide case

ಹೊನ್ನಾವರ/ಚಿತ್ರದುರ್ಗ: ಮನೆಯ ಕೋಣೆಯಲ್ಲಿ ಪತಿ ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದರೆ, ಚಿತ್ರದುರ್ಗ ತಾಲೂಕಿನ ಗಾರೇಹಟ್ಟಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ದಂಪತಿ ಆತ್ಮಹತ್ಯೆ

ಹೊನ್ನಾವರ ತಾಲೂಕಿನ ಬೈಲಗದ್ದೆ ನಿವಾಸಿಯಾಗಿದ್ದ ವೆಂಕ್ಟ ತಿಮ್ಮಪ್ಪ ನಾಯ್ಕ (65), ಆತನ ಪತ್ನಿ ಗೋಪಿ ನಾಯ್ಕ (60) ಮೃತ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯ ಜಂತಿಗೆ ಇಬ್ಬರೂ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ‌. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಗೃಹಿಣಿ ಅನುಮಾನಾಸ್ಪದ ಸಾವು

ಚಿತ್ರದುರ್ಗ: ಪ್ರೀತಿಸಿ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ಗಾರೇಹಟ್ಟಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ (22) ಅನುಮಾನಾಸ್ಪದವಾಗಿ ಸಾವಿಗೀಡಾದವರು. ಪತಿ ಚಿತ್ರಲಿಂಗಪ್ಪ ವಿರುದ್ಧ ಹತ್ಯೆ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: Kiccha Sudeepa: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಿಚ್ಚ ಸುದೀಪ್‌ ಮೆಚ್ಚುಗೆ: ಸುದ್ದಿಗೋಷ್ಠಿಯಲ್ಲಿ ಕಿಚ್ಚ ಹೇಳಿದ್ದೇನು?

ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದ ಪೂರ್ಣಿಮಾ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಬೇರೆ ಜಾತಿ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾರೆ ಎಂದು ಸಹ ಮೃತಳ ಸಂಬಂಧಿಕರಿಂದ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಮಹಿಳಾ‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ, ಅಟ್ರಾಸಿಟಿ ಹಾಗೂ ಹತ್ಯೆ ಪ್ರಕರಣ ದಾಖಲಾಗಿದೆ.

Exit mobile version