ನೆಲಮಂಗಲ: ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕುಡಿದ ಮತ್ತಲ್ಲಿ ಹೊಂಗೆ ಮರಕ್ಕೆ ನೇಣು ಬಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊದಲಕೋಟೆ ಗ್ರಾಮದ ನಿವಾಸಿ ಮಂಜುನಾಥ್ (44) ಮೃತ ದುರ್ದೈವಿ.
ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ್ ಇತ್ತೀಚೆಗೆ ಕೌಟುಂಬಿಕ ಕಲಹದಿಂದ ಬೇಸತ್ತಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ಮಂಜುನಾಥ್, ಗುರುವಾರ ಕುಡಿದ ಮತ್ತಿನಲ್ಲಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾನೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಪುತ್ತಿಗೆ ಸ್ವಾಮೀಜಿ ಕೈಯಲ್ಲಿ ʻಇಸ್ಲಾಂ ಭಯೋತ್ಪಾದನೆಯ ಧರ್ಮವಲ್ಲʼ ಪುಸ್ತಕ; ವಿವಾದಕ್ಕೆ ಶ್ರೀಮಠದ ಸ್ಪಷ್ಟೀಕರಣ ಏನು?