ನವದೆಹಲಿ: ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಕೇಂದ್ರ ಸರ್ಕಾರ ಶೇ.10ರಷ್ಟು ಮೀಸಲಾತಿ (EWS Reservation) ನೀಡಿರುವುದನ್ನು ಸುಪ್ರೀಂ ಕೋರ್ಟ್ ಮಾನ್ಯಗೊಳಿಸಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸ್ವಾಗತಿಸಿದ್ದಾರೆ. ಹಾಗೆಯೇ, “ಇದು ಸಾಮಾಜಿಕ ನ್ಯಾಯದ ಸಂಕೇತ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
“ಕೇಂದ್ರ ಸರ್ಕಾರ ನೀಡಿದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಬಡವರ ಕಲ್ಯಾಣದ ದಿಸೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಶ್ರೇಯಸ್ಸು ಸಲ್ಲುತ್ತದೆ. ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಇದು ಹೊಸ ದಿಕ್ಕು ನೀಡಲಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಸಿ.ಟಿ.ರವಿ ಸ್ವಾಗತ
ಸುಪ್ರೀಂ ಕೋರ್ಟ್ ತೀರ್ಪನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರೂ ಸ್ವಾಗತಿಸಿದ್ದಾರೆ. “ಬಡವರ ಕಲ್ಯಾಣದ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಯತ್ನಿಸಿದ ನರೇಂದ್ರ ಮೋದಿ ಅವರಿಗೆ ಸಿಕ್ಕ ದೊಡ್ಡ ಜಯ ಇದಾಗಿದೆ” ಎಂದು ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ | ವಿಸ್ತಾರ Explainer | ಏನಿದು EWS ಮೀಸಲು, ಯಾಕೆ ವಿರೋಧ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?