Site icon Vistara News

Elephant Attack: ತೋಟಕ್ಕೆ ಬಂದು ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು

elephants ajjavara

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ತೋಟದಲ್ಲಿನ ಕೆರೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ರಾತ್ರಿ ನಾಲ್ಕು ಕಾಡಾನೆಗಳು ಕೆರೆಗೆ ಬಿದ್ದಿವೆ. ಆಹಾರ ಅರಸುತ್ತಾ ಬಂದಿದ್ದ ಕಾಡಾನೆಗಳು ತೋಟದಲ್ಲಿ ಬಾಳೆ ಗಿಡ ಹಾಗೂ ಅಡಿಕೆ ಮರಗಳನ್ನು ಹುಡಿ ಮಾಡಿವೆ. ಬಳಿಕ ಆಯತಪ್ಪಿ ಕೆರೆಗೆ ಬಿದ್ದಿವೆ. ಕೆರೆಗೆ ಬಿದ್ದ ಆನೆಗಳಿಗೆ ಮೇಲೆ ಬರಲು ಸಾಧ್ಯವಾಗಿಲ್ಲ.

ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಕೆರೆಗೆ ಬಿದ್ದಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಸ್ಥಳೀಯರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಜೆಸಿಬಿ ಬಳಸಿ ಕೆರೆಯನ್ನು ಅಗಲಗೊಳಿಸಿ ಆನೆಗಳನ್ನು ಹೊರತೆಗೆಯುವ ಬಗ್ಗೆ ಚರ್ಚಿಸಲಾಗುತ್ತಿದೆ.

ಸುಳ್ಯ ತಾಲೂಕಿನ ಅಜ್ಜಾವರ, ಮಂಡೆಕೋಲು ಮುಂತಾದ ಭಾಗಗಳಲ್ಲಿ ಕಾಡಾನೆ ಹಾವಳಿ ಇದೆ. ಸನಿಹದ ಪುಷ್ಪಗಿರಿ, ಸಂಪಾಜೆ ರಕ್ಷಿತಾರಣ್ಯದಿಂದ ಇವು ಆಗಮಿಸುತ್ತವೆ ಎನ್ನಲಾಗಿದೆ.

ಬಾಲಕಿಯನ್ನು ಕೊಂದ ಕಾಡಾನೆ ಹರಸಾಹಸದಿಂದ ಸೆರೆ

ದಾವಣಗೆರೆ/ಶಿವಮೊಗ್ಗ: ದಾವಣಗೆರೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ಬಾಲಕಿಯೊಬ್ಬಳನ್ನು ಕಾಡಾನೆಯೊಂದು ಕೊಂದು ಹಾಕಿತ್ತು. ಆನೆಯನ್ನು (Elephant attack) ಸೆರೆ ಹಿಡಿಯಲು ಅರಣ್ಯ ಇಲಾಖೆ ಶತಪ್ರಯತ್ನ ನಡೆಸಿತ್ತು. ಈ ನಡುವೆ ಅರಿವಳಿಕೆ ಔಷಧ ನೀಡಲು ಹತ್ತಿರ ಹೋದ ವೈದ್ಯರನ್ನೇ ಆನೆಯು ಸೊಂಡಿಲಿನಿಂದ ಎತ್ತಿ ಎಸೆದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಮಂಗಳವಾರ (ಏ.11) ದಾವಣಗೆರೆ ಜಿಲ್ಲೆಯ‌ ನ್ಯಾಮತಿ ತಾಲೂಕಿನ ಜೀನಹಳ್ಳಿ ಗ್ರಾಮದ ಬಳಿ ಪುಂಡ ಕಾಡಾನೆಯನ್ನು (Operation Elephant) ಸೆರೆ ಹಿಡಿಯಲಾಗಿದೆ.

ಏ.8ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ಪುಂಡಾನೆಯ ದಾಂಧಲೆಗೆ ಕವನ (17) ಎಂಬ ಬಾಲಕಿ ಬಲಿಯಾಗಿದ್ದಳು. ಜಮೀನಿನಲ್ಲಿ ಅವರೆಕಾಯಿ ಬಿಡಿಸುತ್ತಿದ್ದಾಗ ಹಿಂದಿನಿಂದ ಬಂದು ಕಾಡಾನೆಯು ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡ ಕವನಾಳನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಳು. ಇತ್ತ ಕವನಾಳ ತಾಯಿ ಮಂಜುಳಾ ಸೇರಿ ಐವರು ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಪುಂಡಾನೆಯನ್ನು ಸೆರೆ ಹಿಡಿದು ಕಾಡಿಗೆ ಬಿಡುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ:

Exit mobile version