ಮಂಡ್ಯ: ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ಈಗಾಗಲೇ ರಾಷ್ಟ್ರೀಯ ಅಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಉಳಿದ 7-8 ತಿಂಗಳು ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪಕ್ಷ ತೀರ್ಮಾನಿಸುತ್ತದೆ. ಅವರ ಅವಧಿ ಮುಗಿದ ನಂತರ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಬಿಜೆಪಿ ಚುನಾವಣೆ ಎದುರಿಸಲಿದೆ ಎಂದು ಬಿಜೆಪಿ ಹೈಕಮಾಂಡ್ ಇತ್ತೀಚೆಗ ಸ್ಪಷ್ಟಪಡಿಸಿತ್ತು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲವೆಂದು ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ | Har Ghar Tiranga | ಮನೆಯಲ್ಲಿ ಧ್ವಜ ಹಾರಿಸಿ ಸಂಭ್ರಮಿಸಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ