ಮೈಸೂರು: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನು ಹೊಂದಿದ್ದ ರೈತರಾಗಿದ್ದ ಇವರು ಬ್ಯಾಂಕ್, ಸೊಸೈಟಿ ಸೇರಿ 7 ಲಕ್ಷ ರೂ. ಸಾಲ ಮಾಡಿದ್ದಋು. ಬೆಳೆ ಕೈ ಕೊಟ್ಟ ಹಿನ್ನೆಲೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ ತಂಬಾಕು, ರಾಗಿ ಬೆಳೆ ಬೆಳೆದಿದ್ದರು. ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಹೆಚ್ಚಾಗಿದ್ದ ಬಡ್ಡಿ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್ಟಡ ತಳಪಾಯಕ್ಕೆ ಬಿದ್ದು ವ್ಯಕ್ತಿ ಸಾವು
ಮೈಸೂರು: ಕಟ್ಟಡಕ್ಕಾಗಿ ತೋಡಲಾದ ತಳಪಾಯದ ಗುಂಡಿಯಲ್ಲಿ ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕ್ರಿಸ್ಟೋ ಚೆರಿಯನ್ (34) ಸಾವಿಗೀಡಾದ ವ್ಯಕ್ತಿ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಇವರಾಗಿದ್ದಾರೆ.
ವಿಜಯನಗರ ಮೊದಲ ಹಂತದ ನಿವಾಸಿಯಾದ ಇವರು ವಿಜಯನಗರ ಮೊದಲ ಹಂತದ ಟ್ಯಾಂಕ್ ಬಳಿ ತೋಡಲಾಗಿದ್ದ ಗುಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಮದುವೆಯಾಗಿದ್ದ ಕ್ರಿಸ್ಟೋ ಮಾನಸಿಕವಾಗಿ ಖಿನ್ನರಾಗಿದ್ದರು ಎನ್ನಲಾಗಿದೆ. ವಿಜಯನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಹಲವು ಕೋನಗಳಲ್ಲಿ ನಡೆಯುತ್ತಿದೆ.
ಇದನ್ನೂ ಓದಿ: Youths Drowned: ನಂದಿಬೆಟ್ಟಕ್ಕೆ ಹೋಗಿದ್ದ ನಾಲ್ವರು ಯುವಕರು ಕೆರೆಯಲ್ಲಿ ಮುಳುಗಿ ಸಾವು