ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್ ರೇವಣ್ಣ ತಮ್ಮ ಕ್ಷೇತ್ರದ ಚುನಾವಣಾ ಫಲಿತಾಂಶ (Election Results 2024) ನೋಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಒಂದೆಡೆ ಹಾಸನದಲ್ಲಿ ಜೆಡಿಎಸ್ ಮುನ್ನಡೆಯಲ್ಲಿದ್ದರೆ, ಮತ್ತೊಂದೆಡೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಫಲಿತಾಂಶ ನೋಡಲಾಗದೆ, ಕೇಳಲಾಗದೆ ಪರಿತಪಿಸುತ್ತಿದ್ದಾರೆ.
ಹಾಸನದ ಮತ ಎಣಿಕೆ ತೀವ್ರ ಕುತೂಹಲ ಮೂಡಿಸಿದ್ದು, ಪ್ರಜ್ವಲ್ ರೇವಣ್ಣ ಒಮ್ಮೆ ಹಿನ್ನಡೆ, ಮತ್ತೊಮ್ಮೆ ಮುನ್ನಡೆ ಸಾಧಿಸುತ್ತಿದ್ದಾರೆ. ಸದ್ಯ ಪ್ರಜ್ವಲ್ 3009 ಮತಗಳ ಮುನ್ನಡೆಯಲ್ಲಿದ್ದಾರೆ. ಫಲಿತಾಂಶ ವೀಕ್ಷಿಸಲು ಟಿವಿ ವ್ಯವಸ್ಥೆ ಮಾಡಿ ಎಂದು ಎಸ್ಐಟಿ ಮುಂದೆ ಪ್ರಜ್ಬಲ್ ಬೇಡಿಕೆ ಇಟ್ಟಿದ್ದಾರೆ. ಆದರೆ, ಟಿವಿ ವ್ಯವಸ್ಥೆಗೆ ಕೋರ್ಟ್ ಅನುಮತಿ ಬೇಕೆಂದು ಎಸ್ಐಟಿ ತನಿಖಾಧಿಕಾರಿ ಹೇಳಿದ್ದಾರೆ. ಹೀಗಾಗಿ ಎಸ್ಐಟಿ ಸೆಲ್‌ನಲ್ಲಿ ಪ್ರಜ್ವಲ್ ಡಲ್ಲಾಗಿ ಅತ್ತಿಂದಿತ್ತ ಓಡಾಡಿಕೊಂಡಿದ್ದಾರೆ.
ಇದನ್ನೂ ಓದಿ | Election Results 2024 : ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭ; ಇವಿಎಂಗಳಲ್ಲಿದ್ದ ಪಕ್ಷಗಳ ಭವಿಷ್ಯ ಬಹಿರಂಗ
ಬೆಂ.ಗ್ರಾಮಾಂತರದಲ್ಲಿ ಡಾ.ಸಿ.ಎನ್.ಮಂಜುನಾಥ್ ಭರ್ಜರಿ ಮುನ್ನಡೆ
ಹೈ ವೋಲ್ಟೇಜ್ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ (Bangalore Rural Lok Sabha Constituency) ಮತ ಎಣಿಕೆ (vote counting) ಕಾರ್ಯ ಸಾಂಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ (Dr CN Manjunath) ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 9 ಗಂಟೆಯ ಹೊತ್ತಿಗೆ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಡಿ.ಕೆ ಸುರೇಶ್ (DK Suresh) ಅವರಿಗಿಂತ 50,000 ಮತಗಳ ಮುನ್ನಡೆ (Election results 2024) ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ | Election Result 2024: ವಾರಾಣಸಿಯಲ್ಲಿ ಮೋದಿಗೆ ಆಘಾತ; 6,223 ಮತಗಳ ಹಿನ್ನಡೆ
ಮಂಡ್ಯದಲ್ಲಿ ಎಚ್‌ಡಿಕೆ 33,168 ಮತಗಳ ಲೀಡ್
ಮಂಡ್ಯದಲ್ಲಿ ಜೆಡಿಎಸ್ (ಮೈತ್ರಿ ಅಭ್ಯರ್ಥಿ) ಎಚ್.ಡಿ.ಕುಮಾರಸ್ವಾಮಿ 33,168 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 26018 ಮತಗಳ ಮುನ್ನಡೆಯಲ್ಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ 7790 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 32936 ಮತಗಳ ಭಾರಿ ಮುನ್ನಡೆ ಸಾಧಿಸಿದ್ದಾರೆ.