ಮಂಗಳೂರು: ಜಾರಿ ನಿರ್ದೇಶನಾಲಯವು ಮಂಗಳೂರಿನ ಉದ್ಯಮಿಯೊಬ್ಬರಿಗೆ ಸೇರಿದ ಸುಮಾರು ೧೭ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿಯಾಗಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆಯಾಗಿದೆ ಎಂಬ ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಆಧಾರದಲ್ಲಿ ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆ ನಡೆಸಿತ್ತು. ಹ್ಯಾರಿಸ್ ಅವರು ಯುಎಇಯಲ್ಲಿ ಫ್ಲಾಟ್ ಹೊಂದಿರುವುದು, ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಹೂಡಿಕೆ ಮಾಡಿರುವುದು ತನಿಖೆಯ ಸಂದರ್ಭದಲ್ಲಿ ಕಂಡು ಬಂದಿತ್ತು
ಹೀಗಾಗಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಸಂಪಾದಿಸಿರುವ ಹಿನ್ನೆಲೆಯಲ್ಲಿ ಕ್ರಮ ಕ್ರಮ ಕೈಗೊಳ್ಳಲಾಗಿದೆ. ಹ್ಯಾರಿಸ್ ಅವರ ವಿದೇಶಿ ಆಸ್ತಿ ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಆಗಿದೆ.
ಇದು ಇದು ಫೆಮಾ ಕಾಯ್ದೆಯ ಸೆಕ್ಷನ್ 4ರ ಅನ್ವಯ ಕಾನೂನು ಉಲ್ಲಂಘನೆಯಾಗಿದೆ. ಕಾಯಿದೆ ಪ್ರಕಾರ ವಿದೇಶದಲ್ಲಿ ಮಾಡಿದ ಕಾನೂನುಬಾಹಿರ ಆಸ್ತಿಯನ್ನು ಭಾರತದಲ್ಲಿ ವಶಪಡಿಸಿಕೊಳ್ಳಲು ಇಡಿಗೆ ಅಧಿಕಾರವಿದೆ.
ಇದೇ ವೇಳೆ, ಮಂಗಳೂರಿನ ಎರಡು ಫ್ಲ್ಯಾಟ್ ಗಳು ಮತ್ತು ಒಂದು ಕೈಗಾರಿಕಾ ನಿವೇಶನವನ್ನು ಜಪ್ತಿ ಮಾಡಲಾಗಿದೆ. ಫೆಮಾ’ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಇಡಿ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ | Janardhana Reddy | ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ: ಸರಕಾರದ ವಿಳಂಬ ನೀತಿ ಪ್ರಶ್ನಿಸಿದ ಹೈಕೋರ್ಟ್