ಬೆಂಗಳೂರು: ಕಾಂಗ್ರೆಸ್ (Congress Leaders) ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಇತರರ ವಿರುದ್ಧ ಅವಮಾನಕಾರಿ ವಿಡಿಯೊವನ್ನು (Video) ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (amit malviya) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಅವರು ಹೈಗ್ರೌಂಡ್ಸ್ ಪೊಲೀಸ್ ಸ್ಟೇಷನ್‌ನಲ್ಲಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಶೇರ್ ಮಾಡಿರುವ ಆ್ಯನಿಮೇಟೆಡ್ ವಿಡಿಯೊದಲ್ಲಿ ಕಾಂಗ್ರೆಸ್ ಪಕ್ಷದವರು ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂಬ ರೀತಿಯಲ್ಲಿ ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಡಿಯೊ ಹರಿಬಿಟ್ಟ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿತ್ತು.
ಇದನ್ನೂ ಓದಿ: Free Bus Service: ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಸ್ಮಾರ್ಟ್ ಕಾರ್ಡ್ ಕಡ್ಡಾಯ; ಎಲ್ಲಿ ಸಿಗಲಿದೆ ಇದು?
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಈಗೇಕೆ ಅಳುತ್ತಾರೆ? ಈ ನೆಲದ ಕಾನೂನನ್ನು ಪಾಲನೆ ಮಾಡುವ ಬಗ್ಗೆ ಅವರಿಗೆ ಸಮಸ್ಯೆ ಇದೆ. ನಾವು ದುರುದ್ದೇಶದಿಂದ ಎಫ್‌ಐಆರ್ ದಾಖಲು ಮಾಡಿದ್ದೇವೆ ಎಂದು ಬಿಜೆಪಿ ಹೇಳುತ್ತಿದೆ. ಎಫ್ಐಆರ್‌ನ ಯಾವ ಭಾಗವನ್ನು ದುರುದ್ದೇಶದಿಂದ ದಾಖಲಿಸಲಾಗಿದೆ ಎಂಬುದನ್ನು ಅವರೇ ಹೇಳಲಿ ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆಯೂ ಕಿಡಿಕಾರಿದ್ದ ಸಚಿವ ಪ್ರಿಯಾಂಕ್ ಖರ್ಗೆ
ಈ ಬಗ್ಗೆ ಜೂನ್ 19ರಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದರು. ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅವಮಾನಕಾರಿ ವಿಡಿಯೊ ಪೋಸ್ಟ್ ಮಾಡಿದ ಬಿಜೆಪಿ ಮುಖಂಡರಾದ ಜೆ ಪಿ ನಡ್ಡಾ, ಅಮಿತ್ ಮಾಳವೀಯ ಹಾಗೂ ಅರುಣ್ ಸೂದ್ ಅವರ ವಿರುದ್ಧ ದೂರು ನೀಡಿದ್ದೇವೆ. ಅವರು ಜೂನ್ 17ರಂದು ತಮ್ಮ ಅಧಿಕೃತ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ವಿಡಿಯೊದಲ್ಲೇನಿದೆ?
ಈ ವಿಡಿಯೊದಲ್ಲಿ ಕಾಂಗ್ರೆಸ್ ಪಕ್ಷ, ನಾಯಕರು ದೇಶದ್ರೋಹಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿ ಬೇರೆ ದೇಶಕ್ಕೆ ಹೋದಾಗೆಲ್ಲ ದೇಶ ಒಡೆಯುವ ಚಟುವಟಿಕೆಯಲ್ಲಿ ಭಾಗಿಯಾಗುತ್ತಾರೆ ಎಂದು ತೋರಿಸಲಾಗಿದೆ. ಈ ರೀತಿ ಸುಳ್ಳು ಮಾಹಿತಿ, ಕೋಮುವಾದ ಸೃಷ್ಟಿಸುವ ಪೋಸ್ಟ್‌ಗಳನ್ನು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಬಿಜೆಪಿ ಐಟಿ ಕಾರ್ಖಾನೆಯನ್ನು ಕರ್ನಾಟಕದಲ್ಲಿ ಬಂದ್ ಮಾಡಬೇಕು. ಅವರ ಸರ್ಕಾರ ಇದ್ದಾಗ ಅದು ಆಗಿ ಹೋಯಿತು. ಈಗ ನಮ್ಮ ಸರ್ಕಾರ ಬಂದಿದೆ. ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಬಿಜೆಪಿಯವರು ವಿಡಿಯೊದಲ್ಲಿ ನಾವು ಆತಂಕವಾದಿಗಳಿಗಿಂತಲೂ ಡೇಂಜರ್ ಅಂತಾರೆ. ರಾಹುಲ್ ಗಾಂಧಿ ಮುಂಚೂಣಿಯಲ್ಲಿ ನಿಂತು ಆ್ಯಂಟಿ ಇಂಡಿಯಾ ಆ್ಯಕ್ಟಿವಿಟಿ ಮಾಡುತ್ತಾರೆ ಎಂದು ಹೇಳುತ್ತಾರೆ. ಅಧಿಕೃತ ಅಕೌಂಟ್‌ಗಳಲ್ಲಿ ಇವರು ಈ ರೀತಿ ಆರೋಪವನ್ನು ಹೊರಿಸುತ್ತಿದ್ದಾರೆ. ಅದಕ್ಕೆ ಅವರ ವಿರುದ್ಧ ದೂರು ಕೊಟ್ಟಿದ್ದೇವೆ. ಅವರು ಕಾನೂನಿಗೆ ಉತ್ತರ ಕೊಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು.
ಈ ಸೆಕ್ಷನ್‌ಗಳಡಿ ಕೇಸ್ ದಾಖಲು
ಐಪಿಸಿ 153A ,120B, 505 ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. 153A ಧರ್ಮ, ಜನಾಂಗ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕದಡುವ ಸಂಬಂಧ ಕೇಸ್ ಬುಕ್ ಮಾಡಲಾಗಿದೆ.
ಇದನ್ನೂ ಓದಿ: Weather Report : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ವರ್ಷಧಾರೆ; ಹೆಚ್ಚು ಕಡೆ ಬರಿ ಮೋಡ!
ಮತ್ತೆ ರೀಟ್ವೀಟ್ ಮಾಡಿದ ಅಮಿತ್ ಮಾಳವೀಯ
Rahul Gandhi is dangerous and playing an insidious game… pic.twitter.com/wYuZijUFAu
— Amit Malviya (@amitmalviya) June 17, 2023
ಮತ್ತೆ ರೀಟ್ವೀಟ್ ಮಾಡಿದ ಮಾಳವೀಯ
ತಮ್ಮ ಮೇಲೆ ಎಫ್‌ಐಆರ್ ದಾಖಲಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಅಮಿತ್ ಮಾಳವೀಯ ಅವರು ತಾವು ಜೂನ್ 17ರಂದು ರಾಹುಲ್ ಗಾಂಧಿ ಬಗ್ಗೆ ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.