Site icon Vistara News

Karnataka Budget 2023 : ಮೈಸೂರಿನಲ್ಲಿಯೇ ಚಿತ್ರ ನಗರಿ ಸ್ಥಾಪನೆ

Film City

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್​ನಲ್ಲಿ (Karnatka Budget-2023) ಚಿತ್ರನಗರಿ ಸ್ಥಾಪನೆಯ ಬಗ್ಗೆ ಸ್ಪಷ್ಟತೆ ನೀಡಲಾಗಿದೆ. ಮೈಸೂರಿನಲ್ಲಿಯೇ ಚಿತ್ರನಗರಿ ಸ್ಥಾಪನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ.

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು.

ಇ ಆಡಳಿತಕ್ಕೆ ಪ್ರೇರಣೆ

ಸಿಎಂ ಸಿದ್ದರಾಮಯ್ಯ ಅವರು ಜುಲೈ 7ರಂದು ಮಂಡಿಸಿದ 2023-24ನೇ ಸಾಲಿನ ಬಜೆಟ್​ನಲ್ಲಿ ಇ ಆಡಳಿತಕ್ಕೆ ಒತ್ತು ನೀಡಲಾಗಿದೆ. ಸಾರ್ಜನಿಕ ಸೇವೆಗಳನ್ನು ತ್ವರಿತಗತಿಯಲ್ಲಿ ಮಾಡುವ ಉದ್ದೇಶದಿಂದ ಈ ಆಡಳಿಕ್ಕೆ ಪ್ರೇರಣೆ ಕೊಡಲಾಗಿದೆ. ಪ್ರಾಯೋಗಿಕವಾಗಿ ಆರು ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಒಂದು ದಿನದೊಳಗೆ ಸಾರ್ಜನಿಕ ಸೇವೆ ಮಾಡಿಕೊಡುವ ಭರವಸೆಯನ್ನು ಸರಕಾರ ನೀಡಿದೆ.

ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲೂಕು ಹಂತದ ಕಚೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲಾಗುತ್ತದೆ. ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್‌ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್‌ ಎಂಡ್‌ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರುವುದಾಗಿ ಘೋಷಿಸಲಾಗದೆ.

ಇನ್ನಷ್ಟು ಬಜೆಟ್‌ ಸಂಬಂಧಿತ ಸುದ್ದಿಗಳಿಗಾಗಿ ಈ ಲಿಂಕ್‌: ಬಜೆಟ್

Exit mobile version