Site icon Vistara News

Farmer Death : ಮಳೆ ಇಲ್ಲದೆ ಬೆಳೆ ನಾಶ; ಮನನೊಂದ ರೈತ ನೇಣಿಗೆ ಶರಣು

Farmer Parmeshwara commits suicide in Chikmagalur

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ (Farmer Death) ಶರಣಾಗಿದ್ದಾರೆ. ಪರಮೇಶ್ವರಪ್ಪ (52) ಆತ್ಮಹತ್ಯೆಗೆ ಶರಣಾದ ರೈತ.

ಎರಡು ದಿನಗಳ ಅಂತರದಲ್ಲಿ ಇಬ್ಬರು ರೈತರು ಚಿಕ್ಕಮಗಳೂರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಇಲ್ಲದೆ ಬೆಳೆ ನಾಶವಾದ ಹಿನ್ನೆಲೆ ಮನನೊಂದು ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರಮೇಶ್ವರಪ್ಪ 3 ಎಕರೆ ಜಮೀನನಲ್ಲಿ ಈರುಳ್ಳಿ ಬೆಳೆ ಹಾಕಿದ್ದರು. ಆದರೆ ಮಳೆಯಿಲ್ಲದೆ ಸಂಪೂರ್ಣ ನಾಶವಾಗಿತ್ತು. ಇತ್ತ ಕೃಷಿಗಾಗಿ ಬ್ಯಾಂಕ್, ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಇದನ್ನೂ ಓದಿ: Electric shock : ವಿದ್ಯುತ್‌ ಸ್ಪರ್ಶಿಸಿ ತಂದೆ- ಮಗ ದುರ್ಮರಣ

ಮಳೆ ನಂಬಿ ಈರುಳ್ಳಿ ಬೆಳೆದ ಬೆಳೆಗಾರ ಆತ್ಮಹತ್ಯೆ

ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ಬೇಸರಗೊಂಡ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈರುಳ್ಳಿ ಬೆಳೆಯಲು ಸಾಲ ಮಾಡಿದ್ದು, ಅದನ್ನು ತೀರಿಸುವುದು ಹೇಗೆ ಎಂಬ ಆತಂಕದಲ್ಲೇ ಸಾವಿಗೆ ಶರಣಾಗಿದ್ದಾರೆ. ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದ ಸತೀಶ್ (48), ಮಾಡಿಕೊಂಡ ಆತ್ಮಹತ್ಯೆ ಮಾಡಿಕೊಂಡ ರೈತ.

ಸತೀಶ್‌ ಕೃಷಿ ಪತ್ತಿನ ಸಹಕಾರ ಸಂಘ, ಸೇರಿದಂತೆ ವಿವಿಧ ಕಡೆ ಸಾಲ ಮಾಡಿದ್ದರು. ಈರುಳ್ಳಿ ಬೆಳೆ ನೀರಿಲ್ಲದೆ ಒಣಗಿದ್ದರಿಂದ ಅವರು ಮುಂದೆ ಸಾಲ ಮರುಪಾವತಿ ಮಾಡುವುದು ಹೇಗೆ ಎಂದು ಭಯದಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ ಬರಕ್ಕೆ ಈ ವರ್ಷ ಮೊದಲ ರೈತನ ಬಲಿಯಾದಂತಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version