ಧಾರವಾಡ: ಕೋಮುವಾದಿಗಳನ್ನು ಸೋಲಿಸಲು ಕೈ-ತೆನೆ ಒಂದಾಗಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರಾದರೂ, ಕೋಮುವಾದಿ ಅಭ್ಯರ್ಥಿಯನ್ನು ಸೋಲಿಸಬೇಕು ಅಂತಿದ್ದರೆ ಜೆಡಿಎಸ್ ಅಭ್ಯರ್ಥಿಯನ್ನೇ ಹಾಕಬೇಕಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಇದೇ ವೇಳೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರ ಕುರಿತು ವಿಶಿಷ್ಠವಾಗಿ ವ್ಯಾಖ್ಯಾನ ಮಾಡಿದ್ದಾರೆ. ಇದು ಹಲೋ ಮೀಟಿಂಗ್ ಅಷ್ಟೆ, ರಾಜಕೀಯ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ.
ನಗರದ ಜನತಾ ಶಿಕ್ಷಣ ಸಂಸ್ಥೆಗೆ ಬುಧವಾರ ಭೇಟಿ ನೀಡಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಗುರಿಕಾರ್ ಅವರ ಪರ ಮತ ಯಾಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ಗಿಂತ ಮೊದಲೇ ನಾವು ತೀರ್ಮಾನ ಮಾಡಿ ಎರಡನೇ ಅಭ್ಯರ್ಥಿ ಹಾಕಿದ್ದೇವೆ ನಾವು ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಹಾಕಿದ್ದೇವೆ.
ಗೆಲ್ಲಿಸಬೇಕು ಅಂತಿದ್ದರೆ ಅಭ್ಯರ್ಥಿಯನ್ನು ನಿವೃತ್ತಗೊಳಿಸಿ ನಮಗೆ ವೋಟ್ ಹಾಕಲಿ, ದೇವೇಗೌಡರು ರಾಜ್ಯಸಭೆಗೆ ನಿಂತಾಗ ನಾವು ಅಭ್ಯರ್ಥಿ ಹಾಕಿದ್ದೆವಾ?, ಕುಮಾರಸ್ವಾಮಿ ಬಳಿ 37 ಶಾಸಕರು ಇದ್ದರೂ ಕೂಡ ಬಿಜೆಪಿ ಅಧಿಕಾರಕ್ಕೆ ಬರಬಾರದು ಅಂತ ಅವರನ್ನೇ ಸಿಎಂ ಮಾಡಿದ್ದೆವು. ದೇವೇಗೌಡರು ಪ್ರಧಾನ ಮಂತ್ರಿ ಆಗೋಕೆ ನಾವು ಬೆಂಬಲ ನೀಡಿದ್ದೇವೆ. ನಮಗೆ ಈಗ ಅವರು ಬೆಂಬಲ ಕೊಡಲಿ ಎಂದರು.
ಏರ್‌ಪೋರ್ಟ್‌ನಲ್ಲಿ ಯಡಿಯೂರಪ್ಪ ಭೇಟಿ ವಿಚಾರ ಪ್ರತಿಕ್ರಿಯಿಸಿದ ಅವರು ನಮ್ಮದು ಹಲೋ ಹಲೋ ಅಷ್ಟೇ. ನಾನು ಅವರಿಗೆ ಹಲೋ ಹಲೋ ಅಂದೆ. ಯಡಿಯೂರಪ್ಪನೂ ಹಲೋ ಹಲೋ ಅಂದ್ರು. ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದರು.
ಇದನ್ನೂ ಓದಿ | ಚಡ್ಡಿ ಸುಡಲು ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದಿದ್ದಾರ ಸಿದ್ದರಾಮಯ್ಯ?