Site icon Vistara News

Fire Accident | ಚಲಿಸುತ್ತಿದ್ದ ಬಸ್‌ನಲ್ಲಿ ಆಕಸ್ಮಿಕ ಬೆಂಕಿ; ಸಮಯಪ್ರಜ್ಞೆ ಮೆರೆದ ಚಾಲಕ

ಚಿಕ್ಕೋಡಿ/ಧಾರವಾಡ: ಚಿಕ್ಕೋಡಿಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಬಳಿ ಎನ್‌ಎಚ್ 4ರಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ (Fire Accident) ಕಾಣಿಸಿಕೊಂಡ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿಯೇ ಬಸ್‌ ಹೊತ್ತಿ ಉರಿದಿದೆ.

ಸಂಕೇಶ್ವರದಿಂದ‌‌ ಬೆಳಗಾವಿಗೆ ಹೊರಟಿದ್ದ ಸರ್ಕಾರಿ ಬಸ್‌ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಸಮಯ ಪ್ರಜ್ಞೆ ಮೆರೆದಿದ್ದು, ಬಸ್‌ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಕಾರು
ಧಾರವಾಡ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಮಹಾರಾಷ್ಟ್ರ ಮೂಲದ ಕಾರು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಕಾರು ರಸ್ತೆ‌ ಪಕ್ಕದ ಕಂದಕಕ್ಕೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Bajaj Card | ಬಜಾಜ್‌ ಫೈನಾನ್ಸ್‌ ನೌಕರನಿಂದಲೇ ದೋಖಾ; ಹಳೇ ಬಳಕೆದಾರರೇ ಈತನ ಟಾರ್ಗೆಟ್‌

Exit mobile version