Site icon Vistara News

Elephant Attack : ಕಾಡಾನೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ 15 ಲಕ್ಷ ಪರಿಹಾರ

Elephant attack siddaramaiah Compensation

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಬುಧವಾರ ಬೆಳಗ್ಗೆ ಕಾಡಾನೆ ದಾಳಿಗೆ (Elephant Attack) ತುತ್ತಾಗಿ ಮೃತಪಟ್ಟ ಶ್ರಮಿಕ ಮಹಿಳೆ ಮೀನಾ (29) ಅವರ ಸಾವಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಕ್ಷಣದ 15 ಲಕ್ಷ ರೂ. ಪರಿಹಾರದ (15 Lakh rupees Compensation) ಚೆಕ್ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತ್ತು ಪಟ್ಟಣ ಪ್ರದೇಶಕ್ಕೆ ಬಂದಿರುವ ಕಾಡಾನೆಗಳನ್ನು ವಾಪಸ್‌ ಕಾಡಿಗೆ ಕಳುಹಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದರು.

ಮೃತ ಮೀನಾ ಅವರ ಮೃತದೇಹ ಇಟ್ಟುಕೊಂಡು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರ ಜತೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕಾಡಾನೆ ಹಾವಳಿ ತಪ್ಪಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದ್ದೇನೆ. ಅರಣ್ಯ ಸಚಿವರೂ ಇಲ್ಲಿಗೆ ಬಂದು ಸುದೀರ್ಘ ಸಭೆ ನಡೆಸಿ ರಕ್ಷಣಾ ಕಾರ್ಯಗಳ ಕುರಿತಾಗಿ ಕ್ರಮ ಕೈಗೊಳ್ಳುತ್ತಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ಬರುತ್ತಿವೆ. ರೈಲ್ವೇ ಫೆನ್ಸಿಂಗ್ ಹಾಕುವುದೂ ಸೇರಿ ಅಗತ್ಯ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್‌ಗೆ ಸ್ಪಷ್ಟ ಸೂಚನೆ ನೀಡಲು ಅರಣ್ಯ ಸಚಿವರ ಜತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾಡಾನೆಗಳಿಗೆ ಗುಂಡು ಹೊಡೆದು ಕೊಲ್ಲಬೇಕು ಎನ್ನುವ ಸ್ಥಳೀಯರ ಮತ್ತು ಪ್ರತಿಭಟನಾಕಾರರ ಒತ್ತಾಯದ ಕುರಿತಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆ ಹಂತಕ್ಕೆ ಯೋಚನೆ ಮಾಡುವುದು ಬೇಡ. ಇತರೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Elephant attack: ಕಾಡಾನೆ ತುಳಿತಕ್ಕೆ ಮತ್ತೊಬ್ಬ ಕಾರ್ಮಿಕ ಮಹಿಳೆ ಬಲಿ

ಆನೆಗಳ ಸ್ಥಳಾಂತರಕ್ಕೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಡಿಗೆರೆಯಲ್ಲಿ ಸುಮಾರು ಆನೆಗಳು ಕಾಡಿನಿಂದ ಬಂದಿವೆ. ಆನೆಗಳನ್ನು ಇಲ್ಲಿಂದ ಸ್ಥಳಾಂತರ ಮರಳಿ ಕಾಡಿಗೆ ಕಳುಹಿಸಲು ಶೀಘ್ರ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೂಡಿಗೆರೆಯಲ್ಲಿ ಆನೆ ತುಳಿತಕ್ಕೆ ಒಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಅರಣ್ಯಾಧಿಕಾರಿಗಳ ಸಭೆ ನಡೆಸಿದ್ದು. ಪ್ರತಿಭಟನೆ ಮಾಡುತ್ತಿದ್ದ ದೊಡ್ಡಯ್ಯ ಅವರೊಂದಿಗೆ ಮಾತನಾಡಿದ್ದೇನೆ. ಅರಣ್ಯ ಸಚಿವರು ಕೂಡ ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದರು. ಅರಣ್ಯ ಇಲಾಖೆ ಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ನಯನಾ ಮೋಟಮ್ಮ ಸೇರಿದಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿದ್ದು, ಆನೆಗಳನ್ನು ಸ್ಥಳಾಂತರ ಮಾಡಲಾಗುವುದು ಎಂದರು.

Exit mobile version