Site icon Vistara News

Murder Case: ಆಸ್ತಿ ವಿವಾದ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೈದ ತಂದೆ-ಮಗ

Murder by setting fire

ಶಿವಮೊಗ್ಗ: ಆಸ್ತಿ ವಿಚಾರಕ್ಕೆ ತಂದೆ-ಮಗ ಸೇರಿ ವ್ಯಕ್ತಿಯೊಬ್ಬರಿಗೆ ರಸ್ತೆಯಲ್ಲೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೈಕ್‍ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಆತನ ಅಣ್ಣ ಹಾಗೂ ಮಗ ಅಡ್ಡಗಟ್ಟಿ ಪೆಟ್ರೋಲ್ ಸುರಿದು ಸಜೀವವಾಗಿ ಸುಟ್ಟು (Murder Case) ಹಾಕಿದ್ದಾರೆ.

ಬೆಳಲಕಟ್ಟೆ ಗ್ರಾಮದ ಮಹೇಶಪ್ಪ (60) ಮೃತರು. ಸಹೋದರ ಕುಮಾರ್ ಹಾಗೂ ಆತನ ಮಗ ಕಾರ್ತಿಕ್ ಆರೋಪಿಗಳು. ಮಹೇಶಪ್ಪ ಬೆಳಲಕಟ್ಟೆಯಿಂದ ಬಿಕ್ಕೋನಹಳ್ಳಿಯ ಮಗಳ ಮನೆಗೆ ಹೋಗುತ್ತಿದ್ದಾಗ ಅಡ್ಡ ಹಾಕಿದ ಸಹೋದರ ಮತ್ತು ಆತನ ಮಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಮಹೇಶಪ್ಪನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾನೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಆಸ್ತಿ ಮಾರಾಟದ ವಿಚಾರಕ್ಕಾಗಿ ಅಣ್ಣ-ತಮ್ಮನ ನಡುವೆ ಒಂದು ವರ್ಷದಿಂದ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ, ಈ ಕಲಹ ಕೊಲೆಯಲ್ಲಿ ಅಂತ್ಯವಾಗಿದ್ದು, ಹತ್ಯೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮೃತ ವ್ಯಕ್ತಿಯು ಘಟನೆ ನಡೆದಾಗ ಅಳಿಯನಿಗೆ ಕರೆ ಮಾಡಿ ತನ್ನ ಹತ್ಯೆ ಮಾಡಿದ ಇಬ್ಬರ ಹೆಸರನ್ನು ಹೇಳಿದ್ದಾನೆ. ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಕೊಲೆ ಮಾಡಿದ ತಂದೆ ಮಗನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮೃತರ ಪುತ್ರಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Bomb Blast : ನಾಡಬಾಂಬ್ ಸಿಡಿದು ವ್ಯಕ್ತಿ ಕೈ ಛಿದ್ರ; ಹಾವೇರಿಯಲ್ಲಿ 7 ಜೀವಂತ ಬಾಂಬ್ ಪತ್ತೆ

ಮೈಸೂರು: ಪತಿಯೊಬ್ಬ ಪತ್ನಿಯ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ (Murder case) ಮಾಡಿರುವ ಘಟನೆ ನಡೆದಿದೆ. ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಸಿಟ್ಟಿಗೆ ಹತ್ಯೆಗೈದಿದ್ದಾನೆ. ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಎಂಬಾತ ಮಚ್ಚಿನಿಂದ ಮಹದೇವಸ್ವಾಮಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಪತ್ನಿ ಜತೆಗೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಸೋಮಯ್ಯ ಭಾವಿಸಿದ್ದ. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿ ಮೇಲೆ ಎರಗಿ ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮಹದೇವಸ್ಮಾಮಿಯನ್ನು ಕೊಲೆ ಮಾಡಿ ಸೋಮಯ್ಯ ಪರಾರಿ ಆಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್‌ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Exit mobile version