ಆನೇಕಲ್: ಮಚ್ಚಿನಿಂದ ಕೊಚ್ಚಿ ಮಗನನ್ನು ತಂದೆಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿದಾಗ ಮಗನನ್ನು ತಂದೆಯೇ ಹತ್ಯೆ (Murder Case) ಮಾಡಿದ್ದಾರೆ.
ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್‌ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ | Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!
ಬಾಸ್ಕೆಟ್ ಬಾಲ್ ಆಡುತ್ತಿದ್ದ ವಿದ್ಯಾರ್ಥಿನಿ ಸಾವು
ಆನೇಕಲ್: ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ. ಚಾರ್ವಿ (16) ಮೃತ ಬಾಲಕಿ. ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕ್ರೇನ್ ಸೀಲಿಂಗ್ ಕಟ್ ಆಗಿ ಬಾವಿಗೆ ಬಿದ್ದ ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ!
ಚಿಕ್ಕೋಡಿ: ಬಾವಿಯಲ್ಲಿ ಕೆಲಸ ಮಾಡುವಾಗ ಕ್ರೇನ್ ಸೀಲಿಂಗ್ (Ceiling collapses) ಕಟ್ಟಾಗಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಘಟನೆ (Crane collapses) ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತ ದುರ್ದೈವಿ.
ಶಾವಂತ ಪಾಟೀಲ್ ಎಂಬ ರೈತರ ಜಮೀನಿನಲ್ಲಿ ಮಧ್ಯಪ್ರದೇಶದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಳಗೆ ಇಳಿಯುವಾಗ ಕ್ರೇನ್ ಸಿಲ್ಲಿಂಗ್ ಕಟ್ಟಾಗಿ ಇಬ್ಬರು ಕಾರ್ಮಿಕರು ಬಾವಿಯ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಸಂತೋಷ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ | Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್ ಪತ್ತೆ; 27 ಮೀನುಗಾರರ ರಕ್ಷಣೆ
ಗಾಯಗೊಂಡ ವ್ಯಕ್ತಿಯನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಪರಿಶೀಲನೆ ನಡೆಸಿ ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.