ರಿಪ್ಪನ್‌ಪೇಟೆ: ಸಾಲಬಾಧೆ ತಾಳಲಾರದೆ ರೈತ ಕಳೆನಾಶಕ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Farmer Self Harming) ರಿಪ್ಪನ್‌ಪೇಟೆ ಪಟ್ಟಣ ಸಮೀಪದ ಕೆಂಚನಾಲ ಗ್ರಾಮದಲ್ಲಿ ಸೋಮವಾರ ಸಂಜೆ ಜರುಗಿದೆ.
ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತಪಟ್ಟ ರೈತ. ಮೃತ ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದಲ್ಲಿ 1.18 ಗುಂಟೆ ಜಮೀನು ಹೊಂದಿದ್ದು, ಅಡಕೆ ಹಾಗೂ ಶುಂಠಿ ಬೆಳೆಗಾಗಿ ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಸೇರಿದಂತೆ ಕೆಲ ಖಾಸಗಿ ಹಣಕಾಸು ಸಂಸ್ಥೆಗಳಿಂದ ಸುಮಾರು ಹತ್ತು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Road Accident: ಬಸ್-ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು, ಚಾಲಕನ ಸ್ಥಿತಿ ಗಂಭೀರ
ಕಳೆದ ಎರಡು ವರ್ಷಗಳಿಂದ ಹವಾಮಾನ ವೈಪರಿತ್ಯದಿಂದ ಬೆಳೆ ಕೈಕೊಟ್ಟ ಕಾರಣ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಅವರು ಕಳೆದ ಭಾನುವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳೆನಾಶಕ ಸೇವಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣವೇ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.
ಇದನ್ನೂ ಓದಿ: Child Rescued: ಆಟವಾಡುತ್ತ ಕೂದಲಿನ ಕ್ಲಿಪ್ ನುಂಗಿದ 10 ತಿಂಗಳ ಮಗು!
ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.