Site icon Vistara News

Fire Accident: ಜಿಲ್ಲಾಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಕಾರಿಗೆ ದಿಢೀರ್‌ ಬೆಂಕಿ; ಕ್ಷಣ ಮಾತ್ರದಲ್ಲಿ ಹೊತ್ತಿ ಉರಿದ ಕಾರು

Fire Accident Car parked in district hospital premises catches fire

#image_title

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದವರು ಆವರಣದಲ್ಲಿ ಕಾರು ನಿಲ್ಲಿಸಿ ಒಳಗೆ ಹೋಗಿದ್ದರು. ಆದರೆ, ಈ ವೇಳೆ ಕಾರಿನಲ್ಲಿ ದಿಢೀರ್‌ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ.

ಟಾಟಾ ಇಂಡಿಕಾ ಕಾರು ಇದಾಗಿದ್ದು, ಕ್ಷಣ ಮಾತ್ರದಲ್ಲಿ ಹೊತ್ತಿ ಉರಿದಿದೆ. ಸಿಟಿ ಸ್ಕ್ಯಾನ್ ಮಾಡಿಸಲು ಬಂದವರು ತಿರುಗಿ ಬಂದು ನೋಡುವಾಗ ಕಾರು ಹೊತ್ತಿ ಉರಿದಿರುವುದು ಗೊತ್ತಾಗಿದೆ.

ಇದನ್ನೂ ಓದಿ: BJP Karnataka: ಕಾಂಗ್ರೆಸ್‌ ವಿರುದ್ಧ ದತ್ತಾಂಶ ಕಳವು ಆರೋಪ ಮಾಡಿದ ಬಿಜೆಪಿ: ಚುನಾವಣಾ ಆಯೋಗಕ್ಕೆ ದೂರು

ನಗರದ ಹೌಸಿಂಗ್ ಬೋರ್ಡ್ ನಿವಾಸಿ ಸತ್ಯಪ್ರಕಾಶ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಕೆಲಕಾಲ ಸರ್ಕಾರಿ ಆಸ್ಪತ್ರೆಯ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗುತ್ತಿದ್ದಂತೆ ಕೆಲವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Exit mobile version