ಶಿವಮೊಗ್ಗ: ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ (Electric shock) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸಾಗರ ನಗರದ ಶಾಂತಿ ನಗರದಲ್ಲಿ ಗುರುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ.
ಶಾಂತಿನಗರದ ನಿವಾಸಿ 33 ವರ್ಷದ ರೂಪ್ ಸಿಂಗ್ ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್ ಶಾಕ್ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನಲ್ಲೂ ಪಾರಿವಾಳ ಹಿಡಿಯುವ ಆತುರದಲ್ಲಿ ಇಬ್ಬರು ಬಾಲಕರು ಹೈಟೆನ್ಷನ್ ವಿದ್ಯುತ್ ತಂತಿ ಮುಟ್ಟಿ, ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಾರದ ಅಂತರದಲ್ಲಿ ಇಬ್ಬರೂ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬರು ಕರೆಂಟ್ ಶಾಕ್‌ನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ | Electric Shock | ಹೈಟೆನ್ಶನ್ ವೈರ್ ಸ್ಪರ್ಶಿಸಿ ಗಾಯಗೊಂಡಿದ್ದ ಬಾಲಕ ಚಂದ್ರು ಸಾವು