Site icon Vistara News

Class 5, 8 , 9 Exam Results: ಏ.8ರಂದು ಬೆಳಗ್ಗೆ 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶ ಪ್ರಕಟ

Exam Results

ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ (Summative Assessment-2) ಫಲಿತಾಂಶವನ್ನು (Class 5, 8 , 9 Exam Results) ಏಪ್ರಿಲ್ 8ರಂದು ಬೆಳಗ್ಗೆ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿದೆ.

ಇದನ್ನೂ ಓದಿ | Midday Meal: ಬೇಸಿಗೆ ರಜೆಯಲ್ಲೂ ಮಕ್ಕಳಿಗಿದೆ ಬಿಸಿಯೂಟ; ಎಲ್ಲಿ ಇದೆ ವ್ಯವಸ್ಥೆ?

ಈ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಏ.2 ರೊಳಗಾಗಿ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರುರವಾನಿಸಲು ಸೂಚಿಸಲಾಗಿತ್ತು. ಹೀಗಾಗಿ ಆಯುಕ್ತರ ಸುತ್ತೋಲೆಯಂತೆ ಏ.8ರಂದು ಸಮುದಾಯದತ್ತ ಶಾಲಾ ದಿನದಂದು 1 ರಿಂದ 9 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲು ಸೂಚಿಸಿರುತ್ತಾರೆ. ಅದೇ ರೀತಿ 5, 8 ಮತ್ತು 9ನೇ ತರಗತಿಗಳ ಮೌಲ್ಯಾಂಕನದ ಫಲಿತಾಂಶವನ್ನು ಏ.8 ರಂದು ಬೆಳಗ್ಗೆ 9 ಗಂಟೆಯೊಳಗೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಫಲಿತಾಂಶ ಪ್ರಕಟಿಸಬೇಕು ಎಂದು ಶಾಲೆಗಳ ಮುಖ್ಯಶಿಕ್ಷಕರು, ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.

SSLC Exam: 2023-24ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಕೀ ಉತ್ತರ ಪ್ರಕಟ; ಪರಿಶೀಲಿಸಲು ಹೀಗೆ ಮಾಡಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (Karnataka Secondary Education Examination Board) ಈ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಜತೆಗೆ ಈ ಮಾದರಿ ಉತ್ತರಗಳ ಮೇಲೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅವಕಾಶವನ್ನು ನೀಡಿದೆ (SSLC Exam).

ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಲಿಂಕ್ ಸಹ ತೆರೆಯಲಾಗಿದೆ ಎಂದು ತಿಳಿಸಿದೆ. ಆಕ್ಷೇಪಗಳನ್ನು ಏಪ್ರಿಲ್‌ 8ರ ಸಂಜೆ 5 ಗಂಟೆಯೊಳಗೆ ಮಂಡಲಿಯ ವೆಬ್‌ಸೈಟ್‌ ಮೂಲಕ ಸಲ್ಲಿಸಬೇಕು ಎಂದೂ ಸೂಚಿಸಿದೆ. ಈ ಮಾಹಿತಿಯನ್ನು ತಮ್ಮ ಜಿಲ್ಲೆಯ ವಿದ್ಯಾರ್ಥಿಗಳು / ಶಿಕ್ಷಕರಿಗೆ ತಿಳಿಸುವಂತೆ ಹೇಳಿದೆ. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷಢಪಣೆಗಳನ್ನು ಮಂಡಲಿ ಪರಿಗಣಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಗಮನಿಸಿ, ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ರಿಜಿಸ್ಟರ್ ನಂಬರ್ ಕಡ್ಡಾಯ. ಈ ರಿಜಿಸ್ಟರ್ ನಂಬರ್ ನಮೂದಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಮೊದಲೇ ಹೇಳಿದಂತೆ ಆಕ್ಷೇಪಣೆ ಸಲ್ಲಿಸಲು ಆನ್‌ಲೈನ್‌ ಮೂಲಕ ಮಾತ್ರ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ | NCERT Text: ಪಠ್ಯದಲ್ಲಿ ಬಾಬರಿ ಮಸೀದಿ, ಗುಜರಾತ್‌ ಗಲಭೆ, ಹಿಂದುತ್ವ ರಾಜಕೀಯ ಬದಲಾವಣೆ

ಕೀ ಉತ್ತರ ಪಡೆಯುವ ವಿಧಾನ

ಆಕ್ಷೇಪಣೆ ಸಲ್ಲಿಸುವ ವಿಧಾನ

Exit mobile version