ಎಲೆಕ್ಷನ್‌ ಹವಾ | ಕೊಪ್ಪಳ | ಕರಡಿ ವರ್ಸಸ್ ಹಿಟ್ನಾಳ್ ಫೈಟ್‌ ನಡುವೆ ಮೂರನೆಯವರ ಎಂಟ್ರಿ ಆಗಬಹುದೇ? - Vistara News

ಕರ್ನಾಟಕ

ಎಲೆಕ್ಷನ್‌ ಹವಾ | ಕೊಪ್ಪಳ | ಕರಡಿ ವರ್ಸಸ್ ಹಿಟ್ನಾಳ್ ಫೈಟ್‌ ನಡುವೆ ಮೂರನೆಯವರ ಎಂಟ್ರಿ ಆಗಬಹುದೇ?

ಸದಾ ಎರಡು ಕುಟುಂಬಗಳ ನಡುವಿನ ಜಿದ್ದಾಜಿದ್ದಿಗೇ ಕೊಪ್ಪಳ ಕ್ಷೇತ್ರ ಹೆಸರುವಾಸಿ. ಈ ಬಾರಿ ಮೂರನೇ ವ್ಯಕ್ತಿ ಕಣಕ್ಕಿಳಿಯುವ ಸಾಧ್ಯತೆಯಿದ್ದು, ಆಗಲೂ ಎರಡು ಕುಟುಂಗಳ ಫೈಟ್‌ ಮುಂದುವರಿಯುತ್ತದೆ ಎನ್ನುವುದು ವಾಸ್ತವ.

VISTARANEWS.COM


on

Election scenario in koppal assembly constituency
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೌನೇಶ್‌ ಬಡಿಗೇರ್‌, ಕೊಪ್ಪಳ
ಜೈನಕಾಶಿ ಎಂದು ಇತಿಹಾಸದಲ್ಲಿ ಕರೆಸಿಕೊಂಡಿರುವ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಕೊಪ್ಪಳ ವಿಧಾನಸಭಾ ಕ್ಷೇತ್ರವೂ ಒಂದು. ಜಾತ್ರೆಯ ಮೂಲಕ ದಕ್ಷಿಣ ಭಾರತದ ಮಹಾಕುಂಭಮೇಳ ಎಂದು ಪ್ರಸಿದ್ದಿ ಪಡೆದಿರುವ ಗವಿಸಿದ್ದೇಶ್ವರ ಮಠ, ಶಕ್ತಿ ದೇವತೆ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನವನ್ನು ಈ ಕ್ಷೇತ್ರ ಹೊಂದಿದೆ. ಕೊಪ್ಪಳ ತಾಲೂಕಿನ ಕಿನ್ನಾಳ ಭಾಗದ ಗ್ರಾಮಗಳು ಈ ಕ್ಷೇತ್ರ ವ್ಯಾಪ್ತಿಯಲ್ಲಿ ಇಲ್ಲ. ಇಂತಹ ಕೊಪ್ಪಳ ವಿಧಾನಸಭಾ ಕ್ಷೇತ್ರ ರಚನೆಯಾಗಿದ್ದು 1952 ರಲ್ಲಿ. ಆರಂಭದಲ್ಲಿಯೇ ಈ ಕ್ಷೇತ್ರದಲ್ಲಿ ಮೊದಲ ಮಹಿಳೆಯೊಬ್ಬರು ಶಾಸಕಿಯಾಗಿ ಆಯ್ಕೆಯಾಗಿದ್ದ ಕ್ಷೇತ್ರ. 1952 ರಲ್ಲಿ ಲೋಕಸೇವಕ ಸಂಘದ ಮಹಾದೇವಮ್ಮ ಎಂಬುವವರು ಈ ಕ್ಷೇತ್ರದ ಮೊದಲ ಶಾಸಕಿ. ಇವರಾದ ಬಳಿಕ ಮತ್ಯಾವ ಮಹಿಳೆಗೂ ಈ ಕ್ಷೇತ್ರದಲ್ಲಿ ಅವಕಾಶವೇ ದೊರಕಿಲ್ಲ. ಇಂತಹ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 1994 ರಿಂದಲೂ ಸಂಗಣ್ಣ ಕರಡಿ ಹಾಗೂ ಕೆ. ಬಸವರಾಜ ಹಿಟ್ನಾಳ್ ಕುಟುಂಬದ ನಡುವೆ ನಡೆಯುವ ಚುನಾವಣೆ ಎಂದೇ ಹೇಳಬಹುದು. ಈ ಎರಡೂ ಕುಟುಂಬಗಳಿಗೂ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗುತ್ತಾರೆ. ಪರ್ಯಾಯ ನಾಯಕರನ್ನು ಬೆಳೆಸುವ ಪ್ರಯತ್ನವೇ ಆಗಿಲ್ಲ.

ತಂದೆಯನ್ನು ಸೋಲಿಸಿದ್ದರು, ಮಗನಿಂದ ಸೋಲುಂಡರು

ಕೊಪ್ಪಳ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಿಟ್ನಾಳ್ ಕುಟುಂಬ ಹಾಗೂ ಕರಡಿ ಕುಟುಂಬಗಳು ಸಾಂಪ್ರದಾಯಿಕ ರಾಜಕೀಯ ಎದುರಾಳಿಗಳು. 1994 ರಿಂದಲೇ  ಸಂಗಣ್ಣ ಕರಡಿ ಹಾಗೂ ಕೆ. ಬಸವರಾಜ ಹಿಟ್ನಾಳ್ ಅವರು ವಿಧಾನಸಭಾ ಚುನಾವಣೆಯಲ್ಲಿ ಮುಖಾಮುಖಿಯಾಗುತ್ತಾ ಬಂದಿದ್ದಾರೆ. 1994 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸ್ಪರ್ಧಿಸಿ ಕರಡಿ ವಿಧಾನಸಭೆ ಹೊಕ್ಕಿದ್ದರು. ಅಲ್ಲಿಂದ ಬಳಿಕ 1999 ರಲ್ಲಿ ಜೆಡಿಯುನಿಂದ ಸ್ವರ್ಧಿಸಿದ್ದ ಸಂಗಣ್ಣ ಕರಡಿ ಗೆಲುವಿನ ನಗೆ ಬೀರಿದ್ದರು. ಆಗಲೂ ಸಹ ಕೆ. ಬಸವರಾಜ ಹಿಟ್ನಾಳ್ ಸೋಲುಂಡಿದ್ದರು. ಬಳಿಕ 2004 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಕೆ. ಬಸವರಾಜ ಹಿಟ್ನಾಳ್ ಕರಡಿ ಸಂಗಣ್ಣಗೆ ಸೋಲಿನ ರುಚಿ ತೋರಿಸಿದ್ದರು. ಮತ್ತೆ 2008 ರಲ್ಲಿ ಜೆಡಿಎಸ್‌ನಿಂದ ಕರಡಿ ಸಂಗಣ್ಣ ಗೆಲ್ಲುವ ಮೂಲಕ ಕಾಂಗ್ರೆಸ್‍ನ ಕೆ. ಬಸವರಾಜ ಹಿಟ್ನಾಳ್ ಗೆ ಮತ್ತೆ ಸೋಲಿನ ರುಚಿ ತೋರಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ  2011 ರಲ್ಲಿ ಸಂಗಣ್ಣ ಕರಡಿ ಜೆಡಿಎಸ್‍ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಗೊಂಡರು.

2011 ರಲ್ಲಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕರಡಿ ಸಂಗಣ್ಣ ಸ್ಪರ್ಧಿಸಿ ಗೆಲುವು ದಾಖಲಿಸಿದರು. ಆದರೆ ಕೊಪ್ಪಳ ಕ್ಷೇತ್ರದ ಮತದಾರ ಬದಲಾವಣೆ ಬಯಸಿದ್ದರಿಂದ  2013 ರಲ್ಲಿ ನಡೆದ ಕಾಂಗ್ರೆಸ್ ಕೆ ರಾಘವೇಂದ್ರ ಹಿಟ್ನಾಳ ಆಯ್ಕೆಯಾಗಿದ್ದರಿಂದ ಮತ್ತದೆ ಹಿಟ್ನಾಳ್ ಕುಟುಂಬದಿಂದ ಸಂಗಣ್ಣ ಕರಡಿ ಸೋಲಿನ ರುಚಿ ಉಣಬೇಕಾಯಿತು. ಅಲ್ಲದೆ ಜತೆಗೆ 2018 ರಲ್ಲಿ ಕೆ. ರಾಘವೇಂದ್ರ ಹಿಟ್ನಾಳ್ ಅವರೇ ಮರು ಆಯ್ಕೆಯಾಗುವ ಮೂಲಕ ತಮ್ಮ ತಂದೆ ಕೆ.ಬಸವರಾಜ ಹಿಟ್ನಾಳ ಅವರಿಗೆ ಸೋಲಿನ ರುಚಿ ಉಣಿಸಿದ್ದ ಸಂಗಣ್ಣ ಕರಡಿ ಕುಟುಂಬಕ್ಕೆ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡರು. ಪ್ರಸ್ತುತ ಕೊಪ್ಪಳ ಕ್ಷೇತ್ರದ ಶಾಸಕರಾಗಿರುವ ಕೆ. ರಾಘವೇಂದ್ರ ಹಿಟ್ನಾಳ, ಸಂಗಣ್ಣ ಕರಡಿಯಿಂದ ಅನೇಕ ಬಾರಿ ಸೋಲುಂಡಿರುವ ಕೆ. ಬಸವರಾಜ ಹಿಟ್ನಾಳ್ ಅವರ ಮಗನಾಗಿದ್ದಾರೆ.

ಪುತ್ರ ವ್ಯಾಮೋಹ

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಸಾಂಪ್ರದಾಯಿಕ ರಾಜಕೀಯ ಎದುರಾಳಿಗಳಾಗಿರುವ ಹಿಟ್ನಾಳ್ ಹಾಗೂ ಕರಡಿ ಕುಟುಂಬಗಳಲ್ಲಿ  ಪುತ್ರ ವ್ಯಾಮೋಹ ಇದ್ದೇ ಇದೆ. ಕಾಂಗ್ರೆಸ್‍ನ ಕೆ. ಬಸವರಾಜ ಹಿಟ್ನಾಳ್ ಅವರು ತಮ್ಮಿಬ್ಬರ ಮಕ್ಕಳ ರಾಜಕೀಯ ಭವಿಷ್ಯ ಕಟ್ಟುವ ಮತ್ತು ಭದ್ರಗೊಳಿಸುವ ನಿಟ್ಟಿನಲ್ಲಿ ಸಕ್ಸಸ್ ಆಗಿದ್ದಾರೆ ಎಂದೇ ಹೇಳಬಹುದು. 2011 ರ ಉಪಚುನಾವಣೆಯಲ್ಲಿ ಸೋತ ಬಳಿಕ ಕೆ. ಬಸವರಾಜ ಹಿಟ್ನಾಳ್ ಅವರು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದ ತಮ್ಮ ಮಗ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು 2013 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಾಜಕೀಯ ಹಾದಿ ಸುಗಮಗೊಳಿಸಿದರು.ಇನ್ನೊಬ್ಬ ಮಗ ಕೆ. ರಾಜಶೇಖರ್ ಹಿಟ್ನಾಳ್ ಅವರನ್ನು ರಾಜಕೀಯ ಮುನ್ನೆಲೆಗೆ ತಂದು ವಿಜಯನಗರ ಕ್ಷೇತ್ರದಲ್ಲಿ ಸ್ಪರ್ಧಿಗಿಳಿಯುವ ಸಿದ್ದತೆಯನ್ನು ಒಳಗೊಳಗೆ ಮಾಡಿದ್ದಾರೆ.

ಸಂಗಣ್ಣ ಕರಡಿ ಅವರೂ ಸಹ ತಮ್ಮ ಇಬ್ಬರು ಮಕ್ಕಳನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ಒಬ್ಬ ಮಗ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರೆ ಇನ್ನೊಬ್ಬ ಹಿರಿಯ ಮಗ ಅಮರೇಶ ಕರಡಿ ಕಳೆದ 2018 ರಲ್ಲಿ ನಡೆದ ಚುನಾವಣೆಯಲ್ಲಿ ಸೋಲನ್ನುಂಡರು. 2018 ರಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಸಂಗಣ್ಣ ಕರಡಿ ಅವರ ಪುತ್ರ ವ್ಯಾಮೋಹವೇ ಕಾರಣ ಎಂಬುದು ಎಲ್ಲೆಡೆ ಚರ್ಚೆಯಾಗುತ್ತಿರುವ ವಿಚಾರ. ಏಕೆಂದರೆ 2018 ರ ಚುನಾವಣೆಯಲ್ಲಿ ಬಿಜೆಪಿ ಸಿ.ವಿ. ಚಂದ್ರಶೇಖರ್ ಅವರಿಗೆ ಟಿಕೆಟ್‌ ಘೋಷಣೆ ಮಾಡಿತ್ತು. ಆದರೆ ಮಗ ಅಮರೇಶ ಕರಡಿ ಅವರ ಒತ್ತಡಕ್ಕೆ ಮಣಿದು ಬಿಜೆಪಿಯ ಬಿ ಫಾರಂ ತಂದು ಅಮರೇಶ ಕರಡಿಯನ್ನು ಸ್ಪರ್ಧೆಗಿಳಿಸಿದರು. ಈ ಬೆಳವಣಿಗೆಯಿಂದ ಕಾರ್ಯಕರ್ತರದಲ್ಲಿ ಸ್ಥಳೀಯ ಬಿಜೆಪಿಯಲ್ಲಿ ಅಸಮಧಾನ ಹೊಗೆಯಾಡುವಂತೆ ಮಾಡಿತು. ಜೊತೆಗೆ ಬಿಜೆಪಿ ಸೋಲಿಗೆ ಕಾರಣವಾಯಿತು.

2023 ಮುಖಾಮುಖಿ

2023 ರ ಚುನಾವಣೆಯಲ್ಲಿ ಮತ್ತದೆ ಕರಡಿ ಹಾಗೂ ಹಿಟ್ನಾಳ್ ಕುಟುಂಬಗಳು ಮುಖಾಮುಖಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಪ್ರಸ್ತುತ ಕೊಪ್ಪಳ ಲೋಕಸಭಾ ಸದಸ್ಯರಾಗಿರುವ ಸಂಗಣ್ಣ ಕರಡಿ ಅವರು ಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸಹ ಪ್ರಭಲ ಸ್ಪರ್ಧಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಪಕ್ಷದ ನಿಯಮದ ಪ್ರಕಾರ ವಯಸ್ಸಿನ ಕಾರಣ ನೀಡಿ ಸಂಗಣ್ಣ ಕರಡಿಗೆ ಟಿಕೆಟ್ ನೀಡದಿದ್ದರೂ ಪಕ್ಷಾಂತರ ಮಾಡಿಯಾದರೂ ಸ್ಪರ್ಧಿಸುವ ಸಾಧ್ಯತೆ ಇದೆ. ಏಕೆಂದರೆ ಒಮ್ಮೆಯಾದರೂ ಸಚಿವನಾಗಬೇಕು ಎಂಬುದು ಸಂಗಣ್ಣ ಕರಡಿ ಅವರ ಜೀವಮಾನದ ಆಸೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಕೊಪ್ಪಳ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಕ್ಷೇತ್ರ ಬಿಟ್ಟುಕೊಡುವುದಾಗಿ ಪ್ರಸ್ತುತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಹ ಹೇಳಿದ್ದಾರೆ.

ಒಂದು ವೇಳೆ ಸಿದ್ದರಾಮಯ್ಯ ಅವರು 2023 ರ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ ಆದರೆ ಬಿಜೆಪಿ ಸಹ ಸಂಗಣ್ಣ ಕರಡಿ ಅವರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಪ್ರಸ್ತುತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಕಣಕ್ಕಿಳಿಯಲಿದ್ದಾರೆ. ಬಹದ್ದೂರಬಂಡಿ ಏತ ನೀರಾವರಿ ಯೋಜನೆ, ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಿಸುವ ಮೂಲಕ ಪ್ರಸ್ತುತ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಹ ತಮ್ಮ ಗೆಲುವಿಗೆ ಬೇಕಾದ ತಯಾರಿ ಮಾಡಿಕೊಂಡಿದ್ದಾರೆ. ಆದರೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯ ಕೆ. ರಾಘವೇಂದ್ರ ಹಿಟ್ನಾಳ್ ಅವರೊಂದಿಗೆ ಒಳಗೊಳಗೆ ಮುನಿಸಿಕೊಂಡಿದ್ದು ಈ ಬಾರಿ ಹಿಟ್ನಾಳ್‍ ಗೆ ಕೈಕೊಡುವ ಸಾಧ್ಯತೆ ಇದೆ.

ಚಂದ್ರಶೇಖರ್‌ಗೆ ಅದೃಷ್ಟ?

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಬಾರಿಯೇ ಅಭ್ಯರ್ಥಿಯಾಗಿ ಘೋಷಣೆಯಾಗಿ ಕೊನೆ ಕ್ಷಣದಲ್ಲಿ ಬಿ ಫಾರಂ ಸಿಗದ ಸಿ.ವಿ. ಚಂದ್ರಶೇಖರ್ ಅವರಿಗೆ 2023 ರಲ್ಲಿ ಬಿಜೆಪಿ ಟಿಕೆಟ್‌ ಪಕ್ಕಾ ಎಂಬ ಮಾಹಿತಿ ಲಭ್ಯವಾಗಿದೆ. ತಮಗೆ ಈ ಬಾರಿ ಹೈಕಮಾಂಡ್ ಟಿಕೆಟ್‌ ನೀಡುವ ಭರವಸೆ ನೀಡಿದ್ದು ತಾವೇ ಅಭ್ಯರ್ಥಿ ಎಂದು ಸಿ.ವಿ. ಚಂದ್ರಶೇಖರ್ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಟಿಕೆಟ್‌ ತಪ್ಪಿದ್ದರಿಂದ ಆ ಅನುಕಂಪ ಈ ಬಾರಿ ಸಿ.ವಿ. ಚಂದ್ರ ಶೇಖರ್ ಅವರಿಗೆ ವರವಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಇಂತಹ ಸಂದರ್ಭದಲ್ಲಿ ಕರಡಿ ಸಂಗಣ್ಣ ಜೆಡಿಎಸ್‌ನಿಂದ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಆಗಲೂ ಕರಡಿ ವರ್ಸಸ್‌ ಹಿಟ್ನಾಳ್‌ ಕುಟುಂಬ ಫೈಟ್‌ ಮುಂದುವರಿಯಲಿದೆ.

ಸಂಭಾವ್ಯ ಅಭ್ಯರ್ಥಿಗಳು

  • ಸಂಗಣ್ಣ ಕರಡಿ, ಮಹಾಂತೇಶ ಪಾಟೀಲ್ ಮೈನಹಳ್ಳಿ, ಸಿ.ವಿ. ಚಂದ್ರಶೇಖರ್ (ಬಿಜೆಪಿ)
  • ಕೆ. ರಾಘವೇಂದ್ರ ಹಿಟ್ನಾಳ್ ,ಸಿದ್ದರಾಮಯ್ಯ (ಕಾಂಗ್ರೆಸ್)
  • ವೀರೇಶ ಮಹಾಂತಯ್ಯನಮಠ (ಜೆಡಿಎಸ್‍.) ವಯಸ್ಸಿನ ಕಾರಣ ನೀಡಿ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದರೆ ಸಂಗಣ್ಣ ಕರಡಿ ಜೆಡಿಎಸ್‍ಗೆ ಹಾರಬಹುದು. ಕೊನೆ ಕ್ಷಣದಲ್ಲಿ ಜೆಡಿಎಸ್‍ನ ಅಭ್ಯರ್ಥಿಯಾಗಬಹುದು)

ಚುನಾವಣಾ ಇತಿಹಾಸ

ಮತದಾರರ ಅಂಕಿಅಂಶ

ಇದನ್ನೂ ಓದಿ | ಎಲೆಕ್ಷನ್‌ ಹವಾ | ಗಂಗಾವತಿ | ಪರಣ್ಣ ವಿರೋಧಿ ಅಲೆಯ ಲಾಭ ಪಡೆಯುವ ಸೆಣೆಸಾಟದಲ್ಲಿ ಅನ್ಸಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest6 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest6 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest6 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest8 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest9 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest11 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest11 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest12 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌