Site icon Vistara News

Fraud Case : ಸರ್ಕಾರಿ ಹಣ ದುರುಪಯೋಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕನ ಮೇಲೆ FIR

Fraud case

ಚಿತ್ರದುರ್ಗ: ಸರ್ಕಾರಿ ಹಣ ದುರುಪಯೋಗ (Fraud Case) ಮಾಡಿಕೊಂಡ ಆರೋಪದ ಮೇಲೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಎಂಬುವವರ ಮೇಲೆ ಎಫ್‌ಐಆರ್‌ (FIR) ದಾಖಲಾಗಿದೆ. ಈಗಾಗಲೇ ಅವರನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಲಾಗಿದೆ.

ಕಳೆದ ತಿಂಗಳು ಸೇವೆಯಿಂದ ವಜಾ ಮಾಡಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಕ್ತ ತನಿಖೆಗೆ ಆದೇಶ ನೀಡಿದ್ದರು. ಈಗ ಸರ್ಕಾರಿ ಹಣ ದುರುಪಯೋಗ (misappropriation of government funds) ಮಾಡಿಕೊಂಡ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Karnataka Politics : ರಾಜ್ಯ ಸರ್ಕಾರಕ್ಕೆ ಬಿಜೆಪಿ ಮೂರನೇ ಬಾಣ;‌ ಕೃಷಿ ನೀತಿ ವಿರುದ್ಧ ಜನಾಂದೋಲನ

7,04,45,790 ರೂಪಾಯಿ ಬಿಲ್ ಅನ್ನು ಬೇನಾಮಿ ವ್ಯಕ್ತಿಗಳಿಗೆ ನೀಡಿ ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪವನ್ನು ಮೂಡಲಗಿರಿಯಪ್ಪ ಎದುರಿಸುತ್ತಿದ್ದಾರೆ. ನಿರ್ಮಿತಿ ಕೇಂದ್ರದ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಗಮನಕ್ಕೆ ಬಾರದೆ ಚೆಕ್ ಪಡೆದಿರುವ ಆರೋಪ ಈಗ ಅವರ ಮೇಲೆ ಬಂದಿದೆ.

ಅಲ್ಲದೆ, ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದ್ದ ಹಣವನ್ನು ಇವರು ದುರುಪಯೋಗ ಮಾಡಿಕೊಂಡಿದ್ದಾರೆ. 7 ಕೋಟಿ ರೂಪಾಯಿ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಗೊತ್ತಾಗಿದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ವಹಿಸಿದ್ದರು.

ಮೂಡಲಗಿರಿಯಪ್ಪ ಅವರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದರು. ಕೊನೆಗೆ ಸೂಕ್ತ ತನಿಖೆ ನಡೆಸುವಂತೆಯೂ ಸೂಚನೆ ನೀಡಿದ್ದರು.

ಇದನ್ನೂ ಓದಿ: Karnataka Politics : ಎಚ್‌ಡಿಕೆ ನೈಸ್‌ ದಾಖಲೆ ಕೊಟ್ರೆ ತನಿಖೆ ಎಂದ ಜೋಶಿ; ಪ್ರತ್ಯುತ್ತರ ಕೊಡುವೆನೆಂದ ಡಿಕೆಶಿ

ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆಯು ಪ್ರಾರಂಭಿಸಿ, ಮೇಲ್ನೋಟಕ್ಕೆ ತಪ್ಪಿತಸ್ಥರು ಎಂದು ಗೊತ್ತಾಗುತ್ತಿದ್ದಂತೆ ಅವರ ಮೇಲೆ ಈಗ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಈ ಸಂಬಂಧ ಚಿತ್ರದುರ್ಗ ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Exit mobile version