ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರು ತಾಲೂಕಿನ ಮಣಿವಾಲ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ (Family Dispute) ಬೇಸತ್ತ ದಂಪತಿ ಪೆಟ್ರೋಲ್ ಸುರಿದುಕೊಂಡು (Self Harming) ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆ ವೆಂಕಟಮ್ಮ ಸ್ಥಳದಲ್ಲೇ ಮೃತಪಟ್ಟಿದ್ದರೆ, ಶಿವಪ್ಪ ಗಂಭೀರ ಗಾಯಗೊಂಡಿದ್ದಾರೆ.
ವೆಂಕಟಮ್ಮ ಹಾಗೂ ಶಿವಪ್ಪ ದಂಪತಿ ನಡುವೆ ನಿತ್ಯವು ಒಂದಲ್ಲ ಒಂದು ವಿಷಯಕ್ಕೆ ಜಗಳವಾಗುತ್ತಿತ್ತು. ಇದರಿಂದ ಇಬ್ಬರು ದಾಂಪತ್ಯ ಜೀವನದಲ್ಲಿ ಉತ್ಸಾಹವನ್ನು ಕಳೆದುಕೊಂಡಿದ್ದರು. ಈ ದಂಪತಿ ದುಡುಕಿನ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: Fire Accident : ಹೋಟೆಲ್‌ನಲ್ಲಿ ಸ್ಟೀಮರ್ ಸ್ಫೋಟ; ಮೂವರು ಕಾರ್ಮಿಕರಿಗೆ ಗಾಯ
ಘಟನೆಯಲ್ಲಿ ವೆಂಕಟಮ್ಮ (38) ತೀವ್ರ ಸುಟ್ಟ ಗಾಯಗಳಿಂದ ನರಳಾಡಿ ಪ್ರಾಣ ಬಿಟ್ಟಿದ್ದಾರೆ. ಪತಿ ಶಿವಪ್ಪ ತೀವ್ರ ಸುಟ್ಟ ಗಾಯದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇತ್ತ ದಂಪತಿಯ ಕೂಗಾಟ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದ ವೆಂಕಟಮ್ಮ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಸುಟ್ಟ ಗಾಯದಿಂದ ನರಳಾಡುತ್ತಿದ್ದ ಶಿವಪ್ಪನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ