Site icon Vistara News

Cauvery Dispute: ಮೈಸೂರಿನಲ್ಲಿ ಸಚಿವ ಡಾ.ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

HC Mahadevappa talks with farmers

ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಗರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ.ಮಹದೇವಪ್ಪ ಅವರಿಗೆ ತಟ್ಟಿದೆ. ಪ್ರತಿಭಟನೆ ವೇಳೆ ರಸ್ತೆಯಲ್ಲಿ ಸಚಿವರ ಕಾರಿಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ನಡೆಯಿತು.

ಮುತ್ತಿಗೆ ವೇಳೆ ರೈತರನ್ನು ತಡೆದ ಪೊಲೀಸರು, ಬಳಿಕ ಅವರಿಗೆ ಮನವಿ ಸಲ್ಲಿಸಲು ಅವಕಾಶ ಮಾಡಿಕೊಟ್ಟರು. ಈ ವೇಳೆ ಮಹದೇವಪ್ಪರನ್ನು ತರಾಟೆಗೆ ತೆಗೆದುಕೊಂಡ ರೈತರು, ನಾವು ನಿಮಗೆ ಘೇರಾವ್ ಹಾಕಬೇಕು ಎಂದುಕೊಂಡಿದ್ದೆವು. ಆದರೆ, ಪೊಲೀಸರು ಸಚಿವರೇ ನಿಮ್ಮ ಬಳಿಗೆ ಬರುತ್ತಾರೆ ಎಂದರು. ನಿಮಗೆ ರೈತರ ಬಗ್ಗೆ ಕಾಳಜಿಯಿದೆ ಎಂದುಕೊಂಡಿದ್ದೇವೆ. 25 ಜನ ಸಂಸದರು ಕಾವೇರಿ ವಿಚಾರದಲ್ಲಿ ಒಂದು ಮಾತೂ ಆಡಿಲ್ಲ. ಮುಂದಿನ ದಿನಗಳಲ್ಲಿ ಸಂಸದರು ಕ್ಷೇತ್ರಗಳಿಗೆ ತೆರಳಲು ಬಿಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದರು.

ಡಿಕೆಶಿ ವಿರುದ್ಧ ಪರೋಕ್ಷವಾಗಿ ಎಚ್‌ಡಿಕೆ ವಾಗ್ದಾಳಿ | HD Kumaraswamy Warned MK Stalin Over Cauvery Dispute

ರೈತರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿ ಸ್ಥಳದಿಂದ ಮಹದೇವಪ್ಪ ಅವರು ನಿರ್ಗಮಿಸಿದರು.

ಇದನ್ನೂ ಓದಿ | Cauvery Dispute: ಕಾವೇರಿ ಸಮಸ್ಯೆ ಪರಿಹಾರಕ್ಕೆ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಲಿ ಎಂದ ಬೊಮ್ಮಾಯಿ

ಮಂಡ್ಯ ಬಂದ್‌ ಹಿನ್ನೆಲೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಎಚ್‌ಡಿಕೆ ಭಾಗಿ

ಮಂಡ್ಯ : ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹಲವು ರೈತ, ಕನ್ನಡಪರ ಸಂಘಟನೆಗಳಿಂದ ನಗರದ ಸಂಜಯ ವೃತ್ತದಲ್ಲಿ ಪ್ರತಿಪ್ರಟನೆ ನಡೆಸಲಾಯಿತು. ರೈತರ ಹೋರಾಟಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸೇರಿ ಹಲವು ರಾಜಕೀಯ ನಾಯಕರು ಬೆಂಬಲ ನೀಡಿದರು.

ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಬಳಿ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಿ ರಾಜ್ಯ ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿದರು. ಜೆಡಿಎಸ್ ಮುಖಂಡರಾದ ನಿಖಿಲ್ ಕುಮಾರಸ್ವಾಮಿ. ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಕೆಟಿ.ಶ್ರೀಕಂಠೇಗೌಡ ಸೇರಿ ಹಲವರು ಭಾಗಿಯಾಗಿದ್ದರು.

ಮಂಡ್ಯ ಬಸ್ ನಿಲ್ದಾಣ ಖಾಲಿ ಖಾಲಿ

ಮಂಡ್ಯ: ಬಂದ್ ಹಿನ್ನಲೆ ಬಸ್‌ಗಳಿಲ್ಲದೆ ನಗರದ ಬಸ್ ನಿಲ್ದಾಣ ಸಂಪೂರ್ಣ ಖಾಲಿಯಾಗಿತ್ತು. ನಿತ್ಯ ಬೆಂಗಳೂರಿನಿಂದ ಮೈಸೂರಿಗೆ ನೂರಾರು ಬಸ್‌ಗಳು ಓಡಾಡುತ್ತಿದ್ದವು. ಇದರ ಜತೆಗೆ ಗ್ರಾಮೀಣ ಸಾರಿಗೆ ಬಸ್ಸುಗಳ ಓಡಾಟಕ್ಕೂ ಬ್ರೇಕ್ ಬಿದ್ದಿತ್ತು. ರಸ್ತೆಗಳಲ್ಲಿ ವಾಹನ ಸಂಚಾರ ಬಹುತೇಕ ಸ್ತಬ್ದವಾಗಿತ್ತು.

ಕೆಆರ್‌ಎಸ್ ಅಣೆಕಟ್ಟೆಗೆ ಜೆಡಿಎಸ್ ನಿಯೋಗ ಭೇಟಿ

ಕೆಆರ್‌ಎಸ್ ಅಣೆಕಟ್ಟೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಭೇಟಿ ನೀಡಿ ನೀರಿನ ಮಟ್ಟ ಪರಿಶೀಲನೆ ನಡೆಸಿತು. ಈ ವೇಳೆ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಡಿ.ಸಿ.ತಮ್ಮಣ್ಣ ಸೇರಿದಂತೆ ಪ್ರಮುಖರು ಇದ್ದರು. ಆಯ್ದ ನಾಯಕರನ್ನು ಮಾತ್ರ ಡ್ಯಾಂ ವೀಕ್ಷಿಸಲು ಪೊಲೀಸರು ಅವಕಾಶ ಮಾಡಿಕೊಟ್ಟರು.

ಇದನ್ನೂ ಓದಿ | Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್‌

Exit mobile version