ಬೆಂಗಳೂರು: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ (Mysore sandal soap) ಘಟಕ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ಮೌಲ್ಯದ ಸೋಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಬಗ್ಗೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಅವರು ತೆಲಂಗಾಣ ಸರ್ಕಾರಕ್ಕೆ ದೂರು ನೀಡಿದ್ದರು. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಹೈದರಾಬಾದ್ ಪೊಲೀಸರು, ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿ 10,000ಕ್ಕೂ ಹೆಚ್ಚು ನಕಲಿ ಸೋಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (KSDL Bangalore) ಕಾರ್ಖಾನೆಯು ರಾಜ್ಯದಲ್ಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ತಯಾರಿಸುತ್ತಿದೆ. ಆದರೆ, ನಕಲಿ ಮೈಸೂರ್ ಸ್ಯಾಂಡಲ್ ಸೋಪ್ ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂಬಿ ಪಾಟೀಲ್ ಅವರಿಗೆ ವ್ಯಕ್ತಿಯೊಬ್ಬರಿಂದ ಕರೆ ಬಂದಿತ್ತು. ಬಳಿಕ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಿಗೆ ನಿಗಾ ವಹಿಸಲು ಸೂಚಿಸಿದ್ದರು.
ಇದನ್ನೂ ಓದಿ | Kidnap Case: ಹಾನಗಲ್‌ನಲ್ಲಿ ಮುಸ್ಲಿಂ ಮಹಿಳೆ ರೇಪ್ ಕೇಸ್ ಬೆನ್ನಲ್ಲೇ ಹಿಂದು ಯುವತಿಯ ಕಿಡ್ನ್ಯಾಪ್!
ಸಚಿವರ ದೂರು ಆಧರಿಸಿ ಕಾರ್ಯಾಚರಣೆ ನಡೆಸಿರುವ ತೆಲಂಗಾಣ ಪೊಲೀಸರು, ನಕಲಿ ಸೋಪ್ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲೇ ಹಸ್ತ ಮೈಥುನ; ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಎಚ್‌ಬಿಆರ್ ಲೇಔಟ್‌ನ 1 ನೇ ಹಂತದಲ್ಲಿ ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿಯೊಬ್ಬ ಹಸ್ತ ಮೈಥುನ ಮಾಡಿಕೊಂಡಿರುವುದು ಕಂಡುಬಂದಿದ್ದು, ಆತನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.
ಬಡಾವಣೆಯಲ್ಲಿ ಸಾಕಷ್ಟು ಬಾರಿ ವ್ಯಕ್ತಿ ಇದೇ ವರ್ತನೆ ತೋರಿದ್ದಾನೆ ಎನ್ನಲಾಗಿದೆ. ಲೇಔಟ್‌ನ ಮನೆಗಳ ಎದುರಿಗಿನ ಖಾಲಿ ಜಾಗದಲ್ಲಿ ಹೋಗಿ, ಮಹಿಳೆಯರು ಮತ್ತು ಮಕ್ಕಳ ಎದುರಿಗೆ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.