Fire Accident : ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ಹಸುಗಳು! ನಿಂತಲ್ಲೇ ಹೊತ್ತಿ ಉರಿದ ಲಾರಿ - Vistara News

ಕರ್ನಾಟಕ

Fire Accident : ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ಹಸುಗಳು! ನಿಂತಲ್ಲೇ ಹೊತ್ತಿ ಉರಿದ ಲಾರಿ

Fire Accident : ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಜಾನುವಾರುಗಳು ಮೃತಪಟ್ಟಿದ್ದರೆ ಮತ್ತೊಂದು ಕಡೆ ಲಾರಿ ಹಾಗೂ ಜ್ಯುವೆಲರಿ ಶಾಪ್‌ವೊಂದು ಸುಟ್ಟು ಕರಕಲಾಗಿದೆ.

VISTARANEWS.COM


on

Fire Accident Cows die in fire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್‌/ಕೊಪ್ಪಳ/ಧಾರವಾಡ : ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ, ಬೆಂಕಿಯ ಮಧ್ಯೆ (Fire Accident) ಸಿಕ್ಕಿಹಾಕಿಕೊಂಡ ದನಗಳು ಪ್ರಾಣ ಕಳೆದುಕೊಂಡಿವೆ. ಒಂಬತ್ತು ಹಸುಗಳು ದಾರುಣವಾಗಿ ಮೃತಪಟ್ಟಿದ್ದರೆ, ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಹೊರವಲಯ ಹುಳಿಮಂಗಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕೊಟ್ಟಿಗೆಯಲ್ಲಿ ಹದಿನೈದು ಹಸುಗಳನ್ನು ಕಟ್ಟ ಹಾಕಲಾಗಿತ್ತು. ಅದೇ ಕೊಟ್ಟಿಗೆಯಲ್ಲಿ ಎರಡು ಬೈಕ್ ನಿಲ್ಲಿಸಲಾಗಿತ್ತು. ಶುಕ್ರವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬೆಂಕಿ ಆವರಿಸಿದ್ದು, ಒಂಬತ್ತು ಹಸುಗಳು ಸುಟ್ಟು ಕರಕಲಾಗಿವೆ. ಬದುಕುಳಿದಿರುವ ಐದು ಹಸುಗಳಿಗೆ ಗಂಭೀರವಾದ ಸುಟ್ಟಗಾಯಗಳಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿವೆ. ಕೊಟ್ಟಿಗೆಯಲ್ಲಿದ್ದ ಬೈಕ್‌ಗಳು ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Trains cancelled : ಮೂರು ತಿಂಗಳು ಈ ಮಾರ್ಗಗಳ ರೈಲು ಸಂಚಾರ ರದ್ದು!

ಕೊಪ್ಪಳದಲ್ಲಿ ಹೊತ್ತಿ ಉರಿದ ಜ್ಯುವೆಲರಿ ಶಾಪ್‌

ಅಗ್ನಿ ಅವಘಡ ಸಂಭವಿಸಿ ಜ್ಯುವೆಲರಿ ಶಾಪ್‌ವೊಂದು ಹೊತ್ತಿ ಉರಿದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಮೂರು ಅಂತಸ್ತಿನ ಕಟ್ಟಡವು ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಅಪಾರ ಪ್ರಮಾಣದ ಚಿನ್ನಾಭರಣವು ಬೆಂಕೆಗಾಹುತಿ ಆಗಿದೆ. ಗಂಗಾವತಿ ನಗರದ ಗಣೇಶ ಸರ್ಕಲ್‌ನಲ್ಲಿರುವ ಕೆಜಿಪಿ ಜ್ಯುವೆಲರಿ ಶಾಪ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ದೌಡಿಯಿಸಿದ್ದು, ಸತತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.

Fire Accident
ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಲಾರಿ

ಧಾರವಾಡದಲ್ಲಿ ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ

ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಮಂಡ್ಯಾಳ್ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಗೋವಾದಿಂದ ಧಾರವಾಡ ಕಡೆ ಬರುತ್ತಿದ್ದಾಗ ಏಕಾಏಕಿ‌ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗಿಳಿದು ಓಡಿದಿದ್ದಾರೆ.

ಲಾರಿಗೆ ಬೆಂಕಿ‌ ಹತ್ತಿದ ಕಾರಣ ಅಳ್ನಾವರ ರಸ್ತೆ ಕೆಲ ಕಾಲ ಬಂದ್ ಆಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರವಾಡ

Shivshakti Dhama: ಹುಬ್ಬಳ್ಳಿಯ ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ

Shivshakti Dhama: ಹಿಂದು ಸಂಸ್ಕೃತಿಯ ಪ್ರಚಾರ ಮತ್ತು ಐಕ್ಯತೆ ದೃಷ್ಟಿಯಿಂದ ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ ಎಂದು ನಾಮಕರಣ ಮಾಡಿದ ಶೃಂಗೇರಿ ಜಗದ್ಗುರುಗಳು, ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಲಿಂಗಕ್ಕೆ “ಆನಂದೇಶ್ವರ’, ಚಂಡಿಕೇಶ್ವರಿ ಮಾತೆಗೆ “ಜ್ಞಾನಾಂಬಿಕೆ’, ವಿನಾಯಕನಿಗೆ “ವಿಜಯ ಗಣಪತಿ’ ಎಂದು ನಾಮಕರಣ ಮಾಡಿದ್ದಾರೆ.

VISTARANEWS.COM


on

Sringeri Jagadguru inaugurates Shivashakti Dhama at Palikoppa in Hubballi
Koo

ಹುಬ್ಬಳ್ಳಿ: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ (Dr Vijaya Sankeshwar) ಅವರ ಬಹುದಿನಗಳ ಸಂಕಲ್ಪ ಸಾಕಾರಗೊಂಡಿದೆ. ಶ್ರೀ ಶಿವಶಕ್ತಿ ಧಾಮದ (Shivshakti Dhama) ಲೋಕಾರ್ಪಣೆಯು ಗುರುವಾರ ವಿಧ್ಯುಕ್ತವಾಗಿ ನೆರವೇರಿತು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು (Jagadguru Sri Vidhushekhara Bharathi Mahaswamiji) ಶಿವಶಕ್ತಿಧಾಮವನ್ನು ಉದ್ಘಾಟಿಸಿದರು.

ಹಿಂದು ಸಂಸ್ಕೃತಿಯ ಪ್ರಚಾರ ಮತ್ತು ಐಕ್ಯತೆ ದೃಷ್ಟಿಯಿಂದ ಹುಬ್ಬಳ್ಳಿ ಸಮೀಪದ ಪಾಲಿಕೊಪ್ಪದಲ್ಲಿ ನಿಮಿರ್ಸಲಾಗಿರುವ ದೇವಾಲಯಗಳ ಸಮುಚ್ಛಯಕ್ಕೆ “ಶ್ರೀಶಿವಶಕ್ತಿ ಧಾಮ’ ಎಂದು ನಾಮಕರಣ ಮಾಡಿದ ಶೃಂಗೇರಿ ಜಗದ್ಗುರುಗಳು, ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಶಿವಲಿಂಗಕ್ಕೆ “ಆನಂದೇಶ್ವರ’, ಚಂಡಿಕೇಶ್ವರಿ ಮಾತೆಗೆ “ಜ್ಞಾನಾಂಬಿಕೆ’, ವಿನಾಯಕನಿಗೆ “ವಿಜಯ ಗಣಪತಿ’ ಎಂದು ನಾಮಕರಣ ಮಾಡಿದ್ದಾರೆ. ಜತೆಗೆ ಆದಿತ್ಯಾದಿ ನವಗ್ರಹಗಳು, ಶನೈಶ್ಚರ ಸ್ವಾಮಿ ಮತ್ತು ಕ್ಷೇತ್ರಪಾಲಕ ಕಾಲಭೈರವೇಶ್ವರನ ಮೂರ್ತಿಗಳನ್ನು ಮಾ ಶುದ್ಧ ತ್ರಯೋದಶಿಯ ರಾಜಯೋಗದ ಸುಮುಹೂರ್ತದಲ್ಲಿ ಪ್ರಾಣಪ್ರತಿಷ್ಠಾಪನೆ ಮಾಡಿ, ಸ್ವತಃ ಜಗದ್ಗುರುಗಳು ಕುಂಭಾಭಿಷೇಕ ಸಹಿತ ಬ್ರಹ್ಮಕಳಸಾರೋಹಣ ಮಾಡಿದರು.

Sringeri Jagadguru inaugurates Shivashakti Dhama at Palikoppa in Hubballi

ಬುಧವಾರ ಸಂಜೆಯೇ ಪಾಲಿಕೊಪ್ಪ ಕ್ಷೇತ್ರಕ್ಕೆ ಆಗಮಿಸಿದ ಶೃಂಗೇರಿ ಜಗದ್ಗುರುಗಳನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ದೇವಾಲಯದ ಪೂರ್ಣ ಪರಿಸರವನ್ನು ನೋಡಿದ ಶ್ರೀಗಳು ಇದೊಂದು ದೊಡ್ಡ ಕ್ಷೇತ್ರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಶೃಂಗೇರಿ ಪೀಠದ 100ಕ್ಕೂ ಹೆಚ್ಚು ಋತ್ವಿಜರ ತಂಡವು ಕಳೆದೆರಡು ದಿನಗಳಿಂದ ಧಾರ್ಮಿಕ ಕಾರ್ಯಕ್ರಮದ ವೈದಿಕತ್ವವನ್ನು ವಹಿಸಿ, ಸ್ಥಲಶುದ್ಧಿ, ನಾಂದಿಪೂಜೆಯಿಂದ ಆರಂಭಿಸಿ ವಿವಿಧ ಹೋಮ ಮತ್ತು ಹವನ ಹಾಗೂ ಗುರುಪಾದುಕಾ ಪೂಜೆಯೊಂದಿಗೆ ಅಷ್ಟಬಂಧ ಪ್ರಾಣಪ್ರತಿಷ್ಠಾಪನೆಯನ್ನು ನೆರವೇರಿಸಿತು.

Sringeri Jagadguru inaugurates Shivashakti Dhama at Palikoppa in Hubballi

ಗುರುವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಆರಂಭವಾದ ಧಾರ್ಮಿಕ ವಿಧಿವಿಧಾನಗಳು ಅಂತಿಮವಾಗಿ ಜಗದ್ಗುರುಗಳ ಅಮೃತ ಹಸ್ತದಿಂದ ಬ್ರಹ್ಮಕಲಶತೀರ್ಥದ ಅಭಿಷೇಕ ಹಾಗೂ ಮಹಾಪೂಜೆಯೊಂದಿಗೆ ಸಂಪನ್ನಗೊಂಡವು. ಬೃಹತ್​ ಗರ್ಭಗೋಪುರ ಮತ್ತು ರಾಜಗೋಪುರದ ಮೇಲೆ ಪ್ರತಿಷ್ಠಾಪಿಸಲಾಗಿರುವ ಪಂಚಕಲಶಗಳಿಗೆ ಸ್ವತಃ ಜಗದ್ಗುರುಗಳು ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ, ಶ್ರೀಮತಿ ಲಲಿತಾ ವಿಜಯ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ವಾಣಿ ಆನಂದ ಸಂಕೇಶ್ವರ, ವಿಜಯಾನಂದ ಟ್ರಾವೆಲ್ಸ್​ ಎಂ.ಡಿ. ಶಿವಾ ಸಂಕೇಶ್ವರ ಹಾಗೂ ಸಂಕೇಶ್ವರ ಕುಟುಂಬದ ಎಲ್ಲ ಸದಸ್ಯರು, ಬಂಧುಗಳು ಉಪಸ್ಥಿತರಿದ್ದರು.

Sringeri Jagadguru inaugurates Shivashakti Dhama at Palikoppa in Hubballi

ವಿಧಾನ ಪರಿಷತ್​ ಸದಸ್ಯ ಬಿ.ಜಿ. ಪಾಟೀಲ, ಬಿಜೆಪಿ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಶೃಂಗೇರಿ ಪೀಠದ ಆಡಳಿತಾಧಿಕಾರಿ ಪಿ.ಎ. ಮುರುಳಿ, ಆಡಳಿತ ಸಲಹೆಗಾರರಾದ ಡಾ. ಗೌರಿಶಂಕರ್​ ಮತ್ತಿತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.‌

ವಿಜಯ ಸಂಕೇಶ್ವರರ ಧರ್ಮಶ್ರದ್ಧೆ ಎಲ್ಲರಿಗೂ ಮಾದರಿ: ಶೃಂಗೇರಿ ಜಗದ್ಗುರುಗಳು

ಶಿವಶಕ್ತಿ ಧಾಮದ ಕರ್ತೃಗಳಾದ ಡಾ. ವಿಜಯ ಸಂಕೇಶ್ವರ ಅವರಿಗಿರುವ ಧರ್ಮಶ್ರದ್ಧೆ ಇತರರಿಗೆ ಮಾದರಿ ಎಂದು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ಧಾರ್ಮಿಕ ವಿಧಿಗಳನ್ನು ಪೂರೈಸಿದ ನಂತರ ನಡೆದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು, ಮನುಷ್ಯ ದೊಡ್ಡ ಸ್ಥಾನಕ್ಕೆ ತಲುಪಿದ ನಂತರ ತಾನು ಬೆಳೆದು ಬಂದ ಹಾದಿಯನ್ನು ಮರೆಯುತ್ತಾನೆ. ಜತೆಗೆ ಧರ್ಮ, ಸಂಸ್ಕಾರವನ್ನು ಮರೆಯುತ್ತಾನೆ. ಆದರೆ, ಉದ್ಯಮಿಗಳಾದ ಡಾ. ವಿಜಯ ಸಂಕೇಶ್ವರ ಅವರು ಇಡೀ ದೇಶವೇ ಗುರುತಿಸುವ ಮಟ್ಟಿಗೆ ಸಾಧನೆ ಮಾಡಿದರೂ ಸನಾತನ ಧರ್ಮದ ಮೇಲಿನ ಶ್ರದ್ಧೆಯನ್ನು ಮರೆತಿಲ್ಲ. ಮಾತ್ರವಲ್ಲ, ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಕೂಡಾ ಅದೇ ಸಂಸ್ಕಾರವನ್ನು ನೀಡಿದ್ದಾರೆ. ವಿಜಯ ಸಂಕೇಶ್ವರರ ಸಂಕಲ್ಪದಂತೆ ಶಿವಶಕ್ತಿ ಧಾಮವನ್ನು ಸನಾತನ ಧರ್ಮದ ಕೇಂದ್ರವಾಗಿ ಬೆಳೆಸಲಾಗುವುದು ಎಂದು ಹೇಳಿದರು.

ಹಿಂದುಗಳ ಐಕ್ಯತೆಗೆ ಅಂತರ್ಜಾತಿ ವಿವಾಹ ಅವಶ್ಯ

ಹಿಂದುಗಳಲ್ಲಿರುವ ಮೇಲು ಮತ್ತು ಕೀಳು ಭಾವನೆ ನಿವಾರಣೆಯಾಗಿ ಹಿಂದುಗಳು ಒಗ್ಗಟ್ಟಾಗಲು ಅಂತರ್ಜಾತಿ ವಿವಾಹ ಅವಶ್ಯವೆಂದು ಡಾ. ವಿಜಯ ಸಂಕೇಶ್ವರ ಪ್ರತಿಪಾದಿಸಿದರು.

ಪಾಲಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಶಕ್ತಿ ಧಾಮದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಡಾ. ವಿಜಯ ಸಂಕೇಶ್ವರ, ಹಿಂದು ಧರ್ಮದ ಒಗ್ಗಟ್ಟು ಮತ್ತು ಸಂಘಟನೆಗೆ ಸಂಬಂಧಪಟ್ಟಂತೆ ಅನೇಕ ಮಹಾತ್ಮರು ಬಹಳ ಹಿಂದಿನಿಂದಲೂ ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಆದರೆ, ಈವರೆಗೆ ಅದು ಪೂರ್ಣ ಪ್ರಮಾಣದಲ್ಲಿ ಫಲ ನೀಡಿಲ್ಲ. ಹಿಂದುಗಳಲ್ಲಿರುವ ಜಾತಿ ಭೇದ, ಅಸ್ಪೃಶ್ಯತೆ, ತಾರತಮ್ಯಗಳಿಂದ ಹಿಂದುಗಳು ಒಂದಾಗಲು ಸಾಧ್ಯವಾಗಿಲ್ಲ. ಅಂತರ್ಜಾತಿ ವಿವಾಹದಿಂದ ಪರಸ್ಪರ ಪ್ರೀತಿ, ಬಾಂಧವ್ಯ ಮೂಡುತ್ತದೆ. ಇದರಿಂದ ಹಿಂದು ಸಮಾಜ ಬಲಿಷ್ಠವಾಗಲು ಸಾಧ್ಯ ಎಂದು ವಿವರಿಸಿದರು.

ಕಳೆದ 10 ವರ್ಷಗಳ ಹಿಂದೆ ರಾಮನ ಹೆಸರು ಹೇಳುವುದಾಗಲೀ, ರಾಮನ ಮಂದಿರ ನಿರ್ಮಾಣ ಮಾಡುವುದಾಗಲೀ ಅಥವಾ ನಾನೊಬ್ಬ ಹಿಂದು ಎಂದು ಹೇಳಿಕೊಳ್ಳುವುದಕ್ಕೂ ಪೂರಕವಾದ ಪರಿಸ್ಥಿತಿ ಇರಲಿಲ್ಲ. ಆದರೆ, ಇಂದು ಜಗತ್ತಿನ ಎಲ್ಲಿ ಬೇಕಾದರೂ ನಾನೊಬ್ಬ ಹಿಂದು ಎಂಬುದನ್ನು ಹೆಮ್ಮೆಯಿಂದ ಹೇಳಬಹುದು. ಇಂತಹ ಪರಿಸ್ಥಿತಿಯನ್ನು ನಿಮಿರ್ಸಿಕೊಟ್ಟ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ಡಾ. ವಿಜಯ ಸಂಕೇಶ್ವರ ಹೇಳಿದರು.

ಶೃಂಗೇರಿ ಮಠಕ್ಕೆ ಹಸ್ತಾಂತರ

ಶಿವಶಕ್ತಿ ಧಾಮವನ್ನು ಆರಾಧನಾ ಟ್ರಸ್ಟ್​ನೊಂದಿಗೆ ಇಂದಿನಿಂದ ಜಗತಸಿದ್ಧ ಶೃಂಗೇರಿ ಶಾರದಾ ಪೀಠದ ಸುಪರ್ದಿಗೆ ಹಸ್ತಾಂತರ ಮಾಡುತ್ತಿದ್ದೇವೆ ಎಂದು ಡಾ. ವಿಜಯ ಸಂಕೇಶ್ವರ ಘೋಷಣೆ ಮಾಡಿದರು. ಆರಾಧನಾ ಟ್ರಸ್ಟ್​ ಆಡಳಿತ ಮಂಡಳಿಯ ಸದಸ್ಯರು, ನಮ್ಮ ಎಲ್ಲ ಸಂಬಂಧಿಕರು ಮನಃಪೂರ್ವಕವಾಗಿ ಶೃಂಗೇರಿ ಮಠಕ್ಕೆ ಈ ತೀರ್ಥ ಕ್ಷೇತ್ರವನ್ನು ಹಸ್ತಾಂತರ ಮಾಡಲು ಒಪ್ಪಿದ್ದೇವೆ ಎಂದು ಹೇಳಿದರು.

ಶನಿ ದೇಗುಲ ಕಟ್ಟಿದ್ದು ಏಕೆಂದು ವಿವರಣೆ

ಇಲ್ಲಿ ಶಿವನ ಮೂರ್ತಿಯಲ್ಲದೆ ಬಲಮುರಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಶಿವ ಪಾರ್ವತಿ ದೇವಾಲಯ, ನವಗ್ರಹ, ಕಾಲಭೈರವ ದೇಗುಲ ನಿರ್ಮಾಣ ಮಾಡಲಾಗಿದೆ. ನನಗೆ ಬಹಳ ಇಷ್ಟದ ದೇವರು ಶನಿದೇವರು. ಎಲ್ಲರಿಗೂ ಜೀವನದಲ್ಲಿ ತಾಪತ್ರಯ ಇರುತ್ತವೆ. ಅವರೆಲ್ಲ ಶನಿದೇವರ ದರ್ಶನ ಮಾಡಬೇಕಾದರೆ ತಮಿಳುನಾಡಿನ ತಿರುನೆಲ್ಲೂರು, ಇಲ್ಲವೇ ಮಹಾರಾಷ್ಟ್ರದ ಶನಿಶಿಂಗಣಾಪುರಕ್ಕೆ ಹೋಗಬೇಕು. ಸಾವಿರಾರು ಮಠ, ಮಂದಿರಗಳನ್ನು ನೋಡಿದ್ದೇನೆ. ಆದರೆ, ಶನಿಶಿಂಗಣಾಪುರ ಬಹಳ ಇಷ್ಟವಾಗುತ್ತದೆ. ಅಲ್ಲಿ ಯಾವುದೇ ವಸ್ತು ಕಳ್ಳತನವಾಗುವುದಿಲ್ಲ. ಅನೇಕ ಬಾರಿ ಹೋಗಿ ಬಂದಿದ್ದೇನೆ. ಹಾಗಾಗಿ ಇಲ್ಲಿ ಕೂಡ ಶನಿ ದೇಗುಲ ಇರಬೇಕು ಎನ್ನುವ ಇಚ್ಛೆಯಿಂದ ಕಟ್ಟಲಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಕೊಡುವರು ದೇಣಿಗೆ: ಆನಂದ ಸಂಕೇಶ್ವರ್

‌ಈ ಸಂದರ್ಭದಲ್ಲಿ ಮಾತನಾಡಿದ ವಿಆರ್​ಎಲ್​ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರು, ಹುಬ್ಬಳ್ಳಿಯಿಂದ 21 ಕಿ.ಮೀ. ದೂರದ ಪಾಲಿಕೊಪ್ಪದಲ್ಲಿ ಶ್ರೀ ಶಿವಶಕ್ತಿ ಧಾಮವನ್ನು ನಿಮಿರ್ಸಲಾಗಿದೆ. ನಮ್ಮ ತಂದೆ ಡಾ. ವಿಜಯ ಸಂಕೇಶ್ವರ ಅವರ ಸಂಕಲ್ಪದಂತೆ ಮೊದಲು ಆರಾಧನಾ ಟ್ರಸ್ಟ್​ ಸ್ಥಾಪಿಸಲಾಯಿತು. ಬಹಳಷ್ಟು ಜನರು ದೇಣಿಗೆ ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಈ ಟ್ರಸ್ಟ್​ಗೆ ದೇಣಿಗೆ ನೀಡಲಿದ್ದಾರೆ ಎಂದು ತಿಳಿಸಿದರು.

ನಾವು ಶಿವನ ಭಕ್ತರು. ಶಿವಾ ದೇವಾಲಯ ನಿಮಿರ್ಸಬೇಕೆಂದು ಸಂಕಲ್ಪ ಮಾಡಿದ್ದೆವು. ಅದೀಗ ಸಾಕಾರಗೊಂಡಿದೆ. ಶಿವಶಕ್ತಿ ಧಾಮದಲ್ಲಿ ಆನಂದೇಶ್ವರ, ಜ್ಞಾನಾಂಬಿಕೆ, ವಿಜಯ ಗಣಪತಿ, ಶನೈಶ್ಚರ ಸೇರಿ ವಿವಿಧ ಮೂತಿರ್ಗಳಿವೆ. ಮುರುಡೇಶ್ವರ ದೇವಸ್ಥಾನ ನಿಮಿರ್ಸಿದವರನ್ನು ಕರೆಯಿಸಿ ಈ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಪುಷ್ಕರಣಿ, ಹೊರ ಸಭಾಗೃಹ, ಅತಿಥಿಗೃಹ, ರಥಬೀದಿ ಹೀಗೆ ವಿಶೇಷ ಕಟ್ಟಡಗಳು ಇಲ್ಲಿವೆ. ಶೃಂಗೇರಿ ಮಠವು ಇದರ ನಿರ್ವಹಣೆಯ ಜವಾಬ್ದಾರಿ ತೆಗೆದುಕೊಂಡಿದೆ ಎಂದರು.

ಸತ್ಸಂಪ್ರದಾಯದ ಸೇತು ಶಿವಶಕ್ತಿಧಾಮ: ಹರಿಪ್ರಕಾಶ್‌ ಕೋಣೆಮನೆ

ಬಿಜೆಪಿ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಡಾ. ವಿಜಯ ಸಂಕೇಶ್ವರ ಅವರು ಸ್ವತಃ ಧರ್ಮ ಪ್ರಜ್ಞೆ ಇರುವ ವ್ಯಕ್ತಿ, ಆಧ್ಯಾತ್ಮಿಕ ಜೀವಿ ಎಂಬುದು ಎಲ್ಲರಿಗೂ ಗೊತ್ತು. ರಾಜ್ಯ ಮತ್ತು ದೇಶದ ಹಲವು ಕಡೆ ಇಂತಹ ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡಿದ್ದಾರೆ. ಆದರೆ, ತಮ್ಮ ಧರ್ಮ ಕಾರ್ಯ ನಿರಂತರವಾಗಿ ಮುಂದಿನ ಪೀಳಿಗೆಗೂ ಮುಂದುವರಿಯಬೇಕೆಂಬ ಸಂಕಲ್ಪದಿಂದ ಶಿವಶಕ್ತಿ ಧಾಮವನ್ನು ನಿಮಿರ್ಸಿದ್ದಾರೆ ಎಂದು ಹೇಳಿದರು.

Sringeri Jagadguru inaugurates Shivashakti Dhama at Palikoppa in Hubballi

ಇದನ್ನೂ ಓದಿ: Swarnavalli Mutt: ಸ್ವರ್ಣವಲ್ಲೀ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ; ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಎಂದು ನಾಮಕರಣ

ಸನಾತನ ಧರ್ಮದ ಸತ್ಸಂಪ್ರದಾಯಗಳು ನಿರಂತರವಾಗಿ ಮುಂದುವರಿಯಬೇಕು ಎಂಬುದನ್ನು ಸದಾ ಪ್ರದಿಪಾದಿಸುವ ಡಾ. ವಿಜಯ ಸಂಕೇಶ್ವರ ಅವರು ಅದೇ ಹಾದಿಯಲ್ಲಿ ತಮ್ಮ ಮಗ ಆನಂದ ಸಂಕೇಶ್ವರ ಅವರನ್ನು ಬೆಳೆಸಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಈ ಬೃಹತ್​ ದೇವಾಲಯದ ಹಿಂದೆ ಅವರ ಧರ್ಮಶ್ರದ್ಧೆ ಅಡಕವಾಗಿದೆ ಎಂದು ಹರಿಪ್ರಕಾಶ್ ಕೋಣೆಮನೆ‌ ಹೇಳಿದರು.

Continue Reading

ದೇಶ

ದೇಗುಲಗಳಿಗೆ ತೆರಿಗೆ, ಅನ್ಯಧರ್ಮೀಯರಿಗೆ ಹಣ ಬಳಕೆ ಕಪೋಲಕಲ್ಪಿತ ಆರೋಪ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!

CM Siddaramaiah: ದೇವಸ್ಥಾನಗಳ ಮೇಲೆ ತೆರಿಗೆ ಮತ್ತು ಹಿಂದೂ ದೇವಾಲಯಗಳ ಹಣ ಅನ್ಯ ಧರ್ಮೀಯರಿಗೆ ಬಳಕೆ ಮಾಡಲಾಗುತ್ತಿದೆ ಎಂಬುದು ಬಿಜೆಪಿಯ ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

VISTARANEWS.COM


on

Tax on temples and money used for other community Fictitious accusation Says CM Siddaramaiah
Koo

ಬೆಂಗಳೂರು: ಹಿಂದೂಯೇತರ ಸಮುದಾಯಗಳಿಗೆ (Non-Hindu community) ಹಿಂದೂ ದೇವಸ್ಥಾನಗಳ (Hindu Temples) ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ (Tax On Temples) ಎನ್ನುವ ಬಿಜೆಪಿ (BJP Party) ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:
(1) ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;
(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ
(3) ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.
ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:
(1) ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;
(2) ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
(3) ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.
ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ.

ಚುನಾವಣೆ ಹಿನ್ನೆಲೆಯಲ್ಲಿ ಆರೋಪ ಎಂದ ಸಿದ್ದರಾಮಯ್ಯ

ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ. ಇದೆಲ್ಲವನ್ನೂ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದು ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿ ಹರಡಲೇಬೇಕು!

ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಕಾರಣಕ್ಕಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರೆ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ. ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಡಾಲರ್‌ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ಅವರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟವಾಗಿದೆ ಎಂದು ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸ್ವಾಗತಾರ್ಹ

Continue Reading

ಬೆಂಗಳೂರು

Nitin Gadkari : ಪೆಟ್ರೋಲ್‌ ಬೆಲೆ ಶೀಘ್ರವೇ 50 ರೂ.ಗೆ ಇಳಿಯಲಿದೆ ಎಂದ ನಿತಿನ್‌ ಗಡ್ಕರಿ

Nitin Gadkari : ರಾಜ್ಯದಲ್ಲಿ 13,458 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ 50 ರೂ.ಗೆ ಒಂದು ಲೀಟರ್‌ ಪೆಟ್ರೋಲ್‌ ಸಿಗಲಿದೆ ಎಂದರು.

VISTARANEWS.COM


on

Nitin Gadkari highways
Koo

ಬೆಳಗಾವಿ/ಶಿವಮೊಗ್ಗ: ಲೋಕಸಭಾ ಚುನಾವಣೆ (Parliament Election) ಸಮೀಪಿಸುತ್ತಿರುವ ಹೊತ್ತಿನಲ್ಲೇ ರಾಜ್ಯದಲ್ಲಿ 13,458 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ (18 National high way scheme) ಚಾಲನೆ ದೊರೆತಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ನಡೆದ ಎರಡು ಕಾರ್ಯಕ್ರಮಗಳ ಮೂಲಕ ಹೆದ್ದಾರಿ ಕ್ರಾಂತಿಗೆ ಅಡಿಗಲ್ಲಿಟ್ಟರು. ಇದೇ ವೇಳೆ ಎಲೆಕ್ಟ್ರಾನಿಕ್‌ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದಂತೆಯೇ ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಬೆಲೆ 50 ರೂ.ಗಳಿಗೆ ಇಳಿಯಲಿದೆ ಎಂದರು.

ಬೆಳಗಾವಿಯಲ್ಲಿ 7290 ಕೋಟಿ ರೂ. ವೆಚ್ಚದ 376 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಚಾಲನೆ

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರ ಈ 8 ಜಿಲ್ಲೆಗಳ‌ 376 ಕಿ.ಮೀ ಉದ್ದದ ರಸ್ತೆಗಳಿಗೆ 7290 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಿದೆ.

ಈ ವೇಳೆ ಮಾತನಾಡಿದ ನಿತಿನ್ ಗಡ್ಕರಿ ಅವರು, ಬೆಳಗಾವಿ ಮುಂದಿನ ದಿನಗಳಲ್ಲಿ ಎಥೆನಾಲ್‌ ಉತ್ಪಾದನೆ ಅಷ್ಟೇ ಅಲ್ಲ, ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ ಎಂದರು.

ಲೋಕೋಪಯೋಗಿ ಸಚಿವರು ಕರ್ನಾಟಕದಲ್ಲಿ ಇಥೆನಾಯಿಲ್ ಬಳಕೆಗೆ ಪ್ರೋತ್ಸಾಹ ಕೊಡಿ ಎಂದು ಕೇಳಿದ್ದಾರೆ. ಇದರಿಂದ ಪೆಟ್ರೋಲ್ ಗಿಂತಲೂ ಕಡಿಮೆ ದರದಲ್ಲಿ ಎಥೆನಾಲ್‌ ಲಭ್ಯವಾಗಲಿದೆ. ಪೆಟ್ರೋಲ್​ನಲ್ಲಿ ಎಥೆನಾಲ್ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಥೆನಾಲ್​ನ್ನು ಡೀಸೆಲ್​ನಲ್ಲಿ ಉಪಯೋಗಿಸಲಾಗುವುದು ಎಂದು ಗಡ್ಕರಿ ತಿಳಿಸಿದರು.

ನಿತಿನ್‌ ಗಡ್ಕರಿ ಅವರನ್ನು ಹಾಡಿ ಹೊಗಳಿದ ಸತೀಶ್‌ ಜಾರಕಿಹೊಳಿ

ಸಮಾರಂಭದಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರು ನಿತಿನ್‌ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರನ್ನು ನೋಡಿದರೆ ಹೆಮ್ಮೆ ಆಗುತ್ತದೆ. ನಿತಿನ್ ಗಡ್ಕರಿ ಅಂದರೆ ಸಡಕ್ ಕೆ ಭಾಷಾ ಎಂದು ಕೊಂಡಾಡಿದರು.

ಕಳೆದ 9 ತಿಂಗಳಲ್ಲಿ 5 ಬಾರಿ ಗಡ್ಕರಿ ಅವರನ್ನ ಭೇಟಿ ಮಾಡಿರುವೆ. ರಾಜ್ಯದಲ್ಲಿ ನನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸೂಚಿಸಿದ್ದಾರೆ. ಅದರಲ್ಲಿ ಕೆಲವೊಂದಿಷ್ಟು ಕಾಮಗಾರಿ ಆರಂಭ ಮಾಡಿದ್ದೇವೆ ಎಂದು ತಿಳಿಸಿದರು. ಕೇಂದ್ರ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗ ದ್ವೇಷದ ಭಾವನೆ ಇರುತ್ತದೆ. ಆದರೆ ನಿತಿನ್ ಗಡ್ಕರಿ ಅವರ ಸಚಿವಾಲಯದಲ್ಲಿ ಹಾಗಾಗಿಲ್ಲ. ಅದು ನಮಗೆ ನಮ್ಮದೇ ಸರ್ಕಾರ ಎನ್ನುವ ಭಾವನೆ ಬರುತ್ತದೆ. ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ. ಇದೇ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಬಿಜೆಪಿ, ಕಾಂಗ್ರೆಸ್ ಶಾಸಕರಿಗೆ ಸಮಾನ ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಈರಣ್ಣ ಕಡಾಡಿ, ಮಂಗಳಾ ಅಂಗಡಿ ಅಮರೇಶ ನಾಯಕ್, ಕರಡಿ ಸಂಗಣ್ಣ, ಪಿ.ಸಿ.ಗದ್ದಿಗೌಡರ್ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಎರಡು ರೋಪ್‌ ವೇ ನಿರ್ಮಾಣ: ನಿತಿನ್‌ ಗಡ್ಕರಿ

ಬೆಳಗಾವಿ ಕಾರ್ಯಕ್ರಮದ ಬಳಿಕ ಶಿವಮೊಗ್ಗಕ್ಕೆ ಆಗಮಿಸಿದ ನಿತಿನ್‌ ಗಡ್ಕರಿ ಅವರು ಅಲ್ಲಿ 6168 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಎಕ್ಸ್‌ಪ್ರೆಸ್‌ ಹೈ ವೇ ನಿರ್ಮಾಣ ಮಾಡಲಾಗುವುದು ಎಂದು ಪ್ರಕಟಿಸಿದರು. ದೇಶದಲ್ಲಿ 16 ರೋಪ್ ವೇ ನಿರ್ಮಾಣ ಮಾಡಲಾಗುವುದು. ಅದರಲ್ಲಿ ಎರಡು ಕರ್ನಾಟಕದಲ್ಲಿ ನಿರ್ಮಾಣವಾಗಲಿವೆ. ಕೊಡಚಾದ್ರಿಯಿಂದ ಕೊಲ್ಲೂರಿಗೆ ಮತ್ತು ಕೊಪ್ಪಳದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲಾಗುವುದು ಎಂದರು.

ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಕೇಂದ್ರ ಸಚಿವರು, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ದೇಶಕ್ಕೆ ನಂಬರ್ ಒನ್‌ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅವರು ನಿರಂತರವಾಗಿ ನನ್ನ ಕಚೇರಿಗೆ ಬಂದು ಭೇಟಿ ಮಾಡಿದ್ದಾರೆ. ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರಲ್ಲದೆ, ಮುಂದಿನ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿ ಎಂದರು.

ಪೆಟ್ರೋಲ್‌ ಬೆಲೆ 50 ರೂ.ಗೆ ಇಳಿಯಲಿದೆ ಎಂದ ಗಡ್ಕರಿ

ಕರ್ನಾಟಕ ಆರ್ಥಿಕವಾಗಿ ಮುಂದುವರಿದಿದೆ. ಕರ್ನಾಟಕದಲ್ಲಿ ಎಲೆಕ್ಟ್ರಾನಿಕ್ ವಾಹನಗಳು ಹೆಚ್ಚೆಚ್ಚು ಬಳಕೆಯಾಗುತ್ತಿವೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಅನಿಲ ಬಳಕೆಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಎಲೆಕ್ಟ್ರಾನಿಕ್ ವಾಹನಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡಬೇಕು. ಆಗ ಪೆಟ್ರೋಲ್ 50 ರೂಪಾಯಿಗೆ ಸಿಗುತ್ತದೆ ಎಂದು ಹೇಳಿದರು.

ರಾಘವೇಂದ್ರ ಅವರು ಸಾಗರದಿಂದ ಮರಕುಟುಕಕ್ಕೆ ರಸ್ತೆ ಕೇಳಿದ್ದಾರೆ. ಅದಕ್ಕೆ ಅನುಮೋದನೆ ನೀಡುತ್ತೇನೆ. ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ಮಾಡಲು, ಅಧಿಕಾರಿಗಳು ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ನಿತಿನ್‌ ಗಡ್ಕರಿ ಹೇಳಿದರು.

ಕರ್ನಾಟಕಕ್ಕೆ ಸಾಕಷ್ಟು ರಸ್ತೆಗಳನ್ನು ನೀಡಿದ್ದೇನೆ, ಇನ್ನಷ್ಟು ರಾಷ್ಟ್ರೀಯ ಹೆದ್ದಾರಿಗಳನ್ನು ಮುಂದಿನ ದಿನದಲ್ಲಿ ನಿರ್ಮಾಣ ಮಾಡಲಾಗುವುದು. ಬೆಂಗಳೂರು ಟು ಚೆನೈ ಎಕ್ಸ್‌ಪ್ರೆಸ್‌ ರಸ್ತೆ ಶ್ರೀಘ್ರದಲ್ಲೇ ಮುಕ್ತಾಯವಾಗುತ್ತದೆ. ಆಗ ಆಗ ಎರಡು ಗಂಟೆಯಲ್ಲಿ ಚೆನ್ನೈ ತಲುಪಬಹುದು ಎಂದು ಹೇಳಿದರು.

Continue Reading

ದೇಶ

Rahul Gandhi: ಐಶ್ವರ್ಯಾ ರೈರನ್ನು ಅವಮಾನಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ತರಾಟೆ

Rahul Gandhi: ರಾಮ ಮಂದಿರ ಉದ್ಘಾಟನೆ ವೇಳೆ ಶೇ.70ರಷ್ಟು ಹಿಂದುಳಿದ ವರ್ಗ, ದಲಿತರು, ಆದಿವಾಸಿಗಳಿಗೆ ಸೂಕ್ತ ಪ್ರಾತಿನಿಧಿ ದೊರೆತಿರಲಿಲ್ಲ ಎಂದು ಹೇಳುವಾಗ ರಾಹುಲ್ ಗಾಂಧಿ ಅವರು ಐಶ್ವರ್ಯಾ ರೈ ಹೆಸರನ್ನು ಎಳೆದು ತಂದಿದ್ದರು.

VISTARANEWS.COM


on

BJP hits out at Rahul Gandhi for insulting Actor aishwarya rai bachchan
Koo

ನವದೆಹಲಿ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Actor aishwarya rai bachchan) ಕುರಿತು ರಾಹುಲ್ ಗಾಂಧಿ(Rahul Gandhi) ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯು (BJP Party) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಐಶ್ವರ್ಯಾ ರೈ ಬಚ್ಚನ್‌ ಕುರಿತು ಕೀಳಾಗಿ ಮಾತನಾಡುವ ಮೂಲಕ ರಾಹುಲ್ ಗಾಂಧಿ ಅವರು ಕೆಳಮಟ್ಟಕ್ಕೆ ಇಳಿದಿದ್ದಾರೆ. 53 ವರ್ಷದ ರಾಹುಲ್ ಗಾಂಧಿ ಅವರು, ಸ್ವಂತವಾಗಿ ಮೇಲೆ ಬಂದ ಮತ್ತು ಯಶಸ್ವಿ ಮಹಿಳೆ ಜತೆಗೆ ಅಪಾಯಕಾರಿ ಮತ್ತು ತೆಗಳುವ ಗೀಳು ಬೆಳೆಸಿಕೊಂಡಿದ್ದಾರೆಂದು ಬಿಜೆಪಿ ಆರೋಪಿಸಿದೆ.

ಉತ್ತರ ಪ್ರದೇಶದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ಕಳೆದ ತಿಂಗಳು ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮವನ್ನು ವಿಶೇಷವಾಗಿ ಟೀಕಿಸಿದ ಗಾಂಧಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ಶತಕೋಟ್ಯಾಧಿಪತಿಗಳು ಭಾಗವಹಿಸಿದ್ದ ಮಹಾ ಸಮರ್ಪಣೆ ಸಮಾರಂಭದಲ್ಲಿ ದೇಶದ ಜನಸಂಖ್ಯೆಯ 73 ಪ್ರತಿಶತವನ್ನು ಒಳಗೊಂಡಿರುವ ಒಬಿಸಿ, ದಲಿತ ಅಥವಾ ಬುಡಕಟ್ಟು ಸಮುದಾಯಗಳಿಂದ ಯಾರೂ ಭಾಗವಹಿಸಲಿಲ್ಲ ಎಂದು ರಾಹುಲ್ ಹೇಳಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಭಾಗವಹಿಸಿದ್ದರೆ, ಐಶ್ವರ್ಯಾ ರೈ ಬಚ್ಚನ್ ಅವರೊಂದಿಗೆ ಅಯೋಧ್ಯೆಗೆ ಹೋಗಿರಲಿಲ್ಲ ಅಥವಾ ಅವರು ಸಮಾರಂಭದಲ್ಲಿ ಇರಲಿಲ್ಲ. ಆದರೂ ರಾಹುಲ್ ಗಾಂಧಿ ಅವರು, ಐಶ್ವರ್ಯಾ ರೈ ಅವರು ಹೋಗಿದ್ದರು ಎಂದು ಹೇಳಿದ್ದರು.

ಭಾರತೀಯರ ನಿರಂತರ ನಿರಾಕರಣೆಗಳಿಂದ ಹತಾಶರಾಗಿರುವ ರಾಹುಲ್ ಗಾಂಧಿ ಅವರು ಭಾರತದ ಹೆಮ್ಮೆಯ ಐಶ್ವರ್ಯಾ ರೈ ಅವರನ್ನು ಅವಮಾನಿಸುವ ಹೊಸ ಅಧೋಗತಿಗೆ ಇಳಿದಿದ್ದಾರೆ ಎಂದು ಬಿಜೆಪಿಯ ಕರ್ನಾಟಕ ರಾಜ್ಯ ಘಟಕವು ಹೇಳಿದೆ. “ಶೂನ್ಯ ಸಾಧನೆಗಳೊಂದಿಗೆ ನಾಲ್ಕನೇ ತಲೆಮಾರಿನ ರಾಜವಂಶವು ಈಗ ರಾಹುಲ್ ಗಾಂಧಿಯವರ ಇಡೀ ಕುಟುಂಬಕ್ಕಿಂತ ಭಾರತಕ್ಕೆ ಹೆಚ್ಚಿನ ಕೀರ್ತಿಯನ್ನು ತಂದ ಐಶ್ವರ್ಯಾ ರೈ ವಿರುದ್ಧ ನಿಂದನೆಗಳನ್ನು ಆಶ್ರಯಿಸಿದೆ ಎಂದು ಟೀಕಿಸಿದೆ.

ರಾಹುಲ್ ಗಾಂಧಿ ಅವರು ತಮ್ಮ ಭಾಷಣಗಳಲ್ಲಿ ಕಲಾವಿದರನ್ನು ಉಲ್ಲೇಖಿಸಿದ ವಿವಿಧ ನಿದರ್ಶನಗಳ ತುಣುಕುಗಳನ್ನು ಬಿಜೆಪಿ ಹಂಚಿಕೊಂಡಿದೆ. ಅಲ್ಲದೇ, ಕನ್ನಡತಿಗೆ ಅವಮಾನವಾಗಿದ್ದರೂ ಕರ್ನಾಟಕದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಸುಮ್ಮನಿದ್ದಾರೆಂದು ಬಿಜೆಪಿ ಪ್ರಶ್ನಿಸಿದೆ. ನಿಮ್ಮ ಬಾಸ್ ಕನ್ನಡಿಗನನ್ನು ಅವಮಾನಿಸುವುದನ್ನು ಮುಂದುವರೆಸಿರುವ ನೀವು ನಿಮ್ಮ ಕನ್ನಡಾಭಿಮಾನವನ್ನು ಎತ್ತಿ ಹಿಡಿಯುವಿರಿ ಮತ್ತು ಅಂತಹ ಅಗೌರವದ ವಿರುದ್ಧ ಮಾತನಾಡುತ್ತೀರಾ ಅಥವಾ ನಿಮ್ಮ ಮುಖ್ಯಮಂತ್ರಿ ಕುರ್ಚಿಯನ್ನು ಕಾಪಾಡಲು ನೀವು ಮೌನವಾಗಿರುತ್ತೀರಾ? ಎಂದು ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Sona Mohapatra: ಮೋದಿ ಟೀಕಿಸಲು ಐಶ್ವರ್ಯಾ ಹೆಸರು ಬಳಕೆ, ರಾಹುಲ್ ಗಾಂಧಿ ವಿರುದ್ಧ ಆಕ್ರೋಶ

Continue Reading
Advertisement
Sringeri Jagadguru inaugurates Shivashakti Dhama at Palikoppa in Hubballi
ಧಾರವಾಡ1 min ago

Shivshakti Dhama: ಹುಬ್ಬಳ್ಳಿಯ ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ

Tax on temples and money used for other community Fictitious accusation Says CM Siddaramaiah
ದೇಶ14 mins ago

ದೇಗುಲಗಳಿಗೆ ತೆರಿಗೆ, ಅನ್ಯಧರ್ಮೀಯರಿಗೆ ಹಣ ಬಳಕೆ ಕಪೋಲಕಲ್ಪಿತ ಆರೋಪ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!

Nitin Gadkari highways
ಬೆಂಗಳೂರು39 mins ago

Nitin Gadkari : ಪೆಟ್ರೋಲ್‌ ಬೆಲೆ ಶೀಘ್ರವೇ 50 ರೂ.ಗೆ ಇಳಿಯಲಿದೆ ಎಂದ ನಿತಿನ್‌ ಗಡ್ಕರಿ

BJP hits out at Rahul Gandhi for insulting Actor aishwarya rai bachchan
ದೇಶ50 mins ago

Rahul Gandhi: ಐಶ್ವರ್ಯಾ ರೈರನ್ನು ಅವಮಾನಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ತರಾಟೆ

INDIA Alliance partners Congress and AAP Seal seat deal for Goa, Haryana, Gujarat
ದೇಶ1 hour ago

INDIA Alliance: ದಿಲ್ಲಿ ಬಳಿಕ ಗೋವಾ, ಹರ್ಯಾಣ, ಗುಜರಾತ್‌ನಲ್ಲೂ ಕಾಂಗ್ರೆಸ್-ಆಪ್ ಸೀಟು ಹಂಚಿಕೆ ಫೈನಲ್!

Aryaman Ashok Shankar
ಚಾಮರಾಜನಗರ1 hour ago

Social Sevice : ಶ್ರವಣದೋಷವುಳ್ಳ ಮಕ್ಕಳ ಕೇಂದ್ರಕ್ಕೆ ಕ್ರೀಡಾಪರಿಕರಗಳ ವಿತರಣೆ

ರಾಜಕೀಯ1 hour ago

Karnataka Budget Session 2024: ಈ ಸರ್ಕಾರದಿಂದ ಹಿಂದೂಗಳಿಗೆ ದ್ರೋಹ: ಆರ್‌. ಅಶೋಕ್‌

Mudda Hanumegowda joins Congress
ತುಮಕೂರು1 hour ago

Mudda hanumegowda : ಕೆಲವರ ಅತೃಪ್ತಿ ನಡುವೆ ಮತ್ತೆ ಕೈ ಸೇರಿದ ಮುದ್ದಹನುಮೇಗೌಡ

D. hiremath foundation
ಉತ್ತರ ಕನ್ನಡ2 hours ago

Arun Yogiraj : ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್​ ಯೋಗಿರಾಜ್​ಗೆ ‘ಅಭಿನವ ಅಮರ ಶಿಲ್ಪಿ’ ಪುರಸ್ಕಾರ

For Registration Movie Telugu Dubbing Rights sold for huge amount
ಸಿನಿಮಾ2 hours ago

For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Catton Candy contain cancer Will there be a ban in Karnataka
ಬೆಂಗಳೂರು4 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ8 hours ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ5 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ6 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ6 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

ಟ್ರೆಂಡಿಂಗ್‌