ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Election 2023) ಜೆಡಿಎಸ್‌ನಿಂದ ಯುವಕರಿಗೆ ಶೇಕಡಾ 30ರಷ್ಟು ಟಿಕೆಟ್ ನೀಡಬೇಕು ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಯುವಕರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯಕ್ಕೆ ಬರಬೇಕು. ಯವಕರಿಂದ ಪರಿಣಾಮಕಾರಿ ಕೆಲಸ ಸಾಧ್ಯ. ಅವರು ಸಾಧಿಸಿ ತೋರಿಸಬೇಕು. ಗೆಲ್ಲುವ ಅರ್ಹತೆ ಇರುವ ಯುವ ನಾಯಕರು ಟಿಕೆಟ್ ಕೇಳಬೇಕು. ಈ ನಿಟ್ಟಿನಲ್ಲಿ ನಾವು ಕೂಡ ಸರ್ವೇ ಮಾಡಿಸುತ್ತಿದ್ದೇವೆ. ಗೆಲ್ಲುವ ಸಾಮರ್ಥ್ಯ ಇರುವ ಯುವ ನಾಯಕರಿಗೆ ಟಿಕೆಟ್ ಕೊಡುತ್ತೇವೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಸಂಸದೆ ಸುಮಲತಾ ಬಗ್ಗೆ ಕಿಡಿ
ಮಳವಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಂಸದೆ ಸುಮಲತಾ ಅಂಬರೀಷ್ ತಡವಾಗಿ ಭೇಟಿ ಕೊಟ್ಟಿದ್ದಾರೆ. ಘಟನೆ ನಡೆದ ದಿನವೇ ಅವರು ಕುಟುಂಬದವರನ್ನು ಭೇಟಿ ಮಾಡಬೇಕಿತ್ತು. ಆದರೆ, ನಾಲ್ಕು ದಿನದ ಬಳಿಕ ಯಾವುದೋ ಕಾರ್ಯಕ್ರಮಕ್ಕೆ ಹೋದಾಗ ಭೇಟಿ ಮಾಡಿ ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇವರಿಗೂ ಮೊದಲೇ ಕ್ಷೇತ್ರದ ಜೆಡಿಎಸ್ ಶಾಸಕ ಅನ್ನದಾನಿ ಹಾಗೂ ನಾನು ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಆತ್ಮಸ್ತೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಬಾಲಕಿಯ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲೂ ಶಾಸಕ ಅನ್ನದಾನಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | 2023ರಲ್ಲಿ ಜೆಡಿಎಸ್ ಸರ್ಕಾರ ರಚನೆ ಖಚಿತ; ಕನಕಪುರ ಜನರ ಋಣ ತೀರಿಸುತ್ತೇನೆ ಎಂದ ಎಚ್‌ಡಿಕೆ