Site icon Vistara News

Rajya Sabha Election: ಇಂದು ರಾಜ್ಯಸಭೆ ಚುನಾವಣೆ; ಯಾರಿಗೆ ಅಡ್ಡ ಮತದಾನದ ಭೀತಿ?

Rajya Sabha Election

Fearing cross-voting in Karnataka Rajya Sabha election, Congress MLAs to be put up in hotel

ಬೆಂಗಳೂರು/ನವದೆಹಲಿ: ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ದೇಶದ ಹಲವು ರಾಜ್ಯಗಳ 15 ಸ್ಥಾನಗಳಿಗೆ ಮಂಗಳವಾರ (ಫೆಬ್ರವರಿ 27) ರಾಜ್ಯಸಭೆ ಚುನಾವಣೆ (Rajya Sabha Election) ನಡೆಯಲಿದ್ದು, ವಿವಿಧ ಪಕ್ಷಗಳಿಗೆ ಅಡ್ಡ ಮತದಾನದ ಭೀತಿ (Cross Voting) ಎದುರಾಗಿದೆ. ಅದರಲ್ಲೂ, ಕರ್ನಾಟಕದಲ್ಲಿ (Karnataka) ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧಿಸಿದ್ದು, ಕಾಂಗ್ರೆಸ್‌ಗೆ ಅಡ್ಡ ಮತದಾನದ ಭೀತಿ ಇದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್‌ ಶಾಸಕರನ್ನು (Congress MLAs) ಹೋಟೆಲ್‌ನಲ್ಲಿ ಇರಿಸಲಾಗಿದೆ.

ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಮಂಗಳವಾರ ರಾಜ್ಯಸಭೆ ಚುನಾವಣೆ ನಡೆಯಬೇಕಿತ್ತು. ಆದರೆ, ಈಗಾಗಲೇ 56 ಸ್ಥಾನಗಳ ಪೈಕಿ 41 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 15 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಮಂಗಳವಾರ ಸಂಜೆಯೇ ಮತಎಣಿಕೆ ನಡೆಯಲಿದ್ದು, ಕೆಲವೇ ಗಂಟೆಯಲ್ಲಿ ಫಲಿತಾಂಶ ಕೂಡ ಪ್ರಕಟವಾಗಲಿದೆ.

ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮೂವರನ್ನು ಗೆಲ್ಲಿಸಿಕೊಂಡು ಬರಲು ಸ್ಪಷ್ಟ ಬಹುಮತ ಇತ್ತು. ಆದರೆ, ಭಾನುವಾರ ಶಾಸಕ ರಾಜವೆಂಕಟಪ್ಪ ನಾಯಕ ಅವರ ನಿಧನದಿಂದ ಈಗ ಕಾಂಗ್ರೆಸ್‌ ಸಂಖ್ಯಾಬಲ 134ಕ್ಕೆ ಇಳಿದಿದೆ. ಗೆಲ್ಲಲು 135 ಸೀಟುಗಳು ಬೇಕಿದೆ. ಇದು ಕೈಪಡೆ ಇಕ್ಕಟ್ಟಿಗೆ ಕಾರಣವಾಗಿದೆ. ಆದರೆ, ಪಕ್ಷೇತರ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಹೇಳಿದ್ದರೂ ಅವರಿಗೆ ಈಗ ಡಿಮ್ಯಾಂಡ್‌ ಜಾಸ್ತಿ ಇದೆ. ಕಾಂಗ್ರೆಸ್‌ನಿಂದ ಅಜಯ್‌ ಮಕೇನ್‌, ಸೈಯದ್‌ ನಾಸೀರ್‌ ಹುಸೇನ್‌, ಜಿ.ಸಿ.ಚಂದ್ರಶೇಖರ್‌, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಹಾಗೂ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ.

Lok Sabha Election 2024 Congress and BJP leaders lobbying for tickets

ಮತದಾನ ಮಾಡುವ ವಿಧಾನ

ಹೀಗೆ ಮಾಡಿದಲ್ಲಿ ಅಸಿಂಧು ಮತ ಪತ್ರಗಳೆಂದು ಪರಿಗಣನೆ

ಇದನ್ನೂ ಓದಿ: Geeta Koda: ಏಕೈಕ ಸಂಸದೆಯೂ ಬಿಜೆಪಿ ಸೇರ್ಪಡೆ; ಈ ರಾಜ್ಯದಲ್ಲಿ ಶೂನ್ಯಕ್ಕಿಳಿದ ಕಾಂಗ್ರೆಸ್!‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version