Election Politics: ಸಾಗರದಲ್ಲಿ ಶಾಸಕ ಹಾಲಪ್ಪಗೆ ಟಿಕೆಟ್ ಕೊಡಬೇಡಿ: ವರಿಷ್ಠರಿಗೆ ಆವಿನಹಳ್ಳಿ ಲೋಕೇಶ್ ಆಗ್ರಹ - Vistara News

ಕರ್ನಾಟಕ

Election Politics: ಸಾಗರದಲ್ಲಿ ಶಾಸಕ ಹಾಲಪ್ಪಗೆ ಟಿಕೆಟ್ ಕೊಡಬೇಡಿ: ವರಿಷ್ಠರಿಗೆ ಆವಿನಹಳ್ಳಿ ಲೋಕೇಶ್ ಆಗ್ರಹ

Election Politics: ಸಾಗರ ಕ್ಷೇತ್ರದಲ್ಲಿ ಶಾಸಕ ಹಾಲಪ್ಪ ಅವರ ಕಾರ‍್ಯವೈಖರಿಯು ಪಕ್ಷದ ಸಾಮಾನ್ಯ ಕಾರ‍್ಯಕರ್ತರಿಗೆ ಭ್ರಮನಿರಸನ ಉಂಟು ಮಾಡಿದೆ ಎಂದು ಆವಿನಹಳ್ಳಿ ಲೋಕೇಶ್ ಆರೋಪಿಸಿದ್ದಾರೆ. ನೊಂದ ಕಾರ್ಯಕರ್ತರ ಸಭೆ ನಡೆಸಲಾಗಿದ್ದು, ಇದರಲ್ಲಿ ಹಾಲಪ್ಪ ಅವರಿಗೆ ಈ ಬಾರಿ ಟಿಕೆಟ್‌ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ.

VISTARANEWS.COM


on

Avinahalli Lokesh hosanagar sagara
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತ ಆವಿನಹಳ್ಳಿ ಲೋಕೇಶ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: “ಸಾಗರದಲ್ಲಿ ಶಾಸಕ ಎಚ್. ಹರತಾಳು ಹಾಲಪ್ಪ (MLA Halappa) ಅವರ ಕಾರ‍್ಯ ವೈಖರಿಯು ಬಿಜೆಪಿ (BJP) ತತ್ತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಇದರಿಂದಾಗಿ ಪಕ್ಷದ ಕಾರ‍್ಯಕರ್ತರು ಎಂದು ಹೇಳಿಕೊಳ್ಳಲು ಕಾರ‍್ಯಕರ್ತರಿಗೆ ಮುಜುಗರವಾಗುತ್ತಿದೆ” ಎಂದು ಬಿಜೆಪಿ ಕಾರ್ಯಕರ್ತ ಆವಿನಹಳ್ಳಿ ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಆಲಗೇರಿಮಂಡ್ರಿಯ ನಾಗಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ (ಮಾ.23) ಬಿಜೆಪಿಯ ಕೆಲ ಕಾರ್ಯಕರ್ತರು ಏರ್ಪಡಿಸಿದ್ದ ಶಾಸಕರಿಂದ ನೊಂದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಅದು ಪಕ್ಷಕ್ಕೆ ಹಾಗೂ ಪಕ್ಷದ ಪ್ರತಿಯೊಬ್ಬ ಕಾರ‍್ಯಕರ್ತನಿಗೆ ಹೆಮ್ಮೆಯ ವಿಷಯ. ಆದರೆ ಸಾಗರ ಕ್ಷೇತ್ರದಲ್ಲಿ ಶಾಸಕ ಹಾಲಪ್ಪ ಅವರ ಕಾರ‍್ಯವೈಖರಿ ಪಕ್ಷದ ಸಾಮಾನ್ಯ ಕಾರ‍್ಯಕರ್ತರಿಗೆ ಭ್ರಮನಿರಸನ ಉಂಟು ಮಾಡಿದೆ. ಪಕ್ಷದ ಎಲ್ಲ ಸಿದ್ಧಾಂತಗಳನ್ನು ಅವರು ಗಾಳಿಗೆ ತೂರಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಬಿಜೆಪಿಗೆ ತನ್ನದೇ ಆದ ಸಿದ್ಧಾಂತವಿದೆ. ಅಲ್ಲಿ ಪಕ್ಷವೇ ಎಲ್ಲಕ್ಕಿಂತ ಹಿರಿದು, ವ್ಯಕ್ತಿ ಮುಖ್ಯವಲ್ಲ. ಸಾಗರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿಯೇ ಎರಡು ಬಣಗಳಾಗಿವೆ. ಪಕ್ಷದ ಸಿದ್ಧಾಂತ, ಹಿಂದುತ್ವಕ್ಕೆ ಬದ್ಧರಾಗಿರುವವರಿಗೆ ಶಾಸಕರಿಂದ ಯಾವುದೇ ಮಾನ್ಯತೆ ಇಲ್ಲ. ಬದಲಾಗಿ, ಅವರನ್ನು ಅತ್ಯಂತ ಕೀಳಾಗಿ ಕಾಣಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: Covid-19 : ಹೊಸ ಕೋವಿಡ್ ತಳಿಯ ತೀವ್ರತೆಗೆ ಯಾವುದೇ ಪುರಾವೆ ಇಲ್ಲ ಎಂದ ತಜ್ಞರು

“ದೇಶ, ರಾಜ್ಯದೆಲ್ಲೆಡೆ ನಿರಂತರವಾಗಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಹಾಗಾಗಿ ಸಾಗರ ಕ್ಷೇತ್ರದಲ್ಲಿ ನಡೆದಿರುವ ರಸ್ತೆ ಕಾಮಗಾರಿಗಳು ಏನೂ ವಿಶೇಷತೆಯಿಂದ ಕೂಡಿಲ್ಲ. ಸಿಗಂದೂರು ಸೇತುವೆ ಕಾಮಗಾರಿಯಲ್ಲಿ ಶಾಸಕರ ಪಾತ್ರವೇನೂ ಇಲ್ಲ. ಪಟಗುಪ್ಪ ಸೇತುವೆಯೊಂದೇ ಇವರ ಸಾಧನೆ. ಶಾಸಕ ಹಾಲಪ್ಪ ಅವರ ಕಾರ‍್ಯ ವೈಖರಿಯನ್ನು ಟೀಕಿಸಿದಲ್ಲಿ ಅವರನ್ನು ತಡೆಯಲು ಆಡಳಿತ ಯಂತ್ರದ ದುರುಪಯೋಗ ಆಗುತ್ತಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿ: ಮಕ್ಕಳ ಕಥೆ: ಶಿಷ್ಯ ಕಲಿತ ಪಾಠ- ಭಾಗ 2

ಪ್ರಶಾಂತ್ ಆವಿನಹಳ್ಳಿ ಮಾತನಾಡಿ, “ಹಿಂದೆ ಅಭಿವೃದ್ಧಿಯ ಹಿತದೃಷ್ಟಿಯಿಂದ ಹಾಲಪ್ಪ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಲು ಹಗಲಿರುಳು ಶ್ರಮಿಸಿದ್ದೇವೆ. ಆದರೆ, ಶಾಸಕರಾದ ಬಳಿಕ ಪಕ್ಷದ ಸಿದ್ಧಾಂತ ಉಳಿಸಲು ಅವರು ವಿಫಲರಾಗಿದ್ದಾರೆ. ಹಿಂದುಪರ ಸಂಘಟನೆಗಳನ್ನು ಅವರು ಕಡೆಗಣಿಸಿದ್ದಾರೆ. ಜಾತಿ ಹಾಗೂ ಹಣ ಬಲದಿಂದ ರಾಜಕಾರಣ ನಡೆಸುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರು, ನಿಸ್ವಾರ್ಥ ಸೇವೆ ಸಲ್ಲಿಸಿದವರು ಇಂದು ಮನೆಯಲ್ಲಿ ಉಳಿಯುವಂತಾಗಿದೆ. ಸಾಗರ ಕ್ಷೇತ್ರಕ್ಕೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಹಾಗೂ ಬಿಜೆಪಿಯ ತತ್ತ್ವ ಸಿದ್ಧಾಂತಗಳಿಗೆ ಬದ್ಧರಾಗಿರುವವರು ಅಭ್ಯರ್ಥಿಯಾಗಬೇಕು. ಕಮ್ಯುನಿಸ್ಟ್‌ ಮನಸ್ಥಿತಿ ಇಟ್ಟುಕೊಂಡವರು ಬಿಜೆಪಿಯಲ್ಲಿ ಇರುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಬದಲಾವಣೆ ಅಗತ್ಯವಿದೆ. ಪಕ್ಷದ ವರಿಷ್ಠರು ಈ ಬಗ್ಗೆ ಗಮನ ಹರಿಸುವ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ: Pushpa 2 Movie : ಪುಷ್ಪ 2 ಸಿನಿಮಾದಲ್ಲಿ ಸಲ್ಮಾನ್‌, ಶಾರುಖ್‌ ಖಾನ್‌ ನಟನೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ. ಆದರೆ, ಅವರಿಗೆ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಹೇಳಿಕೊಂಡಿದ್ದಾರೆ. ಜತೆಗೆ ಕುಟುಂಬದವರಿಗೆ 43 ಕೋಟಿ ರೂಪಾಯಿ ಸಾಲವನ್ನೂ ನೀಡಿದ್ದಾರೆ. ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿಯಷ್ಟು ಬೆಳ್ಳಿಯನ್ನು ಹೊಂದಿರುವ ಇವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇನ್ನು ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಅವರು ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh) ಅವರು ನಾಮಪತ್ರ ಸಲ್ಲಿಸಿದ್ದು, ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಇವರ ಹೆಸರಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲವಿದ್ದು, ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳಗೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಇದರಂತೆ ಡಿ.ಕೆ. ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂಪಾಯಿ ಆಗಿದೆ.

207 ಕೋಟಿ ರೂಪಾಯಿ ಸಾಲದಲ್ಲಿರುವ ಡಿಕೆಸು

ಡಿ.ಕೆ. ಸುರೇಶ್ ಹೆಸರಿನಲ್ಲಿ ಒಟ್ಟು 207 ಕೋಟಿ ರೂಪಾಯಿ ಸಾಲ ಇದೆ ಎಂದು ಅಫಿಡವಿಟ್‌ನಲ್ಲಿ ತೋರಿಸಲಾಗಿದೆ. ಇಷ್ಟಾದರೂ ಇದರಲ್ಲಿ ತಾಯಿ ಗೌರಮ್ಮ, ಅಣ್ಣ ಡಿ.ಕೆ. ಶಿವಕುಮಾರ್‌, ಅಣ್ಣನ ಮಕ್ಕಳಾದ ಐಶ್ವರ್ಯ ಹಾಗೂ ಮಗ ಆಕಾಶ್‌ ಕೆಂಪೇಗೌಡ ಅವರಿಗೂ ಸಾಲವನ್ನು ನೀಡಿದ್ದಾರೆ.

Lok Sabha Election 2024 DK Brothers hold roadshow in Ramanagara and DK Suresh file nomination

ಕುಟುಂಬದವರಿಗೆ ನೀಡಿದ ಸಾಲು ಎಷ್ಟು?

  • ತಾಯಿ ಗೌರಮ್ಮಗೆ ನಾಲ್ಕೂ ಮುಕ್ಕಾಲು ಕೋಟಿ ರೂಪಾಯಿ ಸಾಲ
  • ಅಣ್ಣ ಡಿಕೆ ಶಿವಕುಮಾರ್‌ಗೆ 30 ಕೋಟಿ ರೂಪಾಯಿ ಸಾಲ ಕೊಟ್ಟಿರುವ ಸುರೇಶ್
  • ಅಣ್ಣನ ಮಗಳು ಐಶ್ವರ್ಯಾಗೆ 8 ಕೋಟಿ ರೂಪಾಯಿ ಸಾಲ ನೀಡಿರುವ ಸುರೇಶ್
  • ಡಿಕೆಶಿ ಮಗ ಆಕಾಶ್‌ ಕೆಂಪೇಗೌಡಗೆ 1 ಕೋಟಿ ರೂಪಾಯಿ ಸಾಲವನ್ನು ಡಿ.ಕೆ. ಸುರೇಶ್ ನೀಡಿದ್ದಾರೆ

ಡಿ.ಕೆ. ಸುರೇಶ್‌ ಬಳಿ ಇದೆ ಒಂದೂ ಕಾಲು ಕೆಜಿ ಚಿನ್ನ!

ಚರಾಸ್ತಿ 106.71 ಕೋಟಿ ರೂಪಾಯಿ, ಸ್ಥಿರಾಸ್ತಿ 486.33 ಕೋಟಿ ರೂಪಾಯಿ, ಒಂದೂ ಕಾಲು ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ.

ರಾಮನಗರ ಜಿಲ್ಲಾಧಿಕಾರಿಗೆ ಸಂಸದ ಡಿ.ಕೆ. ಸುರೇಶ್‌ ಸಲ್ಲಿಸಿರುವ ಅಫಿಡವಿಟ್‌ ಪ್ರತಿ ಇಲ್ಲಿದೆ. ಪೂರ್ಣ ವಿವರ ಓದಲು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

ಇವರ ಬಳಿ ಸ್ವಂತ ಕಾರೂ ಇಲ್ಲ!

ತಮ್ಮ ಬಳಿ ಸ್ವಂತ ಕಾರು ಸಹ ಇಲ್ಲ ಎಂಬ ಮಾಹಿತಿಯನ್ನು ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಹೇಳಿದ್ದಾರೆ. 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಸುರೇಶ್ ಹೊಂದಿದ್ದಾರೆ.

5 ವರ್ಷಗಳಲ್ಲಿ 259.19 ಕೋಟಿ ರೂ. ಹೆಚ್ಚಳ

2019ರಲ್ಲಿ ಸುರೇಶ್ ಆಸ್ತಿ ಮೌಲ್ಯ 333.86 ಕೋಟಿ ರೂಪಾಯಿ ಆಗಿತ್ತು. 5 ವರ್ಷಗಳಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಈ ವೇಳೆ ಲುಲು ಮಾಲ್‌ಗೆ 3 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದಾಗಿ ಡಿ.ಕೆ. ಸುರೇಶ್‌ ಉಲ್ಲೇಖಿಸಿದ್ದಾರೆ. ಇನ್ನು ಅವರು ದ್ವಿತೀಯ ಪಿಯುಸಿವರೆಗೆ ವಿದ್ಯಾಭ್ಯಾಸ ಮಾಡಿದ್ದಾಗಿ ತಿಳಿಸಿದ್ದಾರೆ.

Continue Reading

ಬೆಂಗಳೂರು

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

SSLC Students Fight: ಬ್ಯಾಗ್‌ ಇಡುವ ವಿಚಾರಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪರೀಕ್ಷೆ ಮುಗಿಸಿ ಮನೆಗೆ ಹೋಗುವಾಗ ಮೂವರು ವಿದ್ಯಾರ್ಥಿಗಳಿಗೆ ಚಾಕು (Attempt to Murder Case) ಇರಿಯಲಾಗಿದೆ.

VISTARANEWS.COM


on

By

SSLC Students Fighting
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಹುಡುಗರ ಮಾರಾಮಾರಿ ನಡೆದಿದ್ದು, ಮೂವರು ವಿದ್ಯಾರ್ಥಿಗಳು ಚಾಕು (SSLC Students Fight) ಇರಿತಕ್ಕೊಳಗಾಗಿದ್ದಾರೆ. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ನಿನ್ನೆ ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಇದನ್ನೂ ಓದಿ:Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

ಕುಡಿಯುವ ನೀರಿಗಾಗಿ ಚಿಮ್ಮಿತು ರಕ್ತ; ಚಾಕು ಇರಿದು ಯುವಕನ ಕೊಲೆ

ಯಾದಗಿರಿ: ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕರ (Water Crisis) ಶುರುವಾಗಿದೆ. ಗಂಟೆಗಟ್ಟಲೇ ಕಾಯುತ್ತಾ, ಹಗಲಿರುಳು ಎನ್ನದೇ ನಲ್ಲಿ ಮುಂದೆ ಕೂರುವಂತಾಗಿದೆ. ಬರಗಾಲವು ತೀವ್ರವಾಗಿ ಆವರಿಸಿದೆ. ಈ ಮಧ್ಯೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಸಂಬಂಧಿಕರೇ ಕಿತ್ತಾಡಿಕೊಂಡಿದ್ದು, ರಕ್ತವನ್ನೇ (Murder Case) ಹರಿಸಿದ್ದಾರೆ.

ಕುಡಿಯುವ ನೀರಿಗಾಗಿ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದವನು. ಹಣಮಂತ ಹಾಗೂ ಹಣಮವ್ವ ಕೊಲೆ ಆರೋಪಿಗಳಾಗಿದ್ದಾರೆ. ನೀರಿನ ವಿಚಾರವಾಗಿ ನಂದಕುಮಾರನ ಅಜ್ಜಿ ಜತೆ ಆರೋಪಿಗಳು ಜಗಳವಾಡಿದ್ದರು.

ಹೊರಹೋಗಿ ಮನೆಗೆ ವಾಪಸ್‌ ಬಂದ ನಂದಕುಮಾರಗೆ ಗಲಾಟೆ ವಿಚಾರವನ್ನು ಅಜ್ಜಿ ತಿಳಿಸಿದ್ದರು. ಹೀಗಾಗಿ ಅಜ್ಜಿ ಜತೆ ನೀವೂ ಯಾಕೆ ಜಗಳ ಮಾಡಿದ್ದೀರಿ ಎಂದು ಮೊಮ್ಮಗ ನಂದಕುಮಾರ್‌ ಸಂಬಂಧಿಗಳಾದ ಹಣಮಂತ ಮತ್ತು ಹಣಮವ್ವರಿಗೆ ಪ್ರಶ್ನೆ ಮಾಡಿದ್ದ. ಇದೇ ವೇಳೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿದೆ. ಜಗಳವು ವಿಕೋಪಕ್ಕೆ ತಿರುಗಿದ್ದು, ನಂದಕುಮಾರ್‌ಗೆ ಹಾಗೂ ಈತನ ತಾಯಿಗೂ ಹಲ್ಲೆ ನಡೆಸಿದ್ದಾರೆ.

murder case Youth killed over drinking water dispute
ಕೊಲೆಯಾದ ನಂದಕುಮಾರ ಕಟ್ಟಿಮನಿ

ಇಷ್ಟಕ್ಕೆ ಸುಮ್ಮನಾಗದೆ ಹಣಮಂತ ಹಾಗೂ ಹಣಮವ್ವ ಎಂಬುವವರು ನಂದಕುಮಾರಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ಹುಣಸಗಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಣಮಂತ ಹಾಗೂ ಹಣಮವ್ಬ ಇಬ್ಬರನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Toll Hike: ಮತ್ತೆ ಟೋಲ್‌ ಬರೆ; ಬೆಂಗಳೂರು-ಮೈಸೂರು ಓಡಾಟ ಇನ್ನಷ್ಟು ದುಬಾರಿ

Toll Hike: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ (bengaluru mysuru expressway) ಟೋಲ್‌ ದರ ಹೆಚ್ಚಳವಾಗಿದ್ದು, ಏಪ್ರಿಲ್‌ 1ರಿಂದ ಪರಿಷ್ಕೃತ ದರ ಜಾರಿಯಾಗಲಿದೆ. ಹಾಗಾದರೆ ಯಾವ್ಯಾವ ವಾಹನಕ್ಕೆ ಎಷ್ಟು ಶುಲ್ಕ ನಿಗದಿ ಮಾಡಲಾಗಿದೆ.

VISTARANEWS.COM


on

By

toll hike
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೆಂಗಳೂರು-ಮೈಸೂರು ಹೆದ್ದಾರಿಯ (bengaluru mysuru expressway) ಟೋಲ್‌ ದರವನ್ನು ಹೆಚ್ಚಳ (Toll Hike) ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಟೋಲ್‌ ಬರೆ ಎಳೆದಿದೆ. ಏಪ್ರಿಲ್‌ 1ರಿಂದ ಪರಿಷ್ಕೃತ ದರವು ಜಾರಿಯಾಗಲಿದೆ.

ನಿಡಘಟ್ಟ, ಕಣಮಿಣಿಕ ಹಾಗೂ ಶೇಷಗಿರಿಹಳ್ಳಿ ಟೋಲ್‌ ಪ್ಲಾಜಾವರೆಗಿನ 56 ಕಿ.ಮೀ ಉದ್ದದ ಹೆದ್ದಾರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕರವು ಮಾಹಿತಿ ನೀಡಿದೆ. ಇದರೊಂದಿಗೆ ಹೆದ್ದಾರಿ ಟೋಲ್‌ ಎರಡು ಬಾರಿ ಪರಿಷ್ಕರಣೆಯಾಗಿದೆ.

ಪ್ರತಿ ಹಣಕಾಸು ವರ್ಷದಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ ಶುಲ್ಕ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಶುಲ್ಕದಲ್ಲೂ ಪರಿಷ್ಕರಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್‌ ಗುಪ್ತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಕಳೆದ ವರ್ಷ ಏಪ್ರಿಲ್‌ನಲ್ಲಿ ಟೋಲ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣಕ್ಕೆ ದರ ಹೆಚ್ಚಳವನ್ನು ಕೈ ಬಿಟ್ಟಿತ್ತು. ಆ ಬಳಿಕ ಜೂನ್‌ನಲ್ಲಿ ಏಕಾಏಕಿ ಶೇ.22ರಷ್ಟು ದರ ಹೆಚ್ಚಳಗೊಂಡಿತ್ತು. ಇದೀಗ 9 ತಿಂಗಳ ನಂತರ ಮತ್ತೆ ಟೋಲ್‌ ಏರಿಕೆ ಆಗಿದೆ.

ಯಾವ ವಾಹನಕ್ಕೆ ಎಷ್ಟು ಶುಲ್ಕ?

ವಾಹನಒನ್‌ ಸೈಡ್‌ರಿಟರ್ನ್‌ ಜರ್ನಿತಿಂಗಳ ಪಾಸ್‌(ಒನ್‌ಸೈಡ್‌)
ಕಾರು, ಜೀಪು, ವ್ಯಾನ್‌₹ 170₹ 255₹ 5,715
ಲಘು ವಾಹನ, ಮಿನಿ ಬಸ್‌2754159,230
2 ಆಕ್ಸೆಲ್‌ ಟ್ರಕ್‌/ಬಸ್‌58057019,345
3 ಆಕ್ಸೆಲ್‌ ವಾಣಿಜ್ಯ ವಾಹನ63595021,100
ಭಾರಿ ವಾಹನ (4-6 ಆಕ್ಸೆಲ್‌)‌9101,36530,335
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)1,1101,66036,930
ವಾಹನಹಳೆ ದರಹೊಸ ದರ ಹೆಚ್ಚಳ
ಕಾರು, ಜೀಪು, ವ್ಯಾನ್‌13517035
ಲಘು ವಾಹನ, ಮಿನಿ ಬಸ್‌22027555
2 ಆಕ್ಸೆಲ್‌ ಟ್ರಕ್‌/ಬಸ್‌460580120
3 ಆಕ್ಸೆಲ್‌ ವಾಣಿಜ್ಯ ವಾಹನ500635135
ಭಾರಿ ವಾಹನ (4-6 ಆಕ್ಸೆಲ್‌)720910190
ದೊಡ್ಡ ವಾಹನ (7ಕ್ಕಿಂತ ಹೆಚ್ಚು ಆಕ್ಸೆಲ್‌)8801,110880

ಇನ್ನೂ ಎಲ್ಲಾ ತರಹದ ವಾಹನಗಳು 24 ಗಂಟೆಯೊಳಗೆ ಹಿಂದಿರುಗಿ ಬಂದಲ್ಲಿ ಪಾವತಿಸಬೇಕಾದ ಟೋಲ್‌ನಲ್ಲಿ ಶೇ. 25ರಷ್ಟು ರಿಯಾಯಿತಿ ಸಿಗಲಿದೆ. ಅದೇ ರೀತಿ, ಎಲ್ಲಾ ವಾಹನಗಳು ಟೋಲ್‌ ಪಾವತಿ ದಿನದಿಂದ ಒಂದು ತಿಂಗಳೊಳಗೆ 50 ಬಾರಿ ಹೈವೆಯಲ್ಲಿ ಸಂಚಾರಿಸಿದ್ದರೆ ಶೇ. 35ರಷ್ಟು ರಿಯಾಯಿತಿ ಸಿಗಲಿದೆ. ಯಾವುದೇ ವಾಹನಗಳು ಅನುಮತಿಗಿಂತ ಹೆಚ್ಚಿನ ಸರಕು ಹೊಂದಿದ್ದರೆ ನಿಗದಿತ ಶುಲ್ಕಕ್ಕಿಂತ ಹತ್ತು ಪಟ್ಟು ಶುಲ್ಕ ಪಾವತಿಸಬೇಕಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ಲುತ್ತಾರೆ ಎಂಬುದು ನನಗೆ ಖಚಿತವಾಗಿ ಗೊತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah hugs DK Suresh in Bangalore Rural Lok Sabha constituency election campaign
Koo

ರಾಮನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ (DK Suresh) ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಃಸಿದ್ಧ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್‌ ಬೇಕೋ? ಬಿಜೆಪಿಯ ವೈಟ್‌ ಕಾಲರ್‌ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಬೇಕೋ ಎಂದು ಪ್ರಶ್ನೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಮಾತನಾಡಿ, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ?

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ವೋಟಿಗೂ ಘನತೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಯಾರು ಬೇಕು ನಿಮಗೆ?

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್, ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading
Advertisement
money guide
ಮನಿ-ಗೈಡ್2 mins ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ14 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ25 mins ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 202429 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್32 mins ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ32 mins ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್39 mins ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Henrich Klasen- IPL
ಪ್ರಮುಖ ಸುದ್ದಿ42 mins ago

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

Actor Govinda
ದೇಶ45 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

SSLC Students Fighting
ಬೆಂಗಳೂರು51 mins ago

SSLC Students Fight: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹೊಡಿಬಡಿ; ಮೂವರಿಗೆ ಚಾಕು ಇರಿತ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20245 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌