ಹಾಸನ: ಬಿಜೆಪಿ ಪರ ಸಂದೇಶ ಹಂಚಿಕೊಂಡ ಆರೋಪದಲ್ಲಿ ಹಾಸನ ಡಿಡಿಪಿಐ ಕಚೇರಿಯ ಪ್ರಥಮ ದರ್ಜೆ ಸಹಾಯಕನನ್ನು (ಎಫ್‌ಡಿಎ) ಅಮಾನತು ಮಾಡಿ (FDA Suspended) ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಆದೇಶ ಹೊರಡಿಸಿದ್ದಾರೆ. ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಬಿಜೆಪಿ ಪರ ಹಂಚಿಕೊಂಡು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರಿಂದ ಎಫ್‌ಡಿಎ ವಿರುದ್ಧ ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ.
ಡಿಡಿಪಿಐ ಕಚೇರಿಯ ಎಫ್‌ಡಿಎ ಬಿ.ಎಚ್. ಮಂಜುನಾಥ್ ಅಮಾನತುಗೊಂಡ ಸಿಬ್ಬಂದಿ. ಸರ್ಕಾರಿ ನೌಕರರಾಗಿರುವ ಮಂಜುನಾಥ್ ಅವರು ʼಹಾಸನ ಪ್ರೀತಂ ಜೆ ಗೌಡ ಎಂಎಲ್‌ಎʼ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಬಿಜೆಪಿ ಪರ ಪ್ರಚಾರದ ಸಂದೇಶ ಹಂಚಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಾಗೇಂದ್ರ ಎಂಬುವವರು ದೂರು ನೀಡಿದ್ದರು. ಪ್ರಕರಣದ ಬಗ್ಗೆ ಮಂಜುನಾಥ್‌ರ ವಿವರಣೆ ಹಾಗೂ ಡಿಡಿಪಿಐ ವರದಿ ಆಧರಿಸಿ ಜಿಲ್ಲಾಧಿಕಾರಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ | Lok Sabha Election 2024: ಮೆಟ್ರೋದಲ್ಲಿ ಮತಯಾಚಿಸಿದ ಡಾ. ಸಿ.ಎನ್. ಮಂಜುನಾಥ್!
ಡಿಡಿಪಿಐ ಕಚೇರಿ ಎಫ್‌ಡಿಎ ಮಂಜುನಾಥ್, ಪತ್ನಿ ಹಾಗೂ ಹಾಸನ ಬಿಇಒ ಮಂಜುಳಾ ವಿರುದ್ಧ ಚುನಾವಣಾ ಪ್ರಚಾರ ನಡೆಸಿದ ಆರೋಪ ಕೇಳಿಬಂದಿತ್ತು. ಹಾಸನ ಪ್ರೀತಂ ಜೆ ಗೌಡ ಎಂಎಲ್‌ಎ ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಚುನಾವಣೆ ಸಂದೇಶ ಕಳುಹಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡಲು ಡಿಡಿಪಿಐಗೆ ಎಡಿಸಿ ಸೂಚಿಸಿದ್ದರು. ಹೀಗಾಗಿ ಇಬ್ಬರಿಗೂ ಡಿಡಿಪಿಐ ಜವರೇಗೌಡ ನೋಟಿಸ್ ಜಾರಿ ಮಾಡಿದ್ದರು. ಇದೀಗ ಎಫ್‌ಡಿಎ ಮಂಜುನಾಥ್ ಅಮಾನತಾಗಿದ್ದಾರೆ.
ಗನ್ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿ! ಭದ್ರತಾ ವೈಫಲ್ಯ?
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜಧಾನಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಭಾನುವಾರದಿಂದಲೇ ಹಲವು ಕಡೆ ರೋಡ್ ಶೋ ನಡೆಸಿದ್ದ ಸಿಎಂ, ಸೋಮವಾರವೂ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಚಾರದ ವೇಳೆ ಗನ್ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬ ಸಿಎಂಗೆ ಹಾರ ಹಾಕಿ ತೆರಳಿದ್ದಾನೆ. ಇದು ಆತಂಕಕ್ಕೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಭೈರಸಂದ್ರದಲ್ಲಿ ಪ್ರಚಾರ ನಡೆಸುವ ವೇಳೆ ಈ ಘಟನೆ ನಡೆದಿದೆ. ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದ ವ್ಯಕ್ತಿಯೊಬ್ಬರ ಕ್ಯಾಂಟರ್ ಏರಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ. ಬಳಿಕ ಅಲ್ಲಿಂದ ತೆರಳಿದ್ದಾನೆ.
ಆದರೆ, ಆ ವ್ಯಕ್ತಿ ಯಾರು? ಅವನ ಬಳಿ ಇದ್ದಿದ್ದು ಲೈಸೆನ್ಸ್ ಹೊಂದಿರುವ ಗನ್ ಆಗಿತ್ತೇ? ಆತ ಕಾಂಗ್ರೆಸ್ ಕಾರ್ಯಕರ್ತನಾ? ಮುಖಂಡನಾ? ಅಥವಾ ಇನ್ಯಾವುದೋ ವ್ಯಕ್ತಿಯಾ? ಎಂಬ ಪ್ರಶ್ನೆ ಮೂಡಿತ್ತು. ನಂತರ ಆತ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಎಂದು ತಿಳಿದುಬಂದಿದೆ. 5 ವರ್ಷದ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ಆಗಿತ್ತು ಎನ್ನಲಾಗಿದೆ. ಹೀಗಾಗಿ ಲೈಸೆನ್ಸ್ ಪಡೆದು ಗನ್ ಇಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಭದ್ರತಾ ವೈಫಲ್ಯ
ಈ ಘಟನೆಯನ್ನು ಪೊಲೀಸ್ ಭದ್ರತಾ ವೈಫಲ್ಯ ಎಂದೇ ಹೇಳಲಾಗುತ್ತಿದೆ. ಗನ್ ಇಟ್ಟುಕೊಂಡಿದ್ದ ಒಬ್ಬ ವ್ಯಕ್ತಿಯನ್ನು ಸಿಎಂ ಬಳಿ ಹೋಗಲು ಹೇಗೆ ಬಿಡಲಾಗುತ್ತದೆ? ಎಂಬ ಪ್ರಶ್ನೆಗಳು ಎದುರಾಗಿತ್ತು.
ಇದನ್ನೂ ಓದಿ | Lok Sabha Election 2024: ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ಕೇಸ್; ಸರ್ಕಾರಕ್ಕೆ ಆರ್. ಅಶೋಕ್, ವಿಜಯೇಂದ್ರ ಕ್ಲಾಸ್
ರಿಯಾಜ್ ಗನ್ ಮುಟ್ಟುಗೋಲು
ಎಲೆಕ್ಷನ್ ಸಮಯದಲ್ಲಿ ಗನ್ ಸರೆಂಡರ್ ಮಾಡಿರದ ರಿಯಾಜ್, ತಮಗೆ ಜೀವಭಯವಿದೆ ಎಂದು ಅರ್ಜಿ ನೀಡಿ ಅನುಮತಿಯನ್ನು ಪಡೆದುಕೊಂಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗುವಾಗ ಗನ್ ತೆಗೆದುಕೊಂಡು ಹೋಗಬಾರದಿತ್ತು. Z ಸೆಕ್ಯುರಿಟಿ ಭದ್ರತೆ ಸಿಎಂಗೆ ಇದೆ. ಹೀಗಾಗಿ ಸಿಎಂ ಬಳಿ ಬರುವವರನ್ನು ತಪಾಸಣೆ ನಡೆಸಿ ಹತ್ತಿರ ಬಿಡಬೇಕಿತ್ತು. ಗನ್ ಅನ್ನು ರಿಯಾಜ್ ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದಾರೆ. ಹೀಗಾಗಿ ರಿಯಾಜ್ ಗನ್ ಮುಟ್ಟುಗೋಲು ಹಾಕಿಕೊಳ್ಳುವಂತೆ ದಕ್ಷಿಣ ವಿಭಾಗ ಡಿಸಿಪಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.