ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಜುಲೈ 7ರಂದು ಮಂಡಿಸಿದ 2023-24ನೇ ಸಾಲಿನ ಬಜೆಟ್ನಲ್ಲಿ ಇ ಆಡಳಿತಕ್ಕೆ ಒತ್ತು ನೀಡಲಾಗಿದೆ. ಸಾರ್ಜನಿಕ ಸೇವೆಗಳನ್ನು ತ್ವರಿತಗತಿಯಲ್ಲಿ ಮಾಡುವ ಉದ್ದೇಶದಿಂದ ಈ ಆಡಳಿಕ್ಕೆ ಪ್ರೇರಣೆ ಕೊಡಲಾಗಿದೆ. ಪ್ರಾಯೋಗಿಕವಾಗಿ ಆರು ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಒಂದು ದಿನದೊಳಗೆ ಸಾರ್ಜನಿಕ ಸೇವೆ ಮಾಡಿಕೊಡುವ ಭರವಸೆಯನ್ನು ಸರಕಾರ ನೀಡಿದೆ.
ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲೂಕು ಹಂತದ ಕಚೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲಾಗುತ್ತದೆ. ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್ ಎಂಡ್ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರುವುದಾಗಿ ಘೋಷಿಸಲಾಗದಿಎ.
100 ಪ್ರಮುಖ ಸೇವಾಸಿಂಧು ಸೇವೆಗಳನ್ನು ಸಕಾಲ ವಿನ್ಯಾಸಕ್ಕೆ ಅನುಗುಣವಾಗಿ ಪರಿವರ್ತಿಸಲು Business ProcessRe-engineering ಕೋಶ ಸ್ಥಾಪನೆಯಾಗಲಿದೆ. ಇದರಲ್ಲಿ ಪ್ರಮುಖವಾಗಿ ಆದಾಯ ಪ್ರಮಾಣ ಪತ್ರಕ್ಕಾಗಿ ಕುಟುಂಬ ಆದಾಯವನ್ನು ವಸ್ತುನಿಷ್ಠ ನಿರ್ಣಯ ರೂಪದಲ್ಲಿ ನಿಗದಿಪಡಿಸಲಾಗುತ್ತದೆ. ಈ ಯೋಜನೆಗಾಗಿ ಮೂರು ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಇದನ್ನೂ ಓದಿ : karnataka budget 2023 : ಬೆಂಗಳೂರಿನಲ್ಲಿ 100 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆ
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನವನ್ನು ಆಧರಿಸಿ ವೈಜ್ಞಾನಿಕ ಮತ್ತು ತರ್ಕಬದ್ದ ಮಾರ್ಗಸೂಚಿ ದರ ವ್ಯವಸ್ಥೆಯ ಭರವಸೆ ನೀಡಲಾಗಿದೆ.. ಎಲ್ಲಾ ರಸ್ತೆಗಳು ಮತ್ತು ಬೀದಿಗಳಿಗೆ ಹೊಂದಿಕೊಂಡಿರುವ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಹಾಗೂ ಅದರ ನಿಖರ ಮುದ್ರಾಂಕ ಶುಲ್ಕವನ್ನು ಆನ್‌ಲೈನ್ ನಲ್ಲಿ ಸಿಗಲಿದೆ. ಪ್ರಾಯೋಗಿಕವಾಗಿ ಈ ಯೋಜನೆ ಒಂದು ಜಿಲ್ಲೆಯಲ್ಲಿ ಪ್ರಾರಂಭವಾಗಲಿದೆ. ಹಂತಹಂತವಾಗಿ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಸರ್ಕಾರದ ವಿವಿಧ ಕಾರ್ಯಕ್ರಮ/ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖೆಗಳ ಮಧ್ಯೆ ಸಮನ್ವಯತೆ ಸಾಧಿಸಿ ಜಂಟಿ ನಿರ್ಧಾರ ಕೈಗೊಂಡು ಅನುಮೋದನೆ ನೀಡಲು ಅನುವಾಗುವಂತೆ ಜಿಐಎಸ್ (GIS) ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಭರವಸೆ ನೀಡಲಾಗಿದೆ.
ರಾಜ್ಯ ವಿಧಾನ ಮಂಡಲದ ಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಹಾಗೂ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪದ ಮಾಹಿತಿ ಸುಲಭವಾಗಿ ಲಭ್ಯವಾಗಿಸುವ ನಿಟ್ಟಿನಲ್ಲಿ ವಿಧಾನ ಮಂಡಲದ ಚಟುವಟಿಕೆಗಳ ಡಿಜಿಟಲೀಕರಣದ ಯೋಜನೆಯನ್ನು ಹೊಸದಾಗಿ ರೂಪಿಸಿ ಅನುಷ್ಠಾನವಾಗಲಿದೆ.
ಇನ್ನಷ್ಟು ಬಜೆಟ್ ಸಂಬಂಧಿತ ಸುದ್ದಿಗಳಿಗಾಗಿ ಈ ಲಿಂಕ್: ಬಜೆಟ್