ಬೆಂಗಳೂರು: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಎಂಒಇಎಫ್ಸಿಸಿ) ಸಂಯೋಜಿತ ಪ್ರಾದೇಶಿಕ ಕಚೇರಿ ಉಪ ಮಹಾನಿರ್ದೇಶಕ ಕೆ.ಪಿ.ಸಿಂಗ್, ಮಹಾರಾಷ್ಟ್ರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಯಾಗಿ ವಾಪಸ್ ತೆರಳಿದ (repatriation) ಹಿನ್ನೆಲೆಯಲ್ಲಿ ಅವರನ್ನು ಕೇಂದ್ರೀಯ ಸದನ ಸಂಘದಿಂದ ಶುಕ್ರವಾರ ಸನ್ಮಾನಿಸಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ಮ.ಚಂದ್ರಶೇಖರ್ ಹಾಗೂ ಸಂಘದ ಸದಸ್ಯರು ಇದ್ದರು.