Site icon Vistara News

ರಾಮನಗರಕ್ಕೆ ವಿದೇಶಾಂಗ ಸಚಿವ ಎಸ್​​. ಜೈಶಂಕರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

s jaishankar to ramanagar

ಬೆಂಗಳೂರು: ರಾಮನಗರ ಜಿಲ್ಲಾ ಕೇಂದ್ರದಲ್ಲಿ ಜುಲೈ 22ರಂದು ನಡೆಯುವ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ವಿದೇಶಾಂಗ ಸಚಿವ ಎಸ್​​. ಜೈಶಂಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಈ ಕುರಿತು ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಸೋಮವಾರ ಸಭೆ ನಡೆಸಿದರು. ಸಭೆಯ ನಂತರ ಮಾಹಿತಿ ನೀಡಿದ ಅಶ್ವತ್ಥನಾರಾಯಣ, ಅಂದು ಜಿಲ್ಲೆಯ ಎಲ್ಲ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ, ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.

ಕಾರ್ಯಕ್ರಮ ಬೃಹತ್ ಸ್ವರೂಪದಲ್ಲಿ ನಡೆಯಲಿದ್ದು, ಅಪಾರ ಸಂಖ್ಯೆಯ ಜನ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಜಾಗವನ್ನು ಶೀಘ್ರದಲ್ಲೆ ನಿರ್ಧರಿಸಲಾಗುವುದು. ಬೆಂಗಳೂರು ವಿವಿಗೆ ಕಾರ್ಯಕ್ರಮ ಆಯೋಜನೆಯ ಉಸ್ತುವಾರಿ ನೀಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್ಪಿ ಸಂತೋಷ್ ಅವರು ರಾಮನಗರದಿಂದ ವರ್ಚುಯಲ್ ನಲ್ಲಿ ಭಾಗವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್, ಕಲಾವಿದೆ ವೀಣಾಮೂರ್ತಿ, ರಾಮನಗರ ಪಿಜಿ‌ ಸೆಂಟರ್ ನಿರ್ದೇಶಕ ರಾಮಕೃಷ್ಣ ಉಪಸ್ಥಿತರಿದ್ದರು.

Exit mobile version