Site icon Vistara News

Udupi Toilet Video : ಟಾಯ್ಲೆಟ್ಟಲ್ಲಿ ಹೆಣ್ಮಕ್ಕಳ ವಿಡಿಯೊ ಮಾಡಿದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ FIR

Udupi Toilet Case

Udupi Toilet Case:Three Students Confess The Video Recording

ಉಡುಪಿ: ಇಲ್ಲಿನ ನೇತ್ರಜ್ಯೋತಿ ಕಾಲೇಜಿನಲ್ಲಿ (Nethrajyothi College udupi) ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (Three Muslim students) ಟಾಯ್ಲೆಟ್‌ನಲ್ಲಿ ಮೊಬೈಲ್‌ (Udupi Toilet Video) ಇಟ್ಟು ಇತರ ಹೆಣ್ಣುಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಿಸಿಕೊಂಡ (mobile shooting at Ladies toilet) ಪ್ರಕರಣದಲ್ಲಿ ಕೊನೆಗೂ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದಲ್ಲದೆ, ರಾಷ್ಟ್ರೀಯ ಸುದ್ದಿಯಾಗಿಯೂ ಬಿತ್ತರಗೊಂಡಿತ್ತು. ಇದರಿಂದ ಎಚ್ಚೆತ್ತ ಉಡುಪಿ ಮಲ್ಪೆ ಠಾಣೆ ಪೊಲೀಸರು ಈಗ ಎಫ್‌ಐಆರ್ ದಾಖಲು‌ ಮಾಡಿಕೊಂಡಿದ್ದಾರೆ.

ಕಾಲೇಜಿನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಯಾವ ಕ್ರಮವನ್ನೂ ಕೈಗೊಳ್ಳದೆ, ಪ್ರಶ್ನೆ ಮಾಡಿದವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆಂದು ಬಿಜೆಪಿ ಉಗ್ರ ಹೋರಾಟಕ್ಕೆ ನಿರ್ಧಾರ ಮಾಡಿತ್ತು. ಅಲ್ಲದೆ, ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿತ್ತು. ರಾಜ್ಯ ಸರ್ಕಾರದ ನಿಲುವನ್ನು ಕಟುವಾಗಿ ಖಂಡಿಸಿತ್ತು, ಅಲ್ಲದೆ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿತ್ತು. ಈಗ ಉಡುಪಿ ಮಲ್ಪೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ. ವಿಡಿಯೊ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರಾದ ಸಬನಾಜ್‌, ಅಲ್ಫಿಯಾ, ಅಲೀಮಾ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Lok Sabha Election 2024 : ಬಿಜೆಪಿಯಿಂದ ಹೊರಗೆ ಕಾಲಿಟ್ಟರೇ ಸುಮಲತಾ?

ಏನಾಗಿತ್ತು ಪ್ರಕರಣ?

ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಇತರ ಹೆಣ್ಣು ಮಕ್ಕಳು ಶೌಚಾಲಯ ಬಳಸುವುದನ್ನು ಚಿತ್ರೀಕರಣ ಮಾಡಿಕೊಳ್ಳಲಾಗಿತ್ತು. ಈ ವಿಷಯ ಬೆಳಕಿಗೆ ಬಂದ ಕೂಡಲೇ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿ ಕೈತೊಳೆದುಕೊಂಡಿತ್ತು. ಈ ನಡುವೆ, ಮುಸ್ಲಿಂ ಯುವತಿಯರ ಈ ಕೃತ್ಯದ ಹಿಂದೆ ದೊಡ್ಡದೊಂದು ಜಾಲವಿದೆ, ಚಿತ್ರೀಕರಿಸಿದ ದೃಶ್ಯಗಳನ್ನು ಅವರು ತಮ್ಮ ಸಮುದಾಯದ ಹುಡುಗರಿಗೆ ಕಳುಹಿಸಿದ್ದರ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ, ತನಿಖೆಯನ್ನೂ ನಡೆಸುತ್ತಿಲ್ಲ ಎಂದು ರಶ್ಮಿ ಸಾವಂತ್‌ (Rashmi samant) ಎಂಬ ಯುವತಿಯೊಬ್ಬರು ಟ್ವೀಟ್‌ ಮಾಡಿದ್ದರು. ಬಳಿಕ ಉಡುಪಿ ಪೊಲೀಸರು ಆಕೆಯ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆಪಾದನೆ ಸಹ ವ್ಯಕ್ತವಾಗಿತ್ತು. ಈ ಬಗ್ಗೆ ಬಿಜೆಪಿ ಸಹ ಕಿಡಿಕಾರಿತ್ತು. ಈಗ ಪ್ರಕರಣ ದಾಖಲಾಗಿದೆ.

ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ

ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜು ವಿರುದ್ಧ ಪ್ರಕರಣ ದಾಖಲಾಗಿದೆ. ಖಾಸಗಿತನಕ್ಕೆ ಧಕ್ಕೆ ಆಗುವ ವಿಡಿಯೊ ಚಿತ್ರೀಕರಣ ಆಗಿದೆ. ವಿಷಯ ತಿಳಿದು ವಿಡಿಯೊ ಡಿಲೀಟ್ ಮಾಡಿರುವುದಾಗಿ ಆಡಳಿತ ಮಂಡಳಿ ಹೇಳಿದೆ. ಇದೊಂದು ಗಂಭೀರವಾದ ಅಪರಾಧ ಕೃತ್ಯವಾಗಿದೆ. ವಿಡಿಯೊ ಮಾಡಿ ತಪ್ಪೊಪ್ಪಿಕೊಂಡಿರುವ ಬಗ್ಗೆ ಆಡಳಿತ ಮಂಡಳಿ ಹೇಳಿದೆ. ಸತ್ಯಾಸತ್ಯತೆ ಪತ್ತೆ ಹಚ್ಚುವ ಉದ್ದೇಶದಿಂದ ಪ್ರಕರಣ ದಾಖಲಾಗಿದೆ. ಮಲ್ಪೆ ಎಸ್.ಐ ಸುಷ್ಮಾ ಜಿ.ಬಿ ಅವರಿಂದ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ತಿಳಿಸಿದ್ದೇನೆ: ಶ್ಯಾಮಲಾ‌ ಕುಂದರ್

ಉಡುಪಿಯ ನೇತ್ರ ಕಾಲೇಜಿನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ ಬಗ್ಗೆ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ‌ ಕುಂದರ್ ಪತ್ರಿಕಾಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ಈ ವಿಚಾರವನ್ನು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ತಿಳಿಸಿದ್ದೇನೆ. ನಾನು ಮಾಜಿ ಆದರೂ ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇನೆ. ಮಂಗಳವಾರ ರಾಷ್ಟ್ರೀಯ ಮಹಿಳಾ ಆಯೋಗದವರು ದೂರು ದಾಖಲು‌ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi : ನೀರವ್‌, ಲಲಿತ್‌ ಮೋದಿಗೆ ನಿಮ್ಮನ್ನು ಹೋಲಿಸಲೇ: ಮೋದಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬುಧವಾರ ಉಡುಪಿಗೆ ರಾಷ್ಟ್ರೀಯ ಮಹಿಳಾ ಆಯೋಗದವರು ಆಗಮಿಸಲಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ದಕ್ಷಿಣ ಭಾರತ ಸದಸ್ಯೆ ಖುಷ್ಬು ಸುಂದರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಇದು ತಮಾಷೆಗೆ ಮಾಡಿದ ವಿಡಿಯೊ ಅಲ್ಲ, ಇದು ಅತಿ ಸೂಕ್ಷ್ಮ ‌ವಿಚಾರವಾಗಿದೆ. ಸಂತ್ರಸ್ತೆ ಹೆಸರು ಹೊರ ಬಾರದಂತೆ ತನಿಖೆ ನಡೆಯುತ್ತದೆ. ಇಂತಹ ಚಿತ್ರೀಕರಣ ಮೂಲಕ ಯಾವ ಸಂದೇಶವನ್ನು ಕೊಡುತ್ತಾರೆ? ಎಂದು ಶ್ಯಾಮಲಾ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version