Site icon Vistara News

Shivamogga News: ಮೃತ ಮಗಳ ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ತಂದೆ

Samiksha

ಶಿವಮೊಗ್ಗ: ಮಗಳನ್ನು ಕಳೆದುಕೊಂಡ ದುಃಖದಲ್ಲೂ ಮತ್ತೊಬ್ಬರ ಬಾಳಿಗೆ ಬೆಳಕಾಗುವ ಉದ್ದೇಶದಿಂದ ಪುತ್ರಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ತಂದೆ ಸಾರ್ಥಕತೆ ಮೆರೆದಿರುವುದು ನಗರದಲ್ಲಿ ನಡೆದಿದೆ. ಪಾರ್ಕ್‌ನಲ್ಲಿ ಆಟವಾಡುತ್ತಿದ್ದಾಗ ಸಿಮೆಂಟ್ ಜಿಂಕೆ ಮುರಿದು ಬಿದ್ದು ಬಾಲಕಿ ಮೃತಪಟ್ಟಿದ್ದಳು. ಹೀಗಾಗಿ ಪುತ್ರಿಯ ಕಣ್ಣುಗಳನ್ನು ತಂದೆ ದಾನ ಮಾಡಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿಯಾದ ಹರೀಶ್ ಅವರ ಪುತ್ರಿ ಸಮೀಕ್ಷಾ (6) ಕಣ್ಣುಗಳನ್ನು ದಾನ ಮಾಡಲಾಗಿದೆ. ತಾಲೂಕಿನ ಮುದ್ದಿನಕೊಪ್ಪ ಟ್ರೀ ಪಾರ್ಕ್‌ನಲ್ಲಿ ಭಾನುವಾರ ಆಟವಾಡುತ್ತಿದ್ದಾಗ ಸಿಮೆಂಟ್ ಜಿಂಕೆ ಮುರಿದು ಬಿದ್ದು ಬಾಲಕಿ ಮೃತಪಟ್ಟಿದ್ದಳು. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tiger death : ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕಾರು; ಹುಲಿ ಸ್ಥಳದಲ್ಲೇ ಸಾವು

ಮೈಸೂರು: ವೇಗವಾಗಿ ಸಾಗುತ್ತಿದ್ದ ಕಾರೊಂದು ರಸ್ತೆ ದಾಟುತ್ತಿದ್ದ ಹುಲಿಗೆ ಡಿಕ್ಕಿ (Car hits tiger) ಹೊಡೆದು ಹುಲಿ ಸ್ಥಳದಲ್ಲೇ ಮೃತಪಟ್ಟಿದೆ (Tiger death). ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ (Mandakalli Airport) ಬಳಿ ಘಟನೆ ನಡೆದಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಸಾವು ಒಂದು ಕಡೆ ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದು ಕಡೆ ಮಂಡಕಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹುಲಿಗಳ ಸಂಚಾರವೂ ಆತಂಕ ಮೂಡಿಸಿದೆ. ಸುಮಾರು ಒಂದೂವರೆ ವರ್ಷದ ಗಂಡು ಹುಲಿ ಇದಾಗಿದೆ.

ಇದನ್ನೂ ಓದಿ | Attempt to murder: ಕುಡಿತಕ್ಕೆ ಕೊಡಲಿಲ್ಲ ಹಣ; ಪತ್ನಿ ತಲೆಗೆ ಕಲ್ಲು ಎತ್ತಿಹಾಕಿ ಕೋಮಾಗೆ ಕಳಿಸಿದ ಕುಡುಕ ಪತಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version