ಬೆಂಗಳೂರು: ಅವಧಿ ಮೀರಿ (Late night Party) ಪಾರ್ಟಿ ಮಾಡಿದ ಆರೋಪದ ಮೇಲೆ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್ (Jw Marriott hotel) ಮೇಲೆ ಎಫ್‌ಐಆರ್ ದಾಖಲಾಗಿದೆ.
ಸೆ.೧೨ರಂದು ನಿಗದಿತ ವೇಳೆಗಿಂದ ಹೆಚ್ಚು ಸಮಯ ಪಾರ್ಟಿಯನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಹಾಗೂ ಪಾರ್ಟಿ ಆರ್ಗನೈಸರ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಏನಿದು ಪ್ರಕರಣ?
ಸೆ.12ರಂದು ರಾತ್ರಿ 3 ಗಂಟೆವರೆಗೆ ಪಾರ್ಟಿ ನಡೆಸಲಾಗಿತ್ತು. ಒಂದು ಗಂಟೆಗೆ ಪಾರ್ಟಿ ಮುಗಿಯಬೇಕಿತ್ತು. ಆದರೆ, ತೀರಾ ರಾತ್ರಿ ನಗರದಲ್ಲಿ ನಡೆದಿದ್ದ ಸೈಮಾ ಅವಾರ್ಡ್ ಕಾರ್ಯಕ್ರಮಕ್ಕೆ ಬಂದಿದ್ದ ಸ್ಟಾರ್ಗಳು ಈ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಈ ಹೋಟೆಲ್ನಲ್ಲಿ ಉಳಿದುಕೊಂಡಿದ್ದ ಸ್ಟಾರ್ ನಟ-ನಟಿಯರು ಪಾರ್ಟಿಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಹಿಂದೆಯೂ ಎರಡು ಬಾರಿ ಅವಧಿ ಮೀರಿ ಪಾರ್ಟಿ ನಡೆಸಿದ್ದ ಆರೋಪವು ಈ ಹೋಟೆಲ್ ಮೇಲಿತ್ತು. ಎರಡು ಬಾರಿ ಪೊಲೀಸರು ವಾರ್ನಿಂಗ್ ನೀಡಿದ್ದರು ಎನ್ನಲಾಗಿದೆ. ಆದರೂ, ಮತ್ತೆ ಮುಂದುವರಿಸಿರುವುದರಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ಲಂಚ ಪ್ರಕರಣ: ಬಿಎಸ್‌ವೈ, ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡ ಲೋಕಾಯುಕ್ತ: ಮುಂದೆ ಏನಾಗಲಿದೆ?