Site icon Vistara News

Electric Shock: ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

Electric Pole

ಬೀದರ್: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಮೃತಪಟ್ಟಿರುವ ಘಟನೆ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (61), ಶರಣಮ್ಮ (50) ಮೃತರು. ಹೊಲದಲ್ಲಿ ಜೋತುಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದರಿಂದ ಅವಘಡ ಸಂಭವಿಸಿದೆ. ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಹರಿದು 5 ಜಾನುವಾರು ಸಾವು

ಕೊಡಗು: ವಿದ್ಯುತ್ ಹರಿದು 5 ಜಾನುವಾರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಮತ್ತೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಲೆಮಾಡ ನಾಣಯ್ಯ ಅವರ 4 ಹಸು, 1 ಕರು ಗದ್ದೆಯಲ್ಲಿ ಮೇಯುತ್ತಿದ್ದಾಗ ವಿದ್ಯುತ್‌ ತಗುಲಿ ಅವಘಡ ಸಂಭವಿಸಿದೆ. ಶಿಥಿಲಾವಸ್ಥೆಯ ವಿದ್ಯುತ್ ಮಾರ್ಗವೇ ಘಟನೆ ಕಾರಣ ಎಂದು‌ ಸ್ಥಳೀಯರು ಆರೋಪಿಸಿದ್ದು, ಸೆಸ್ಕ್ ಇಲಾಖೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Road Accident : ಬೈಕ್‌ ಸವಾರರಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಪರಾರಿ

ಯಾದಗಿರಿ: ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಲಾರಿ ಗುದ್ದಿದ ರಭಸಕ್ಕೆ ಬೈಕ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣ (21), ಆಕಾಶ್‌ (19) ಮೃತರು.

ಕೃಷ್ಣ ಹಾಗೂ ಆಕಾಶ್‌ ಇಬ್ಬರು ಮಾತಾಮಾಣಿಕೇಶ್ವರಿ ನಗರದವರು ಎನ್ನಲಾಗಿದೆ. ಹೊಸಹಳ್ಳಿ ಕ್ರಾಸ್‌ ಬಳಿ ಬರುವಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತ ನಡೆಯುತ್ತಿದ್ದಂತೆ ಚಾಲಕ ಲಾರಿ ಬಿಟ್ಟು ಪರಾರಿ ಆಗಿದ್ದಾನೆ.

ಇದನ್ನೂ ಓದಿ | High Court : ಕೊಟ್ಟ ಹಣ ಮರಳಿ ಕೇಳುವುದು ಆತ್ಮಹತ್ಯೆಗೆ ಪ್ರಚೋದನೆ ಆಗಲ್ಲ ಎಂದ ಹೈಕೋರ್ಟ್‌

ಘಟನಾ ಸ್ಥಳಕ್ಕೆ ಯಾದಗಿರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version