ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಕಿರಾಣಿ ಅಂಗಡಿಯೊಂದು ಆಕಸ್ಮಿಕವಾಗಿ ಹುಟ್ಟಿಕೊಂಡ ಬೆಂಕಿಯಿಂದ (Fire Accident) ಹೊತ್ತಿ ಉರಿದಿದೆ.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡಿದ್ದ ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ಘಟನೆಯಲ್ಲಿ ಅಕ್ಕಿ ಚೀಲ, ಬೇಳೆಕಾಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಕಿರಾಣಿ ವಸ್ತುಗಳು ಸೇರಿದಂತೆ ಅಂಗಡಿಯಲ್ಲಿ ಬಳಸಲಾಗುತ್ತಿದ್ದ ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ.
ಬೆಳಗಿನ ಜಾವ ಅಂಗಡಿಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದನ್ನು ಸ್ಥಳೀಯರು ಗಮನಿಸಿದ್ದು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಅಂದಾಜಿಸಿದ್ದಾರೆ. ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | luxury homes | ಉದ್ಯಮಿಗಳು, ಬಾಲಿವುಡ್ ತಾರೆಯರಿಂದ 7,500 ಕೋಟಿ ರೂ. ಮೌಲ್ಯದ ಐಷಾರಾಮಿ ಬಂಗಲೆಗಳ ಖರೀದಿ